ಗಂಗೊಳ್ಳಿ: 2 ದಿನ ಮದ್ಯ ಮಾರಾಟ ನಿಷೇಧ
ಉಡುಪಿ, ಜ. 28: ಕುಂದಾಪುರ ತಾಲೂಕಿನ ಗಂಗೊಳ್ಳಿಯ ಮಹಾಕಾಳಿ ದೇವಸ್ಥಾನದ ವಾರ್ಷಿಕ ಜಾತ್ರೆ ಜ.29 ಮತ್ತು 30ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಸಹ ಇರುವುದರಿಂದ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ, ತ್ರಾಸಿ, ಗುಜ್ಜಾಡಿ ಮತ್ತು ಹೊಸಾಡು ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ಜ.29ರ ಬೆಳಿಗ್ಗೆ 9ರಿಂದ 24 ಗಂಟೆಗಳ ಕಾಲ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಆದುದರಿಂದ ಗಂಗೊಳ್ಳಿ, ತ್ರಾಸಿ, ಗುಜ್ಜಾಡಿ ಮತ್ತು ಹೊಸಾಡು ಗ್ರಾಮದ ವ್ಯಾಪ್ತಿಯಲ್ಲಿ ಜ.29 ಮತ್ತು 30ನ್ನು ಒಣ ದಿನವೆಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೆೀರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.
Next Story





