Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಬರ ನಿರ್ವಹಣೆಗೆ 2,600 ಕೋಟಿ...

ರಾಜ್ಯದಲ್ಲಿ ಬರ ನಿರ್ವಹಣೆಗೆ 2,600 ಕೋಟಿ ಅನುದಾನ ನೀಡಲಾಗಿದೆ: ಕೃಷ್ಣಬೈರೇಗೌಡ

ಕೋಲಾರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ 70ನೇ ಗಣರಾಜ್ಯೋತ್ಸವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ26 Jan 2019 7:36 PM IST
share
ರಾಜ್ಯದಲ್ಲಿ ಬರ ನಿರ್ವಹಣೆಗೆ 2,600 ಕೋಟಿ ಅನುದಾನ ನೀಡಲಾಗಿದೆ: ಕೃಷ್ಣಬೈರೇಗೌಡ

ಕೋಲಾರ, ಜ. 26:  ರಾಜ್ಯದಲ್ಲಿ ಉಂಟಾಗಿರುವ ಬರ ನಿರ್ವಹಣೆಗೆ ಹಾಗೂ ಕುಡಿಯುವ ನೀರಿನ ಪೂರೈಕೆಗೆ 2,600 ಕೋಟಿ ಅನುದಾನವನ್ನು ಜಿಲ್ಲಾ ಪಂಚಾಯತ್‍ಗಳಿಗೆ ಬಿಡುಗಡೆ ಮಾಡಿದ್ದು, ಇದರಲ್ಲಿ ಈಗಾಗಲೇ 1600 ರಿಂದ 1800 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಇಂದು ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ 70 ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ 29 ಸಾವಿರ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಂಡಿದ್ದು,  ಈಗಾಗಲೇ 27 ಸಾವಿರ ಕಾಮಗಾರಿಗಳು ಪೂರ್ಣಗೊಂಡಿವೆ. ಕುಡಿಯುವ ನೀರಿನ ಸಮಸ್ಯೆ ಕಂಡುಬಂದ 2 ದಿನಗಳಲ್ಲಿ ಸಮಸ್ಯೆ ಬಗೆಹರಿಸಲು ಸೂಚನೆ ನೀಡಲಾಗಿದೆ.  ಸಮಸ್ಯೆ ಕಂಡುಬಂದಲ್ಲಿ ಖಾಸಗಿ ಬೋರ್‍ವೆಲ್‍ಗಳು ಅಥವಾ ಟ್ಯಾಂಕರ್ ಮೂಲಕ ನೀರನ್ನು ಒದಗಿಸಬೇಕು. ರಾಜ್ಯದಲ್ಲಿ 644 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಇದರಲ್ಲಿ 280 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗೂ 364 ಗ್ರಾಮಗಳಲ್ಲಿ ಖಾಸಗಿ ಬೋರ್‍ವೆಲ್‍ಗಳ ಮೂಲಕ ನೀರನ್ನು ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ 8.5 ಕೋಟಿ ಮಾನವದಿನಗಳ ಗುರಿಯಿತ್ತು. ಈಗಾಗಲೇ ಈ ಗುರಿಯನ್ನು ಮೀರಿ 7.88 ಕೋಟಿ ಮಾನವದಿನಗಳ ಸೃಜನೆ ಮಾಡಿದ್ದು, ಮಾರ್ಚ್ ಅಂತ್ಯದ ವೇಳೆಗೆ 10.5 ಕೋಟಿ ಮಾನವ ದಿನಗಳ ಸೃಜಿಸುವ ಗುರಿಯಿದೆ.  ಕೋಲಾರ ಜಿಲ್ಲೆಯಲ್ಲಿ 22.88 ಲಕ್ಷ ಮಾನವ ದಿನಗಳ ಗುರಿಯಿತ್ತು. ಈಗಾಗಲೇ 30.81 ಲಕ್ಷ ಮಾನವ ದಿನಗಳ ಸೃಜಿಸಿ, ಕೋಲಾರ ಜಿಲ್ಲೆ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ.  ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ 1800 ಕೋಟಿ ಅನುದಾನ ಬಾಕಿ ಬರಬೇಕಿದ್ದು, ಈ ಸಂಬಂಧ ರಾಜ್ಯದ ಸಂಸದರು, ಸಚಿವರು ಒಳಗೊಂಡಂತೆ 25 ಜನರ ತಂಡ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ ಅನುದಾನ ಬಿಡುಗಡೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಕೋಲಾರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಗೆ 2018-19 ನೇ ಸಾಲಿನಲ್ಲಿ ರೂ. 40.25 ಕೋಟಿಗಳು ಅನುದಾನ ಹಂಚಿಕೆಯಾಗಿದ್ದು, ಪ್ರಸಕ್ತ ಸಾಲಿಗೆ ಪ್ರಾರಂಭಿಕ ಶುಲ್ಕ ಒಳಗೊಂಡಂತೆ

ರೂ. 38.40 ಕೋಟಿಗಳು ಬಿಡುಗಡೆಯಾಗಿದ್ದು, ರೂ. 33.02 ಕೋಟಿಗಳು ವೆಚ್ಚ ಮಾಡಲಾಗಿದೆ. ಕೋಲಾರ ಜಿಲ್ಲಾ ವ್ಯಾಪ್ತಿಯಲ್ಲಿ ಇಲ್ಲಿಯವರೆಗೆ ಒಟ್ಟು 1110 ಶುದ್ಧ ಕುಡಿಯುವ ನೀರಿನ ಘಟಕಗಳು ಮುಂಜೂರಾಗಿದ್ದು, ಒಟ್ಟಾರೆ, 1073 ಘಟಕಗಳು ಪೂರ್ಣಗೊಂಡಿವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮೊದಲ ಹಂತದಲ್ಲಿ ಬರ ಘೋಷಣೆಯಾಗಿರುವ ತಾಲ್ಲೂಕುಗಳಿಗೆ ತಲಾ 1 ಕೋಟಿ, ಎರಡನೇ ಹಂತದಲ್ಲಿ ಬರ ಘೋಷಣೆಯಾಗಿರುವ ತಾಲ್ಲೂಕುಗಳಿಗೆ ತಲಾ 50 ಲಕ್ಷ ಹಾಗೂ ಬರ ಘೋಷಣೆಯಾಗದಿರುವ ತಾಲ್ಲೂಕುಗಳಿಗೆ 25 ಲಕ್ಷ ಅನುದಾನವನ್ನು ಕುಡಿಯುವ ನೀರಿನ ಬಳಕೆಗೆ ಶಾಸಕರುಗಳ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಿ ಬಳಸಲು ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದ ಬರ ನಿರ್ವಹಣೆಗೆ ಕೇಂದ್ರದಿಂದ 2,434 ಕೋಟಿ ಪರಿಹಾರವನ್ನು ನೀಡುವಂತೆ ಕೇಳಲಾಗಿದೆ. ಹಿಂಗಾರಿನಲ್ಲಿ 62 ತಾಲ್ಲೂಕುಗಳಲ್ಲಿ ಬರ ಘೋಷಣೆ ಮಾಡಿದ್ದು, ಬರ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಪರಿಹಾರ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಸರ್ಕಾರವು ರಾಜ್ಯದ ರೈತರ ನೆರವಿಗೆ ಧಾವಿಸಲು 2 ಲಕ್ಷದವರೆಗಿನ ಬೆಳೆ ಸಾಲಮನ್ನಾ ಮಾಡಿದ್ದು, ಕೋಲಾರ ಜಿಲ್ಲೆಯ ಸಹಕಾರಿ ಬ್ಯಾಂಕ್‍ನ 10,503 ರೈತರು ಹಾಗೂ ವಾಣಿಜ್ಯ ಬ್ಯಾಂಕುಗಳ 28,797 ರೈತರು ಇದರ ಪ್ರಯೋಜನ ಪಡೆಯಲಿದ್ದು, ಒಟ್ಟಾರೆ 400 ಕೋಟಿಗೂ ಹೆಚ್ಚು ಸಾಲಮನ್ನಾ ಪ್ರಯೋಜನವನ್ನು ಜಿಲ್ಲೆಯ ರೈತರು ಪಡೆಯಲಿದ್ದಾರೆ. ಮುಂದಿನ ಒಂದು ತಿಂಗಳೊಳಗೆ 8 ಸಾವಿರ ಕೋಟಿ ರೂಗಳನ್ನು ಸಾಲಮನ್ನಾಕ್ಕೆ ಸರ್ಕಾರದಿಂದ ಪಾವತಿ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆಕರ್ಷಕ ಪಥ ಸಂಚಲನ ಏರ್ಪಡಿಸಲಾಗಿತ್ತು. ವಿವಿಧ ಶಾಲಾ ಕಾಲೇಜು ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಾಯಿತು. ಪಥ ಸಂಚಲನದಲ್ಲಿ ಕಾಲೇಜು ವಿಭಾಗದಲ್ಲಿ ಸುಭಾಷ್ ಶಾಲಾ ತಂಡ ಪ್ರಥಮ ಸ್ಥಾನವನ್ನು, ಎನ್.ಸಿ.ಸಿ ಬಾಲಕರ ತಂಡ ದ್ವಿತೀಯ ಸ್ಥಾನವನ್ನು, ಎ.ಇ.ಎಸ್ ಸ್ಕೌಟ್ಸ್ ತಂಡ ತೃತೀಯ ಸ್ಥಾನವನ್ನು  ಹಾಗೂ ಶಾಲಾ ವಿಭಾಗದಲ್ಲಿ ಆರ್.ವಿ ಇಂಟರ್ ನ್ಯಾಷನಲ್ ಶಾಲೆ ಪ್ರಥಮ ಸ್ಥಾನವನ್ನು, ಮಹಿಳಾ ಸಮಾಜ ಶಾಲೆ ದ್ವಿತೀಯ ಸ್ಥಾನವನ್ನು, ಸುವರ್ಣ ಸೆಂಟ್ರಲ್ ಶಾಲೆ ತೃತೀಯ ಸ್ಥಾನವನ್ನು ಹಾಗೂ ವಿಶೇಷ ಸ್ಥಾನವನ್ನು ಅಂತರಗಂಗಾ ಶಾಲಾ ತಂಡ ಪಡೆದುಕೊಂಡಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಸಬ್ಸಿಡಿ ದರದಲ್ಲಿ 15 ಪ್ರವಾಸಿ ಟ್ಯಾಕ್ಸಿಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.  ಈ ತಿಂಗಳ ಅಂತ್ಯಕ್ಕೆ 130 ಪ್ರವಾಸಿ ಟ್ಯಾಕ್ಸಿಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುವುದು.  ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸ್ಥಬ್ದ ಚಿತ್ರಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಕೆ.ಹೆಚ್ ಮುನಿಯಪ್ಪ, ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀನಿವಾಸಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಗೀತಮ್ಮ ಆನಂದರೆಡ್ಡಿ, ಉಪಾಧ್ಯಕ್ಷರಾದ ಯಶೋಧ ಕೃಷ್ಣಮೂರ್ತಿ, ಜಿಲ್ಲಾಧಿಕಾರಿಗಳಾದ ಜೆ. ಮಂಜುನಾಥ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜಿ.ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರೋಹಿಣಿ ಕಟೋಚ್ ಸಫೆಟ್, ಅಪರ ಜಿಲ್ಲಾಧಿಕಾರಿಗಳಾದ ಪುಷ್ಪಲತಾ, ಉಪ ವಿಭಾಗಾಧಿಕಾರಿಗಳಾದ ಸುಭಾ ಕಲ್ಯಾಣ್ ಅವರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X