Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2.60 ಕೋಟಿ ರೂ. ವೆಚ್ಚದಲ್ಲಿ ಕುಂಸಿ...

2.60 ಕೋಟಿ ರೂ. ವೆಚ್ಚದಲ್ಲಿ ಕುಂಸಿ ರೈಲ್ವೇ ನಿಲ್ದಾಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ವಾರ್ತಾಭಾರತಿವಾರ್ತಾಭಾರತಿ30 Jan 2019 5:42 PM IST
share
2.60 ಕೋಟಿ ರೂ. ವೆಚ್ಚದಲ್ಲಿ ಕುಂಸಿ ರೈಲ್ವೇ ನಿಲ್ದಾಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಜ. 30: ಮುಂದಿನ ದಿನಗಳಲ್ಲಿ ಆಗಬಹುದಾದ ರೈಲು ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ ತಾಲೂಕಿನ ಕುಂಸಿ ರೈಲ್ವೆ ನಿಲ್ದಾಣವನ್ನು 2.60 ಕೋಟಿ ರೂ. ಹಾಗೂ ಸಾಗರ ತಾಲೂಕಿನ ಅರಸಾಳು ರೈಲ್ವೆ ನಿಲ್ದಾಣವನ್ನು 1.30 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಇಲಾಖೆಯು ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. 

ಬುಧವಾರ ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣಗಳ ಆವರಣದಲ್ಲಿ ಪ್ರತ್ಯೇಕವಾಗಿ ಏರ್ಪಡಿಸಿದ್ದ ನಿಲ್ದಾಣ ಕಾಮಗಾರಿಗಳ ಸುಧಾರಣೆ, ಮೇಲ್ಸೇತುವೆ ನಿರ್ಮಾಣ, ನಿರೀಕ್ಷಣಾ ಕೊಠಡಿ, ನೀರು, ವಿದ್ಯುತ್, ಶೌಚಾಲಯ ನಿರ್ಮಾಣ, ಪ್ಲಾಟ್‍ಫಾರ್ಮ್ ವಿಸ್ತೀರ್ಣ, ಪ್ಲಾಟ್‍ಫಾರ್ಮ್ ಶೆಲ್ಟರ್ ಸ್ಥಳಾವಕಾಶ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿದ ನಂತರ ಸಮಾರಂಭಗಳನ್ನುದ್ದೇಶಿಸಿ ಅವರು ಮಾತನಾಡಿದರು. 

ಮಲೆನಾಡಿನ ಜನರ ಬಹುದಿನಗಳ ಆಶಯದಂತೆ ಹಾಗೂ ಅವರ ಅಗತ್ಯತೆಗಳನ್ನು ಮನಗಂಡು ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಕುಂಸಿಯಲ್ಲಿ ಇಂಟರ್‍ಸಿಟಿ ರೈಲು ನಿಲುಗಡೆಗೆ ಪ್ರಸ್ತಾವ ಸಲ್ಲಿಸಲಾಗಿದ್ದು, ಇನ್ನೊಂದು ವಾರದಲ್ಲಿ ಆದೇಶ ಬರುವ ನಿರೀಕ್ಷೆ ಇದೆ ಎಂದು ತಿಳಿಸಿದರು. 
ಬಾಳೆಕೊಪ್ಪ-ಮರಸ ರಸ್ತೆ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲೂ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಭಾಗದ ಜನರ ಆಶೋತ್ತರಗಳು ಹಾಗೂ ರೈಲ್ವೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಅವರು, ಫೆಬ್ರವರಿ 3 ರಿಂದ ಬೆಂಗಳೂರು - ಶಿವಮೊಗ್ಗ ನಡುವೆ ವಾರದ ನಾಲ್ಕು ದಿನಗಳ ಕಾಲ ಜನಶತಾಬ್ಧಿ ಎಕ್ಸ್ ಪ್ರೆಸ್ ರೈಲು ಸಂಚರಿಸಲಿದೆ. ವಾರದ ಉಳಿದ ದಿನಗಳಲ್ಲಿ ಅದೇ ರೈಲನ್ನು ಮೈಸೂರಿಗೆ ಸಂಚರಿಸಲು ಕ್ರಮ ಕೈಗೊಳ್ಳುವಂತೆ ನೈಋತ್ಯ ರೈಲ್ವೇ ವಲಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು. 

ಹೊಸಹಳ್ಳಿ-ತಮ್ಮಡಿಹಳ್ಳಿ-ಕುಂಸಿ-ಅರಸಾಳು ಸೇರಿದಂತೆ ಸುತ್ತಮುತ್ತಲ ಸುಮಾರು 50 ಕ್ಕೂ ಹೆಚ್ಚಿನ ಕೆರೆಗಳಿಗೆ ನೀರು ತುಂಬಿಸುವ ಹಾಗೂ ಈ ಪ್ರದೇಶದ ವ್ಯಾಪ್ತಿಗೊಳಪಡುವ ಅಚ್ಚುಕಟ್ಟು ಪ್ರದೇಶಗಳ ಜಮೀನುಗಳಿಗೆ ನೀರು ಹಾಯಿಸುವ ಸಲುವಾಗಿ 300 ಕೋಟಿ ರೂ. ವೆಚ್ಚದಲ್ಲಿ ಕುಮುದ್ವತಿ ಅಥವಾ ತುಂಗಾನದಿಯಿಂದ ನೀರನ್ನು ಹರಿಸುವ ಯೋಜನೆ ಕಾರ್ಯಗತಗೊಳಿಸಲು ಚಿಂತನೆ ನಡೆಸಲಾಗಿದೆ ಎಂದರು. 

ಶಿವಮೊಗ್ಗ - ಶೃಂಗೇರಿ - ಕೊಪ್ಪ ಮಾರ್ಗವಾಗಿ ಮಂಗಳ್ ರಿಗೆ ರೈಲ್ವೆ ಸಂಪರ್ಕ ಕಲ್ಪಿಸುವ ಯೋಜನೆಗೆ ಈಗಾಗಲೇ ಮಂಜೂರಾತಿ ದೊರೆತಿದ್ದು, ಅಧಿಕೃತವಾಗಿ ಕೇಂದ್ರವು ಶೀಘ್ರದಲ್ಲಿ ಮಂಡಿಸಲಿರುವ ಬಜೆಟ್‍ನಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ ಎಂದರು.

ಪ್ರಸ್ತುತ ಅಭಿವೃದ್ಧಿಪಡಿಸಲಾಗುತ್ತಿರುವ ಅರಸಾಳು ರೈಲ್ವೆ ನಿಲ್ದಾಣದಿಂದಾಗಿ ಈ ಭಾಗದ ಪ್ರವಾಸೋದ್ಯಮಕ್ಕೆ ಅನುಕೂಲವಾಗಲಿದೆ. ಅಲ್ಲದೇ ಮಂಗಳೂರು ಸಂಪರ್ಕ ಸಾಧಿಸಿದಲ್ಲಿ ಈ ಭಾಗದಲ್ಲಿ ಆರ್ಥಿಕ ವ್ಯವಹಾರ ವೃದ್ಧಿಯಾಗುವ ನಿರೀಕ್ಷೆಯಿದ್ದು, ಜನಸಾಮಾನ್ಯರ ಬದುಕಿಗೆ ಆಸರೆಯಾಗಲಿದೆ ಎಂದು ಹೇಳಿದರು.
ಜಿಲ್ಲೆಯ ಐತಿಹಾಸಿಕ ಸ್ಥಳಗಳ ಅಭಿವೃದ್ಧಿಗಾಗಿ ಸ್ವದೇಶಿ ದರ್ಶನ್ ಯೋಜನೆಯಡಿಯಲ್ಲಿ 42ಕೋಟಿ ರೂ.ಗಳ ವೆಚ್ಚದಲ್ಲಿ ಮಹತ್ವದ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು. 

ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ಶಾಸಕರಾದ ಆರಗ ಜ್ಞಾನೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ, ಕೆ.ಬಿ.ಅಶೋಕನಾಯ್ಕ್, ಮಾಜಿ ಶಾಸಕ ಸ್ವಾಮಿರಾವ್, ನೈಋತ್ಯ ರೈಲ್ವೇ ಜನರಲ್ ಮ್ಯಾನೇಜರ್ ಅಜಯ್ ಕುಮಾರ್ ಸಿಂಗ್, ಅಪರ್ಣ ಗಾರ್ಗಿ, ಜಿ.ಪಂ.ಸದಸ್ಯ ತಮ್ಮಡಿಹಳ್ಳಿ ನಾಗರಾಜ್ ಸೇರಿದಂತೆ ಕುಂಸಿ ಮತ್ತು ಅರಸಾಳು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ರೈಲ್ವೆ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X