Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಿಂಟಲ್ ಬಿದ್ದು ವಿದ್ಯಾರ್ಥಿ ಮೃತ್ಯು...

ಲಿಂಟಲ್ ಬಿದ್ದು ವಿದ್ಯಾರ್ಥಿ ಮೃತ್ಯು ಪ್ರಕರಣ: ಪಾವತಿಯಾಗದ ಪರಿಹಾರ; ಡಿಸಿ ವಾಹನ, ಸೊತ್ತು ಜಪ್ತಿಗೆ ಆದೇಶ

ವಾರ್ತಾಭಾರತಿವಾರ್ತಾಭಾರತಿ25 Jan 2019 9:22 PM IST
share
ಲಿಂಟಲ್ ಬಿದ್ದು ವಿದ್ಯಾರ್ಥಿ ಮೃತ್ಯು ಪ್ರಕರಣ: ಪಾವತಿಯಾಗದ ಪರಿಹಾರ; ಡಿಸಿ ವಾಹನ, ಸೊತ್ತು ಜಪ್ತಿಗೆ ಆದೇಶ

ಪುತ್ತೂರು, ಜ. 25: 9 ವರ್ಷಗಳ ಹಿಂದೆ ಪುತ್ತೂರಿನ ಕಬಕ ವಿದ್ಯಾಪುರ ಎಂಬಲ್ಲಿನ ಸರ್ಕಾರಿ ಶಾಲೆಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಅಕ್ಷರ ದಾಸೋಹ ಕಟ್ಟಡದ ಲಿಂಟಲ್ ಕುಸಿದು ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆಗೆ ಸಂಬಂಧಿಸಿ ಮೃತರ ಕುಟುಂಬಸ್ಥರಿಗೆ ಪರಿಹಾರ ಒದಗಿಸುವಂತೆ ನ್ಯಾಯಾಲಯ ನೀಡಿದ ಆದೇಶ ಜಾರಿಯಾಗದ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿಗಳ ವಾಹನ ಮತ್ತು ಕಚೇರಿಯ ಚರ ಸೊತ್ತುಗಳನ್ನು ಜಪ್ತಿ ಮಾಡುವಂತೆ ಪುತ್ತೂರು ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ನೀಡಿದೆ.

2010 ಮಾ. 4ರಂದು ವಿದ್ಯಾಪುರ ಸರ್ಕಾರಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಶಾರುಖ್ ಖಾನ್(14) ಎಂಬವರ ತಲೆಯ ಮೇಲೆ ಕಟ್ಟಡದ ಲಿಂಟಲ್  ಕುಸಿದು ಬಿದ್ದು ಮೃತಪಟ್ಟಿದ್ದರು. ಈ ಬಗ್ಗೆ ಬಾಲಕನ ತಂದೆ ಅಬ್ದುಲ್ ಖಾದರ್ ಸರ್ಕಾರಿ ಶಾಲೆ ಮತ್ತು ಕಟ್ಟಡ ನಿರ್ಮಾಣದ ಗುತ್ತಿಗೆದಾರರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಿ, ಪರಿಹಾರ ಕೋರಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ್ದ ಪುತ್ತೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ಬಾಲಕನ ಹೆತ್ತವರಿಗೆ ಸರ್ಕಾರ 5 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿತ್ತು. ಅದೇಶದ ವಿರುದ್ಧ ಸರ್ಕಾರ ಮತ್ತು ಗುತ್ತಿಗೆದಾರ ನ್ಯಾಯಾಲಯಕ್ಕೆ ಅಪೀಲು ಸಲ್ಲಿಸಿದ್ದರು. ಗುತ್ತಿಗೆದಾರರ ಅಪೀಲನ್ನು ನ್ಯಾಯಾಲಯ ಮಾನ್ಯ ಮಾಡಿತ್ತು. ಆದರೆ ಸರ್ಕಾರದ ಪರ ಸಲ್ಲಿಸಲಾಗಿದ್ದ ಅಪೀಲನ್ನು ವಜಾಗೊಳಿಸಿ ಸೂಚಿತ ಪರಿಹಾರವನ್ನು ಬಡ್ಡಿ ಸಮೇತವಾಗಿ ಪಾವತಿಸುವಂತೆ ಸೂಚಿಸಿತ್ತು. 

ಸರ್ಕಾರ ತೀರ್ಪು ನೀಡಿ 8 ತಿಂಗಳು ಕಳೆದರೂ ಸರ್ಕಾರದಿಂದ ಪರಿಹಾರ ಮೊತ್ತ ಬಿಡುಗಡೆಯಾಗದ ಕಾರಣ ಅರ್ಜಿದಾರರು ಅಮಲ್ಜಾರಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯವು ದ.ಕ. ಜಿಲ್ಲಾಧಿಕಾರಿಗಳು ಬಳಸುವ ವಾಹನ ಮತ್ತು ಕಚೇರಿಯ ಸೊತ್ತುಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ. 

ಅರ್ಜಿದಾರರ ಪರವಾಗಿ ವಕೀಲರಾದ ಅರುಣ್ ಬಿ.ಕೆ ಮತ್ತು ಮಂಗಳೂರಿನ ಇಬ್ರಾಹಿಂ ಕೆ.ಎಸ್ ವಾದಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X