‘ದಿಶಾ’ ರೆಡಿ ಮಾಹಿತಿ ಕಾರ್ಯಾಗಾರ
ಉಡುಪಿ, ಜ. 28: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋ ಪಾಯ ಇಲಾಖೆ ಬೆಂಗಳೂರು ಹಾಗೂ ಸಿಡಾಕ್ ಧಾರವಾಡ ಇವುಗಳ ಸಂಯುಕ್ತ ಆಶ್ರಯದಲ್ಲಿ ಶಿವಳ್ಳಿ ಕೈಗಾರಿಕಾ ಕೇಂದ್ರದ ಸಭಾಂಗಣದಲ್ಲಿ ‘ದಿಶಾ’ ಮಾಹಿತಿ ಕಾರ್ಯಾಗಾರ, ಇಲಾಖೆಯ ಜಂಟಿ ನಿರ್ದೇಶಕ ಅರವಿಂದ ಡಿ. ಬಾಳೇರಿ ಅಧ್ಯಕ್ಷತೆಯಲ್ಲಿ ಜರಗಿತು.
ಈ ಸಂದರ್ಭದಲ್ಲಿ ಮಾತನಾಡಿದ ಅರವಿಂದ ಡಿ.ಬಾಳೇರಿ, ರಾಷ್ಟ್ರಗಳ ಅಭಿವೃದ್ಧಿ ಕಾರ್ಯಕ್ರಮದಡಿ ಸ್ವ-ಉದ್ಯೋಗ ಪ್ರಾರಂಭಿಸುವ ಯೋಜನೆಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು. ದಿಶಾ ಯೋಜನೆಯ ಮುಂದಿನ ಕಾರ್ಯಕ್ರಮ ಗಳಲ್ಲಿ ಭಾಗವಹಿಸಿ, ಯಶಸ್ವಿ ಉದ್ಯಮಿಯಾಗಲು ಕರೆ ನೀಡಿದರು.
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಅಧಿಕಾರಿ ಭಾಸ್ಕರ್ ಅಮೀನ್ ಅತಿಥಿಯಾಗಿ ಬಾಗವಹಿಸಿದ್ದರು. ಸಿಡಾಕ್‌ನ ಸಂಪನ್ಮೂಲ ವ್ಯಕ್ತಿ ಸತೀಶ್ ಮಾಬೆನ್ ಸರಕಾರದ ವಿವಿಧ ಯೋಜನೆಗ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಕೇಂದ್ರ ವ್ಯವಸ್ಥಾಪಕ ಪೃಥ್ವಿರಾಜ್ ನಾಯಕ್ ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾದ ತಾಂತ್ರಿಕ ಹಾಗೂ ಸರಕಾರದ ನೀತಿ ನಿಯಮಗಳ ಬಗ್ಗೆ ಅರಿವು ಮೂಡಿಸಿದರು. ಸಿಡಾಕ್‌ನ ಸಲಹೆಗಾರ್ತಿ ಸೌಮ್ಯ ಆರ್.ಕೆ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಸಲಹೆಗಾರ್ತಿ ಸುಶೀಲಾ ಉಪಸ್ಥಿತರಿದ್ದರು.







