ಅಂಬೇಡ್ಕರ್ ಪ್ರತಿಮೆಗೆ ಸಗಣಿ ಎರಚಿ ಅವಮಾನ: ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಹುಬ್ಬಳ್ಳಿ, ಜ.26: ಡಾ.ಬಿ.ಆರ್. ಅಂಬೇಡ್ಕರ್ ಬೋರ್ಡ್‌ಗೆ ಸಗಣಿ ಎರಚಿ ಅಪಮಾನ ಮಾಡಿರುವ ದುಷ್ಕರ್ಮಿಗಳನ್ನು ಕೂಡಲೆ ಬಂಧಿಸಬೇಕೆಂದು ಆಗ್ರಹಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಇಲ್ಲಿನ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಗಾಂಧಿ ಸರ್ಕಲ್ ಬಳಿಯಿರುವ ಅಂಬೇಡ್ಕರ್ ನಾಮಫಲಕಕ್ಕೆ ಸಗಣಿ ಎರಚಿ ಅವಮಾನ ಮಾಡಲಾಗಿದೆ. ಘಟನೆಯನ್ನು ಖಂಡಿಸಿ ದಲಿತ ಸಂಘಟನೆಯ ಕಾರ್ಯಕರ್ತರು ಹುಬ್ಬಳ್ಳಿ- ವಿಜಯಪುರ ರಾಷ್ಟ್ರೀಯ ಹೆದ್ದಾರಿಯನ್ನು 1 ಗಂಟೆ ಕಾಲ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಬೇಕು, ಇಲ್ಲದಿದ್ದರೆ ನಾವು ಇಲ್ಲಿಂದ ಹೋಗುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಘಟನಾ ಸ್ಥಳ್ಕಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಆಗಮಿಸಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ, ತಪ್ಪಿತಸ್ಥರನ್ನು ಬಂಧಿಸುವ ಭರವಸೆ ನೀಡಿದರು.
Next Story





