Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಖ್ಯಮಂತ್ರಿ ಕರೆದಿದ್ದ ‘ರೈತರ ಸಭೆ’...

ಮುಖ್ಯಮಂತ್ರಿ ಕರೆದಿದ್ದ ‘ರೈತರ ಸಭೆ’ ಬಹಿಷ್ಕರಿಸಿದ ರೈತ ಸಂಘ

ವಾರ್ತಾಭಾರತಿವಾರ್ತಾಭಾರತಿ25 Jan 2019 11:02 PM IST
share
ಮುಖ್ಯಮಂತ್ರಿ ಕರೆದಿದ್ದ ‘ರೈತರ ಸಭೆ’ ಬಹಿಷ್ಕರಿಸಿದ ರೈತ ಸಂಘ

ಬೆಂಗಳೂರು, ಜ.25: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕರೆದಿದ್ದ ‘ರೈತರ ಸಭೆ’ಯನ್ನು ಬಹಿಷ್ಕರಿಸಿ, ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ರೈತರ ಸಮಗ್ರ ಅಭಿವೃದ್ಧಿಗೆ ಪೂರಕವಾದ ವಿವಿಧ ರೈತಪರ ಯೋಜನೆಗಳನ್ನು ಜಾರಿಗೊಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.

ಶುಕ್ರವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪಾಧ್ಯಕ್ಷ ರಾಮು ಚನ್ನಪಟ್ಟಣ, ಈ ಸಾಲಿನ ಆಯವ್ಯಯ ಮಂಡನೆಗೆ ಪೂರ್ವಭಾವಿಯಾಗಿ ರೈತ ಮುಖಂಡರ ಸಭೆ ಕರೆಯಲಾಗಿತ್ತು. ಇಂತಹ ಸಭೆಗಳಲ್ಲಿ ಹಲವು ಬಾರಿ ಭಾಗವಹಿಸಿ, ರೈತಪರ ಯೋಜನೆಗಳ ಬಗ್ಗೆ ಸಲಹೆ ನೀಡಿದ್ದರೂ ಸರಕಾರ ಗಂಭೀರವಾಗಿ ಪರಿಗಣಿಸಿಲ್ಲ. ವಿವಿಧ ಚಳವಳಿ ನಡೆಸಿ ಸರಕಾರಕ್ಕೆ ಒತ್ತಾಯಪತ್ರ ಸಹ ನೀಡಲಾಗಿದೆ. ಆದರೂ ನಮ್ಮ ಬೇಡಿಕೆಗಳನ್ನು ಉಪೇಕ್ಷೆ ಮಾಡಿದ್ದರಿಂದ ಇಂದಿನ ಸಭೆಯಿಂದ ದೂರ ಉಳಿದಿದ್ದೇವೆ ಎಂದರು.

ಸರಕಾರ 132 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಆದರೆ, ನೀರಾವರಿ ಯೋಜನೆ ಜಾರಿ, ಕೆರೆ ಹೂಳು ತೆಗೆಸಿ ನೀರು ತುಂಬಿಸುವ ಕೆಲಸ, ಬಡ ರೈತರ ಬದುಕು ಹಸನುಗೊಳಿಸುವ ಯೋಜನೆಗಳನ್ನು ಹಾಕಿಕೊಳ್ಳಲಿಲ್ಲ. ಸಚಿವರು, ಶಾಸಕರು ಬರ ಪರಿಶೀಲನೆಗೆ ಬಂದು 10 ನಿಮಿಷದಲ್ಲಿ ಸಮೀಕ್ಷೆ ನಡೆಸಿ ತೆರಳುತ್ತಾರೆ. ಇಂತಹ ಪರಿಶೀಲನೆಯಿಂದ ರೈತರ ಸಮಸ್ಯೆಗಳು, ಸವಾಲುಗಳ ಅರಿವು ಉಂಟಾಗುತ್ತದೆಯೇ ಎಂದು ಪ್ರಶ್ನಿಸಿದರು.

ಹಾಸನ ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಏತ ನೀರಾವರಿಗಾಗಿ ಕೋಟಿಗಟ್ಟಲೆ ಹಣ ಬಿಡುಗಡೆ ಮಾಡಲಾಗಿದೆ. ಆದರೆ, ಏತ ನೀರಾವರಿ ಯೋಜನೆ ಪೂರ್ಣಗೊಂಡಿಲ್ಲ. ಕಳೆದ 20 ವರ್ಷಗಳಿಂದ ವಿವಿಧ ಭಾಗಗಳಲ್ಲಿ ಏತ ನೀರಾವರಿ ಯೋಜನೆ ನನೆಗುದಿಗೆ ಬಿದ್ದಿದೆ. ಪ್ರತಿ ಜಿಲ್ಲಾವಾರು ರೈತ ಮುಖಂಡರೊಂದಿಗೆ ಸಭೆ ನಡೆಸಬೇಕು. ಆದರೆ ಈವರೆಗಿನ ಸರಕಾರಗಳು ಚರ್ಚಿಸಿ ಸಮಸ್ಯೆಗಳ ನಿವಾರಣೆಗೆ ಮುತುವರ್ಜಿ ವಹಿಸಲಿಲ್ಲ. ಅವರಿಗೆ ರೈತರು, ಬಡವರು, ಕೂಲಿ ಕಾರ್ಮಿಕರಿಗಿಂತ ಅಧಿಕಾರದ ವ್ಯಾಮೋಹವೇ ಹೆಚ್ಚಾಗಿದೆ ಎಂದರು.

ಸಂಘದ ಜಿ.ಟಿ.ರಾಮಸ್ವಾಮಿ ಮಾತನಾಡಿ, ಕೃಷಿ ಮತ್ತು ಕೃಷಿ ಪೂರಕ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿ ಸಬಲೀಕರಣಗೊಳಿಸಲು ಸಮಗ್ರ ಗ್ರಾಮೀಣ ಉದ್ಯೋಗ ಭರವಸೆ ನೀತಿ ಜಾರಿಗೊಳಿಸಬೇಕು. ಅಲ್ಲದೆ, ಕೇಂದ್ರ ಸರಕಾರ ಕೃಷಿ ಉತ್ಪನ್ನಗಳು ಮತ್ತು ಕೃಷಿ ಯಂತ್ರೋಪಕರಣಗಳು, ಬಿಡಿ ಭಾಗಗಳು, ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಮೇಲಿನ ಜಿಎಸ್‌ಟಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಈ ಸಂಬಂಧ ರಾಜ್ಯ ಸರಕಾರ ಕೇಂದ್ರ ಸರಕಾರಕ್ಕೆ ಪತ್ರ ಬರೆದು ರೈತರ ಮೇಲಿನ ಹೊರೆಯನ್ನು ಕಡಿಮೆ ಮಾಡಬೇಕು. ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಕಾಲಮಿತಿಯೊಳಗೆ ಮುಗಿಸಬೇಕು. ಸಣ್ಣ ನೀರಾವರಿಗೆ ಹೆಚ್ಚು ಒತ್ತು ನೀಡಬೇಕು. ಕೆರೆ ಕಟ್ಟೆಗಳನ್ನು ಶಾಶ್ವತವಾಗಿ ಸಂರಕ್ಷಿಸಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು ಎಂದರು.

ಕಳೆದ 7-8 ವರ್ಷದಿಂದ ಸೋಲಾರ್ ಅಳವಡಿಕೆಗೆ ಸಬ್ಸಿಡಿ ಸಹ ನೀಡುತ್ತಿಲ್ಲ. ಸೋಲಾರ್ ವ್ಯವಸ್ಥೆ ಅಳವಡಿಸಿಕೊಳ್ಳಲು 4ರಿಂದ 5 ಲಕ್ಷ ಖರ್ಚಾಗುತ್ತದೆ. ಬಡ ರೈತ ಇದನ್ನು ಭರಿಸಲು ಕಷ್ಟಸಾಧ್ಯ. ರಾಜ್ಯ ಸರಕಾರ ಪಂಪ್‌ಸೆಟ್‌ಗಳಿಗೆ ಸೋಲಾರ್ ಅನ್ನು ಅಳವಡಿಸಲು ಹೆಚ್ಚು ಸಹಾಯಧನ ನೀಡಬೇಕು ಎಂದು ಒತ್ತಾಯಿಸಿದರು.

ಸಂಘದ ಸಂಘಟನಾ ಕಾರ್ಯದರ್ಶಿ ಎ.ಎಂ.ಮಹೇಶ್‌ಪ್ರಭು, ಬಲ್ಲೂರು ರವಿಕುಮಾರ್, ಪಿ.ಗೋಪಾಲ್ ಉಪಸ್ಥಿತರಿದ್ದರು.

ಮುಖ್ಯಮಂತ್ರಿಗಳು ನುಡಿದಂತೆ ರೈತರ ಎಲ್ಲ ಬೆಳೆ ಸಾಲ ಸೇರಿದಂತೆ ವಿವಿಧ ಸಾಲಗಳನ್ನು ಮನ್ನಾ ಮಾಡಬೇಕು. ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಗಳ ಸಾಲ ರದ್ದುಪಡಿಸಬೇಕು. ರೈತ ಯುವಕರು ಉದ್ಯೋಗ ಅರೆಸಿ ನಗರಕ್ಕೆ ವಲಸೆ ಹೋಗುವುದನ್ನು ತಡೆಗಟ್ಟಲು ದೂರದೃಷ್ಟಿಯ ಯೋಜನೆಗಳನ್ನು ರೂಪಿಸಬೇಕು.

-ಜಿ.ಟಿ.ರಾಮಸ್ವಾಮಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಉಪಾಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X