Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜಕಾಲುವೆ ತೆರವು ಕಾರ್ಯಾಚರಣೆ: ಇಬ್ಬರು...

ರಾಜಕಾಲುವೆ ತೆರವು ಕಾರ್ಯಾಚರಣೆ: ಇಬ್ಬರು ಖಾಯಂ ಭೂ ಮಾಪಕರ ನೇಮಕ

ವಾರ್ತಾಭಾರತಿವಾರ್ತಾಭಾರತಿ25 Jan 2019 11:07 PM IST
share

ಬೆಂಗಳೂರು, ಜ.25: ರಾಜಕಾಲುವೆಗಳ ಒತ್ತುವರಿ ಕಾರ್ಯಾಚರಣೆಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಇಬ್ಬರು ಖಾಯಂ ಭೂ ಮಾಪಕರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಪ್ರಭಾವಿಗಳು ಹಾಗೂ ಗಣ್ಯರ ಹೆಸರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಪಾಲಿಕೆ ಕಾರ್ಯಾಚರಣೆ ಸ್ಥಗಿತಗೊಳಿಸಿತ್ತು ಎಂದು ಆರೋಪಿಸಲಾಗಿತ್ತು. ಹೀಗಾಗಿ, ಸರಕಾರ ಇಬ್ಬರು ಖಾಯಂ ಭೂಮಾಪಕರನ್ನು ನಿಯೋಜಿಸಿದೆ.

ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಿದ್ದರಿಂದ ಭಾರೀ ಮಳೆಯಾದಾಗ ಕೆಲವು ಬಡಾವಣೆಗಳು ಪ್ರವಾಹಕ್ಕೆ ತುತ್ತಾಗಿದ್ದವು. ಆ ಹಿನ್ನೆಲೆಯಲ್ಲಿ ಪಾಲಿಕೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿತ್ತು. ಆದರೆ, ಒತ್ತುವರಿಯಲ್ಲಿ ಪ್ರಭಾವಿಗಳ ಹೆಸರು ಕೇಳಿಬಂದ ಕೂಡಲೇ ನಾನಾ ಕಾರಣಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ಟೀಕೆಗಳಿಗೆ ಗುರಿಯಾಗಿತ್ತು.

ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ಇತ್ತೀಚೆಗೆ ನಗರದಲ್ಲಿ ಕಾರ್ಯಾಚರಣೆ ಆರಂಭಿಸುವುದಾಗಿ ಹೇಳಿಕೆ ನೀಡಿದ್ದರು. ಅದರ ಭಾಗವಾಗಿ ಪಾಲಿಕೆಗೆ ಸರ್ವೆ ಹಾಗೂ ಮಾರ್ಕಿಂಗ್‌ಗಾಗಿ ಇಬ್ಬರು ಭೂ ಮಾಪಕರನ್ನು ನೇಮಕ ಮಾಡಿದೆ. ಶೀಘ್ರದಲ್ಲಿಯೇ ಕಾರ್ಯಾಚರಣೆ ಆರಂಭವಾಗಲಿದ್ದು, ಅಧಿಕಾರಿಗಳು ಕಾರ್ಯಾಚರಣೆಯನ್ನು ನಿವೇಶನಗಳಿಗೆ ಸೀಮಿತಗೊಳಿಸುತ್ತಾರ ಅಥವಾ ಪಟ್ಟಿಯಲ್ಲಿರುವ ಅಪಾರ್ಟ್‌ಮೆಂಟ್, ಬೃಹತ್ ಕಟ್ಟಡಗಳನ್ನೂ ನೆಲಸಮ ಮಾಡುತ್ತಾರಾ ಎಂಬುದು ನೋಡಬೇಕಿದೆ.

ಸಂಶಯ ಮೂಡಿಸಿದ ಅಂಕಿ-ಅಂಶ: ಬಿಬಿಎಂಪಿ ವ್ಯಾಪ್ತಿಯ 800 ಕಿ.ಮೀ. ಉದ್ದದ ರಾಜಕಾಲುವೆಯ 1953 ಕಡೆ ಒತ್ತುವರಿಯಾಗಿದ್ದು, 2016ರಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸುವ ಮೊದಲೇ ಪಾಲಿಕೆ ಅಧಿಕಾರಿಗಳು 820 ಕಡೆ ತೆರವು ಕಾರ್ಯ ಕೈಗೊಂಡಿದ್ದರು. ಉಳಿದ 1,133 ಪ್ರಕರಣಗಳ ಪೈಕಿ ಎರಡು ವರ್ಷಗಳಲ್ಲಿ 571 ಪ್ರಕರಣಗಳಲ್ಲಿ ಒತ್ತುವರಿ ತೆರವುಗೊಳಿಸಿದ್ದು, 562 ಕಡೆ ತೆರವು ಬಾಕಿಯಿದೆ ಎಂದು ಸ್ವತಃ ಪಾಲಿಕೆ ಆಯುಕ್ತರು ಕೌನ್ಸಿಲ್ ಸಭೆಯಲ್ಲಿ ಹೇಳಿದ್ದರು.

ಆದರೆ, ಇತ್ತೀಚೆಗೆ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪಾಲಿಕೆ ಅಧಿಕಾರಿಗಳು ಸಲ್ಲಿಸಿರುವ ವರದಿಯಲ್ಲಿ 2,515 ರಾಜಕಾಲುವೆ ಒತ್ತುವರಿ ಪ್ರಕರಣಗಳಿವೆ ಎಂದು ತಿಳಿಸಲಾಗಿದೆ. ಜತೆಗೆ ಈವರೆಗೆ ಕೇವಲ 428 ಪ್ರಕರಣಗಳನ್ನು ತೆರವುಗೊಳಿಸಿದ್ದು, 450 ಪ್ರಕರಣಗಳಲ್ಲಿ ಸರ್ವೇ ಪೂರ್ಣಗೊಂಡಿದೆ. 2018-19ನೇ ಸಾಲಿನಲ್ಲಿ 51 ಪ್ರಕರಣಗಳಲ್ಲಿ ಒತ್ತುವರಿ ತೆರವುಗೊಳಿಸಿದ್ದು, ಇನ್ನೂ 1637 ಪ್ರಕರಣಗಳಲ್ಲಿ ತೆರವು ಬಾಕಿಯಿದೆ ಎಂಬ ಮಾಹಿತಿ ನೀಡಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X