ಜೆಮ್ ಪಬ್ಲಿಕ್ ಶಾಲೆಯಲ್ಲಿ ಗಣರಾಜ್ಯೋತ್ಸವ

ಬಂಟ್ವಾಳ, ಜ. 26: ಗಣರಾಜೋತ್ಸವದ ಅಂಗವಾಗಿ ಗೋಳ್ತಮಜಲು ಜೆಮ್ ಪಬ್ಲಿಕ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣ ನೆರೆವೇರಿಸಿದರು. ಈ ಸಂದರ್ಭದಲ್ಲಿ ಗೋಳ್ತಮಜಲು ಫಾತಿಮ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಮುಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು, ಎಂ ಫ್ರೆಂಡ್ಸ್ ಸದಸ್ಯ ಆಶಿಕ್ ಕುಕ್ಕಾಜೆ, ಪ್ರೌಢಶಾಲಾ ಮುಖ್ಯ ಶಿಕ್ಷಕ ನಿರಂಜನ್ ಡಿ., ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಮುಹಮ್ಮದ್ ರಫೀಕ್ ಉಪಸ್ಥಿತರಿದ್ದರು.
ಸಹ ಶಿಕ್ಷಕಿಯರಾದ ರಮ್ಯ ಸ್ವಾಗತಿಸಿ, ಮೀನಾ ವಂದಿಸಿ, ಯಕ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿದರು.
Next Story





