ಮೈಸೂರು: ಆಟೋ ಚಾಲಕನ ಬರ್ಬರ ಹತ್ಯೆ

ಮೈಸೂರು,ಜ.28: ತಡರಾತ್ರಿ ಆಟೋ ಚಾಲಕರೋರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಹರಾಜ ಗ್ರೌಂಡ್ ನ ಸಮೀಪ ಪಯರ್ ಬ್ರಿಗೇಡ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಕೊಲೆಯಾದವರನ್ನು ಮುನೇಶ್ವರ ನಗರದ ಆಟೋ ಚಾಲಕ ಮನು (ಜಾನಿ) ಎಂದು ಗುರುತಿಸಲಾಗಿದೆ. ಗುರುತು ಸಿಗದ ರೀತಿಯಲ್ಲಿ ತಲವಾರು, ಮಚ್ಚುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಮೃತ ಮನು ಬೆನ್ನಿನಲ್ಲೇ ಒಂದು ಚಾಕುವನ್ನು ಹಾಗೆಯೇ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ತಡರಾತ್ರಿ 1 ಗಂಟೆ ವೇಳೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಲಕ್ಷ್ಮೀಪುರಂ ಪೊಲೀಸ್ ಇನ್ಸ್ ಪೆಕ್ಟರ್ ಗಂಗಾಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇನ್ಸ್ ಪೆಕ್ಟರ್ ಗಂಗಾಧರ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ.
Next Story





