ಸಾಲಿಹಾತ್‌ನಲ್ಲಿ ಬೆಂಕಿ ನಂದಿಸುವ ಪ್ರಾತ್ಯಕ್ಷಿಕೆ

ಉಡುಪಿ, ಜ.28: ತೋನ್ಸೆ ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸುವ ಪ್ರಾತ್ಯಕ್ಷಿಕೆಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳಿಗೆ ಬೆಂಕಿ ಅವಘಡ ಸಂಭವಿಸುವ ಸಂದರ್ಭಗಳಲ್ಲಿ ಅದನ್ನು ನಂದಿಸುವುದು ಹೇಗೆ ಎಂಬ ವಿಚಾರವಾಗಿ ಉಪನ್ಯಾಸದೊಂದಿಗೆ ಪ್ರಾತ್ಯಕ್ಷಿಕೆ ನೀಡಲಾಯಿತು. ಸಿಬ್ಬಂದಿಗಳು ವಿದ್ಯಾರ್ಥಿಗಳಿಂದಲೇ ಕೆಲವೊಂದು ಪ್ರಾತ್ಯಕ್ಷಿಕೆ ಯನ್ನು ಮಾಡಿಸಿದರು. ಬೆಂಕಿ ಸಂಭವಿಸದಂತೆ ವಹಿಸುವ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿವರಿಸಲಾಯಿತು. ವಿದ್ಯಾರ್ಥಿಗಳು ಈ ಬಗ್ಗೆ ಮಾಹಿತಿ ಪಡೆದು ಕೊಂಡರು.
Next Story





