ಬೈಕ್- ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ: ನವವಿವಾಹಿತ ಸ್ಥಳದಲ್ಲೇ ಸಾವು

ಮೈಸೂರು,ಜ.28: ಬೈಕ್ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಎಚ್.ಡಿ.ಕೋಟೆ ತಾಲೂಕಿನ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಮೃತರನ್ನು ಕಳೆದ ವಾರವಷ್ಟೇ ವಿವಾಹವಾಗಿದ್ದ ಬಾಗಲಕೋಟೆ ಮೂಲದ ಮುನಿಶ್ ಎಂದು ಗುರುತಿಸಲಾಗಿದ್ದು, ಹಿಂಬದಿ ಸವಾರರಾಗಿದ್ದ ಪತ್ನಿ ಸೃಷ್ಟಿ ಅಚ್ಚರಿಯ ರೀತಿಯಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ವಿವಾಹದ ಬಳಿಕ ಕಬಿನಿ ಜಂಗಲ್ ರೆಸಾರ್ಟ್ ನಲ್ಲಿ ನವ ಜೋಡಿ ತಂಗಿತ್ತು ಎನ್ನಲಾಗಿದೆ. ವಾಪಸ್ ಸ್ವಗ್ರಾಮಕ್ಕೆ ತೆರಳುವಾಗ ಎಚ್.ಡಿ.ಕೋಟೆ ತಾಲೂಕಿನ ಹ್ಯಾಂಡ್ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





