Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಟೋಲ್‍ನಲ್ಲಿ ಸ್ಥಳೀಯರಿಗೆ ವಿನಾಯಿತಿ...

ಟೋಲ್‍ನಲ್ಲಿ ಸ್ಥಳೀಯರಿಗೆ ವಿನಾಯಿತಿ ಒತ್ತಾಯಿಸಿ ಪ್ರತಿಭನೆ: ಲಾಲಾಜಿ ಮೆಂಡನ್, ಐವನ್ ಡಿಸೋಜ ಭೇಟಿ

ವಾರ್ತಾಭಾರತಿವಾರ್ತಾಭಾರತಿ25 Jan 2019 10:49 PM IST
share

ಪಡುಬಿದ್ರಿ, ಜ. 25: ಪಡುಬಿದ್ರಿಯಲ್ಲಿ 19 ದಿನಗಳಿಂದ ಹೆಜಮಾಡಿ ಟೋಲ್‍ನಲ್ಲಿ ಸ್ಥಳೀಯ ವಾಹನಗಳಿಗೆ ಟೋಲ್ ವಿನಾಯಿತಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸ್ಥಳಕ್ಕೆ ಶುಕ್ರವಾರ ಶಾಸಕ ಲಾಲಾಜಿ ಮೆಂಡನ್ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಶಾಸಕ ಲಾಲಾಜಿ ಮೆಂಡನ್ ಮಾತನಾಡಿ, ಪಡುಬಿದ್ರಿ, ಪಾದೆಬೆಟ್ಟು ಭಾಗದ ವಾಹನಗಳಿಗೂ ಮುಕ್ತವಾಗಿ ಬಿಡಬೇಕೆಂಬುದನ್ನು ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿದ್ದೇನೆ. ಮೊನ್ನೆಯ ಸಭೆಯಲ್ಲೂ ಅಧಿಕಾರಿಗಳಿರದೇ ಸಭೆಯೇ ಅಪೂರ್ಣವಾಗಿತ್ತು. ಮುಂದಿನವಾರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇನ್ನೊಂದು ಸಭೆ ಕರೆಯಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದೇನೆ. ಅದರಲ್ಲಿಯೂ ತಮ್ಮ ಸಂಘಟಿತ ಹೋರಾಟಕ್ಕೆ ಸಕಾರಾತ್ಮಕ ಫಲಿತಾಂಶವು ಬಾರದಿದ್ದಲ್ಲಿ ಮುಂದಿನ ದಿನಗಳಲ್ಲಿ ಪಡುಬಿದ್ರಿ ಬಂದ್‍ಗೂ ಕರೆ ನೀಡಲಾಗುವುದು ಎಂದೂ ಶಾಸಕರು ಈ ಸಂದರ್ಭದಲ್ಲಿ ಹೇಳಿದರು.

ಸೋಮವಾರ ಮುಖ್ಯಮಂತ್ರಿಗಳೊಂದಿಗೆ ಚರ್ಚೆ: ಐವನ್ ಡಿಸೋಜ ಮಾತನಾಡಿ, ಸೋಮವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ರೊಡಗೂಡಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಟೋಲ್ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಹೇಳಿದರಲ್ಲದೆ ಮುಖ್ಯ ಕಾರ್ಯದರ್ಶಿಯವರ ಜತೆಗೂ ಚರ್ಚಿಸುವುದಾಗಿ ಧರಣಿ ನಿರತರಿಗೆ ಭರವಸೆ ನೀಡಿದರು.

ಕೇಂದ್ರ ಹೊಣೆ: ಅವಿಭಜಿತ ದಕ ಜಿಲ್ಲೆಯಲ್ಲಿ ರಸ್ತೆ ಕಾಮಗಾರಿ ಪೂರ್ತಿಗೊಳಿಸದೆ ಅಲ್ಲಲ್ಲಿ ಸುಂಕ ವಸೂಲಾತಿ ಮಾಡುತ್ತಿರುವ ಟೋಲ್ ಪ್ಲಾಝಾಗಳ ದುಂಡಾವರ್ತನೆಗೆ ಕೇಂದ್ರ ಸರ್ಕಾರವೇ ನೇರ ಹೊಣೆ. ಸ್ಥಳೀಯ ಸಂಸದರು ಈ ಬಗ್ಗೆ ಮೌನವಾಗಿರುವುದು ತರವಲ್ಲ. ಟೋಲ್ ಸಮಸ್ಯೆಯನ್ನು ಸಂಸದರು ಮುಂದೆ ನಿಂತು ಶೀಘ್ರ ಬಗೆಹರಿಸದಿದ್ದಲ್ಲಿ ಸಂಸದರ ವಿರುದ್ಧವೇ ಹೋರಾಟ ನಡೆಸಬೇಕಾದೀತು ಎಂದು ರಾಜ್ಯ ಸರ್ಕಾರದ ಮುಖ್ಯ ಸಚೇತಕ ಐವನ್ ಡಿಸೋಜಾ ಎಚ್ಚರಸಿದ್ದಾರೆ.

ಎಚ್ಚರಿಕೆ: ಅಮರಣಾಂತ ಉಪವಾಸ, ಮುಖ್ಯಮಂತ್ರಿಗೆ ಕರಿಪತಾಕೆ ನಮಗೆ ನ್ಯಾಯ ಬೇಕು. ಜಿಲ್ಲಾಧಿಕಾರಿ ಸಮಸ್ಯೆಯನ್ನು ಬಗೆಹರಿಸಬೇಕಿದೆ. ಮತ್ತಷ್ಟು ನಾವು ಕಾಯಲು ಸಿದ್ಧರಿಲ್ಲ. ವಾರಾಂತ್ಯಕ್ಕೆ ತಮಗೆ ಉತ್ತರವು ಬಾರದಿದ್ದಲ್ಲಿ ಮುಂದಿನ ಭಾನುವಾರದಿಂದ ಮಗದೊಮ್ಮೆ ಆಮರಣಾಂತ ಉಪವಾಸವನ್ನು ಕೈಗೊಳ್ಳುವುದಾಗಿಯೂ, ಫೆಬ್ರವರಿ 3ರಂದು ಜಿಲ್ಲೆಗೆ ಆಗಮಿಸಲಿರುವ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಕಪ್ಪು ಬಾವುಟವನ್ನೂ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ಯು ಪ್ರದರ್ಶಿಸಲಿದೆ ಎಂದು ಕರವೇ ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮ್ಮದ್ ಎಚ್ಚರಿಸಿದರು.

ಪಡುಬಿದ್ರಿ ನಾಗರಿಕ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನವೀನ್‍ಚಂದ್ರ ಜೆ.ಶೆಟ್ಟಿ, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ತಾಲ್ಲೂಕು ಪಂಚಾಯಿತಿ ಸದಸ್ಯರಾದ ದಿನೇಶ್ ಕೋಟ್ಯಾನ್, ನೀತಾ ಗುರುರಾಜ್, ವೈ.ಸುಧೀರ್ ಕುಮಾರ್, ವಿಶ್ವಾಸ್ ವಿ.ಅಮೀನ್, ಲೋಕೇಶ್ ಕಂಚಿನಡ್ಕ, ನವೀನ್ ಎನ್.ಶೆಟ್ಟಿ, ಮಿಥುನ್ ಆರ್. ಹೆಗ್ಡೆ, ಅಬ್ದುಲ್ ಅಝೀಝ್ ಹೆಜಮಾಡಿ, ಎಮ್. ಎಸ್ ಸಯ್ಯದ್ ನಿಜಾಮ್, ಹಮೀದ್ ಹೆಜ್ಮಾಡಿ, ಗಣೇಶ್ ಮೆಂಡನ್, ಆಸಿಫ್ ಆಪತ್ಬಾಂಧವ, ಎಮ್.ಪಿ.ಮೊೈದಿನಬ್ಬ, ಅಬ್ದುಲ್ ಅಜೀಜ್, ಹಸನ್ ಬಾವಾ, ಬುಡಾನ್ ಸಾಹೇಬ್, ಸುಲೈಮಾನ್ ಕಂಚಿನಡ್ಕ, ರಹೀಂ ಕಂಚಿನಡ್ಕ, ನಝೀರ್ ಕಂಚಿನಡ್ಕ, ಯೂಸುಫ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X