Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು ಜಿಲ್ಲಾಡಳಿತದಿಂದ ಹುತಾತ್ಮ...

ಕೊಡಗು ಜಿಲ್ಲಾಡಳಿತದಿಂದ ಹುತಾತ್ಮ ದಿನಾಚರಣೆ: ಮಹಾತ್ಮ ಗಾಂಧಿಗೆ ಪುಷ್ಪ ನಮನ

ವಾರ್ತಾಭಾರತಿವಾರ್ತಾಭಾರತಿ30 Jan 2019 6:19 PM IST
share
ಕೊಡಗು ಜಿಲ್ಲಾಡಳಿತದಿಂದ ಹುತಾತ್ಮ ದಿನಾಚರಣೆ: ಮಹಾತ್ಮ ಗಾಂಧಿಗೆ ಪುಷ್ಪ ನಮನ

ಮಡಿಕೇರಿ ಜ.30: ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನಾಚರಣೆಯನ್ನು ನಗರದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.   

ನಗರದ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾ ಖಜಾನೆಯಲ್ಲಿರಿಸಲಾದ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು.

ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್, ಸ್ಕೌಟ್ ಮತ್ತು ಗೈಡ್ಸ್, ಎನ್.ಸಿ.ಸಿ. ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಯಲ್ಲಿ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮುಖ್ಯರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪದಲ್ಲಿರಿಸಿ ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು. 

ಇದೇ ವೇಳೆ ಪೊಲೀಸ್ ಇಲಾಖೆಯಿಂದ ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟ್ರಪಿತರಿಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಲಾಯಿತು.

ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಅವರು ಮಾತನಾಡಿ ಗಾಂಧಿ ಮಂಟಪವನ್ನು ದೆಹಲಿಯ ರಾಜ್‍ಘಾಟ್ ಮಾದರಿಯಲ್ಲಿ ಸ್ಮಾರಕ ನಿರ್ಮಿಸುವಂತಾಗಬೇಕು ಎಂದು ಅವರು ಮನವಿ ಮಾಡಿದರು.

ಮಹಾತ್ಮ ಗಾಂಧೀಜಿಯವರು 1934 ಫೆಬ್ರವರಿ, 21 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿ ಸರ್ವರನ್ನು ಉದ್ದೇಶಿಸಿ ಗಾಂಧಿ ಮೈದಾನದಲ್ಲಿ ಮಾತನಾಡಿದರು. ಈ ಸ್ಥಳ ಜ್ಞಾಪಕಾರ್ಥವಾಗಿ ಗಾಂಧಿ ಮಂಟಪವನ್ನು ನಿರ್ಮಿಸಲಾಯಿತು ಎಂದು ಎಂ.ಸಿ.ನಾಣಯ್ಯ ಅವರು ಸ್ಮರಿಸಿದರು. 

ಗಾಂಧೀಜಿ ಸ್ಮಾರಕ ನಿಮಾಣ ಸಂಬಂಧ ಎಷ್ಟೇ ಹಣ ಖರ್ಚಾದರೂ ಪರವಾಗಿಲ್ಲ, ಸರ್ಕಾರ ಭರಿಸುವಂತಾಗಬೇಕು. ಸ್ಮಾರಕವನ್ನು ಶ್ರದ್ಧಾ ಭಕ್ತಿಯ ಕೇಂದ್ರವಾಗಿ ನಿರ್ಮಾಣ ಮಾಡುವಂತಾಗಬೇಕು ಎಂದು ಎಂ.ಸಿ.ನಾಣಯ್ಯ ಅವರು ಸಲಹೆ ಮಾಡಿದರು.

ಸರ್ವೋದಯ ಸಮಿತಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ಮಹಾತ್ಮ ಗಾಂಧೀಜಿಯವರ ಸ್ಮಾರಕ ನಿರ್ಮಾಣ ಮಾಡುವ ನಿಟ್ಟಿನಲ್ಲಿ ನೀಲ ನಕಾಶೆ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು, ಆ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಈ ಕಾರ್ಯವನ್ನು ಎಲ್ಲಾ ಜನಪ್ರತಿನಿಧಿಗಳ, ಸಂಘ ಸಂಸ್ಥೆಗಳ ಸಹಕಾರದಿಂದ ಇನ್ನಷ್ಟು ಪ್ರಯತ್ನ ಮಾಡಲಾಗುವುದು ಎಂದು ಅವರು ತಿಳಿಸಿದರು.    

ಗಾಂಧಿ ಮಂಟಪದಲ್ಲಿ ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿಯವರ ಮೆಚ್ಚಿನ ಭಜನಾ ಗಾಯನ ಕಾರ್ಯಕ್ರಮವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ವಿದ್ಯಾರ್ಥಿಗಳು ನಡೆಸಿಕೊಟ್ಟರು, ಸರ್ವಧರ್ಮ ಗುರುಗಳಿಂದ ಭಗವದ್ಗೀತೆ, ಬೈಬಲ್, ಕುರಾನ್ ಸಂದೇಶಗಳ ಪಠಣ ಮಾಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ಮಹಾತ್ಮ ಗಾಂಧೀಜಿ ಕುರಿತು ಭಕ್ತಿ ಗೀತೆ ಹಾಡಿದರು.

ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ನಗರಸಭೆ ಸದಸ್ಯರಾದ ಚುಮ್ಮಿ  ದೇವಯ್ಯ, ಜುಲೇಕಾಬಿ, ಪ್ರಕಾಶ್ ಆಚಾರ್ಯ, ಕೆ.ಎಂ.ವೆಂಕಟೇಶ್, ಸರ್ವೋದಯ ಸಮಿತಿ ಸದಸ್ಯರಾದ ಕೋಡಿ ಚಂದ್ರಶೇಖರ್, ಅಂಬೆಕಲ್ ಕುಶಾಲಪ್ಪ, ಅಂಬೆಕಲ್ ನವೀನ್, ಸುಬ್ರಹ್ಮಣಿ, ಎಸ್.ಪಿ.ವಾಸುದೇವ, ಬಿ.ಎ.ರಾಮಯ್ಯ ಜಿ.ಸಿ.ರಮೇಶ್, ಗಾಂಧಿ ಸ್ಮಾರಕ ಸಮಿತಿ ಸದಸ್ಯರಾದ ಕೆ.ಟಿ.ಬೇಬಿಮ್ಯಾಥ್ಯೂ, ಷಂಶುದ್ದಿನ್, ಮುನೀರ್ ಅಹ್ಮದ್, ಸುರಯ್ಯ ಅಬ್ರಾರ್, ನಟೇಶ್ ಗೌಡ, ಬಷೀರ್ ಅಹ್ಮದ್, ಆರ್.ಪಿ.ಚಂದ್ರಶೇಖರ್, ಸುನಿತಾ ಪ್ರೀತಂ, ಜಿಲ್ಲಾ ಖಜಾನಾಧಿಕಾರಿ ಸತೀಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೋ, ಪೌರಾಯುಕ್ತರಾದ ಎಂ.ಎಲ್.ರಮೇಶ್, ತಹಶೀಲ್ದಾರ್ ಕುಸುಮ, ಪೊಲೀಸ್ ಇನ್ಸ್‍ಪೆಕ್ಟರ್ ಅನೂಪ್ ಮಾದಪ್ಪ, ಕನ್ನಡ ಮತ್ತು ಸಂಸ್ಕೃತಿ  ಇಲಾಖೆ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್, ಮಣಜೂರು ಮಂಜುನಾಥ್, ತೆನ್ನಿರಾ ಮೈನಾ, ಮತ್ತಿತರರು ಇದ್ದರು.                   

ಸರ್ಕಾರಿ ಗೌರವಾರ್ಪಣೆ ಹಾಗೂ ಮೌನಾಚರಣೆಯ ನಂತರ ಮೆರವಣಿಗೆಯಲ್ಲಿ ಗಾಂಧೀಜಿ ಚಿತಾಭಸ್ಮವನ್ನು ಮತ್ತೆ ಜಿಲ್ಲಾ ಖಜಾನೆಯಲ್ಲಿಟ್ಟು ಭದ್ರಗೊಳಿಸಲಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X