Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂವಿಧಾನದಲ್ಲಿ ಬದಲಾವಣೆಗೆ ಅವಕಾಶವಿದೆ:...

ಸಂವಿಧಾನದಲ್ಲಿ ಬದಲಾವಣೆಗೆ ಅವಕಾಶವಿದೆ: ಸಹಾಯಕ ಆಯುಕ್ತ ಸಾಜಿದ್ ಮುಲ್ಲಾ

ತಾಲೂಕಾ ಕ್ರೀಡಾಂಗಣದಲ್ಲಿ 70ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಧ್ವಜಾರೋಹಣ

26 Jan 2019 7:13 PM IST
share
ಸಂವಿಧಾನದಲ್ಲಿ ಬದಲಾವಣೆಗೆ ಅವಕಾಶವಿದೆ: ಸಹಾಯಕ ಆಯುಕ್ತ ಸಾಜಿದ್ ಮುಲ್ಲಾ

ಭಟ್ಕಳ, ಜ. 26: ಸಂವಿಧಾನ ಎನ್ನುವುದು ನಿಂತ ನೀರಲ್ಲ ಅದು ಕಾಲಕ್ಕೆ ತಕ್ಕಂತೆ ಬದಲಾವಣೆಗೆ ಒಳಪಟ್ಟಿದೆ. ಮುಂದೆಯೂ ಬದಲಾವಣೆಗೆ ಅವಕಾಶವಿದ್ದು ಸಂವಿಧಾನದ ಆಶಯದಂತೆ ಪ್ರತಿಯೊಬ್ಬ ಭಾರತೀಯ ಪ್ರಜೆ ತನ್ನ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಭಟ್ಕಳ ಉಪವಿಭಾಗದ ದಂಡಾಧಿಕಾರಿ ಹಾಗೂ ಸಹಾಯಕ ಆಯುಕ್ತ ಸಾಜಿದ್ ಆಹ್ಮದ್ ಮುಲ್ಲಾ ಹೇಳಿದರು. 

ಅವರು ನಗರದ ನವಾಯತ್ ಕಾಲೋನಿಯಲ್ಲಿರುವ ವೈಎಂಎಸ್‍ಎ ತಾಲೂಕು ಕ್ರೀಡಾಂಗಣದಲ್ಲಿ ಭಟ್ಕಳ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಭಟ್ಕಳ ಹಾಗೂ ಪಟ್ಟಣ ಪಂಚಾಯತ್ ಜಾಲಿ ಇವರ ಸಂಯುಕ್ತ ಆಶ್ರಯದಲ್ಲಿ 70ನೇ ಗಣರಾಜ್ಯೋತ್ಸದ ದ್ವಜಾರೋಹಣ ನೆರವೇರಿಸಿ ಮಾತನಾಡಿದರು. 

ಭಾರತ ಒಂದು ಅಖಂಡ ದೇಶ. ಭಾರತಕ್ಕೆ ನೂರಾರು ವರ್ಷವಿದೆ ಬ್ರಿಟಿಷ್ ಸಂಕೋಲೇಯಿಂದ ಮುಕ್ತಗೊಂಡು ಸ್ವಾತಂತ್ರ್ಯ ಪಡೆದ ನಂತರ 1950 ಜನವರಿ 26 ರಂದು ವಿಶೇಷವಾಗಿ ಸ್ವಾತಂತ್ರ್ಯ ಪಡೆದು ನಮ್ಮ ರಾಷ್ಟ್ರಕ್ಕೆ ಭುನಾದಿಯಾಗಿ ದೇಶಕ್ಕೆ ತನ್ನದೇಯಾದ ಒಂದು ಸುಭದ್ರವಾದ ಆಡಳಿತ ಸರ್ಕಾರ ನೀಡುವುದಕ್ಕೆ  ಭಾರತ ಸಂವಿಧಾನ ಜಾರಿಗೆ ಬಂದಿದೆ. ಬೇರೆ ದೇಶಕ್ಕೆ ಹೋಲಿಸಿದರೆ  ಭಾರತ ಯಾವುದೇ  ಕುಟುಂಬದ ರಾಜರ ಕೈ ವಶದಲಿಲ್ಲ. ಇಲ್ಲಿ ಗಣರಾಜ್ಯ ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಅವರಿಂದ ಆಯ್ಕೆಯಾದ ರಾಷ್ಟ್ರಪತಿಗಳು ನಮ್ಮ ದೇಶದ ಮುಖ್ಯಸ್ಥರಾಗಿರುತ್ತಾರೆ.  ಯಾವುದೇ ಕುಟುಂಬ ರಾಜಕಾರಣ, ರಾಜಕೀಯ ಅಥವಾ ರಾಜ ಮನೆತನಗಳು ಆಡಳಿತ ನಡೆಸುದಿಲ್ಲ ಇದು ನಾವು ಹೆಮ್ಮೆ ಪಡಬೇಕಾದ ವಿಷಯವಾಗಿದೆ. ದೇಶವು ಈಗಾಗಲೇ ಎಲ್ಲಾ ಕ್ಷೇತ್ರ ವಿಭಾಗದಲ್ಲಿಯೂ ಮುನ್ನುಗ್ಗುತ್ತಿದ್ದು, ಪ್ರಜೆಗಳಾದ ನಾವು ಸಹ ದೇಶದ ಅಭಿವೃದ್ಧಿಗೆ ಪೂರಕವಾಗುವಂತೆ ಬದುಕಬೇಕು. ಹಿರಿಯರು ನಮಗೆ ನೀಡಿದ ಸ್ವಾತಂತ್ರ್ಯದ ಕೊಡುಗೆಯನ್ನು ನಾವುಗಳು ಅದನ್ನು ವಿವೇಚನೆಯಿಂದ ಬಳಸಿ ಪ್ರಗತಿಯನ್ನು ಸಾಧಿಸಬೇಕು .ಯಾವ ಕಾಲದವರೆಗೂ ಸೂರ್ಯ ಚಂದ್ರ ಬೆಳೆಗುತ್ತಿರುತ್ತದೆಯೋ ಅಲ್ಲಿ ತನಕವೂ ನಮ್ಮ ಸಂವಿಧಾನ ಬೆಳೆಗುತ್ತಿರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಸುನೀಲ್ ನಾಯ್ಕ, ಇದು ಒಂದು ಅದ್ಭುತ ಅವಿಸ್ಮರಣೀಯ  ದಿನವಾಗಿದ್ದು. ಇಂದಿನ ಯುವಪೀಳಿಗೆ ಜ.26ರ ದಿನವನ್ನು ರಜಾ ದಿನವಾಗಿ ಕಳೆಯುತ್ತಿರುವುದು ದುಃಖದ ಸಂಗತಿಯಾಗಿದೆ. ಈ ದಿನಕ್ಕೊಸಕರ ನಮ್ಮ ಸ್ವಾತಂತ್ರ್ಯ ಹೋರಾಟಗಾರ ಅತ್ಯಧಿಕ ಶ್ರಮ ಹಾಗೂ ಬಲಿದಾನ ಮದ್ಯೆ ಇವತ್ತು ಈ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಈ ಒಂದು ದಿನವಾದರೂ ನಮ್ಮ ಹಿಂದಿನ  ಇತಿಹಾಸ ಹಾಗೂ ಸ್ವಾತಂತ್ರ್ಯ ಹೋರಾಟಗಾರನ್ನು ಸ್ಮರಿಸಬೇಕಾಗಿದೆ.ಇತಿಹಾಸ ಒಂದು ಮನೋರಂಜನೆಯ ವಸ್ತುವಾಗದೆ ಇಂದಿನ ಯುವ ಪೀಳಿಗೆ ಅದನ್ನು ಮನದಟ್ಟು ಮಾಡಿಕೊಂಡು ಈ ದಿನದಂದು ನೆನಪಿಸಿಕೊಳ್ಳಬೇಕು ಎಂದು ಹೇಳಿದರು.

ಧ್ವಜಾರೋಹಣ ನೆರವೇರಿಸಿದ ಬಳಿಕ ಸಹಾಯಕ ಆಯುಕ್ತ ಸಾಜಿದ್ ಅಹ್ಮದ್ ಮುಲ್ಲಾ ತೆರೆದ ವಾಹನದಲ್ಲಿ ಪೆರೇಡ್ ವೀಕ್ಷಣೆಗೆ ಮಾಡಿದರು.

ನಂತರ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳಿಗೆ, ಹಾಗೂ ಇಲಾಖಾವಾರು ಉತ್ತಮ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಿ ಗೌರವಿಸಲಾಯಿತು. 
ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿಗಳಿಂದ ಹಾಗೂ ಪೋಲೀಸ್ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳಿಂದ ಸುಂದರ ಪಥ ಸಂಚಲನ ನಡೆಯಿತು. 

ನಂತರ ಆಯ್ದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ  ಮಹಿಳೆಯ ಮೇಲೆ ಆಗುತ್ತಿರುವ ಅತ್ಯಾಚಾರದ ಕುತಿರ ಜಾಗೃತಿ ನೃತ್ಯರೂಪಕ ಎಲ್ಲರ ಗಮನ ಸೆಳೆಯಿತು. ಮತ್ತು ಅಂಜುಮನ್ ಶಾಲೆಯ  ವಿದ್ಯಾರ್ಥಿಗಳು ಮಾಡಿದ ಪಿರಾಮಿಡ್  ಆಕರ್ಷಣೆಯಾಗಿತ್ತು. ಹಾಗೂ ಸ್ನೇಹ ವಿಶೇಷ ಮಕ್ಕಳ ಮನರಂಜನೆ ಕಾರ್ಯಕ್ರಮ ಮತ್ತು ಪಥ ಸಂಚಲನ ಪ್ರಮುಖ ಆಕರ್ಷಣೆಯಾಗಿತ್ತು.

ಕಾರ್ಯಕ್ರಮದ ವೇದಿಕೆಯಲ್ಲಿ ತಹಶಿಲ್ದಾರರ ವಿ.ಎನ್.ಬಾಡಕರ್, ಪುರಸಭಾ ಅಧ್ಯಕ್ಷ ಮಹ್ಮದ್ ಸಾದಿಕ್ ಮಟ್ಟಾ, ಉಪಾಧ್ಯಕ್ಷ ಕೆ.ಎಂ.ಅಶ್ಫಾಖ್, ಜಾಲಿ ಪಟ್ಟಣ ಪಂ.ಅಧ್ಯಕ್ಷ ಆದಂ ಪಣಂಬೂರ್, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್ ಮುಂಜಿ, ಸಿ.ಪಿ.ಐ ಕೆ.ಎಲ್ ಗಣೇಶ  ಮುಂತಾದವರು ಉಪಸ್ಥಿತರಿದ್ದರು.

share
Next Story
X