Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಐಒಸಿಎಲ್‌ನಲ್ಲಿ ಸೋಲಾರ್ ವಿದ್ಯುತ್ ಘಟಕ...

ಕೆಐಒಸಿಎಲ್‌ನಲ್ಲಿ ಸೋಲಾರ್ ವಿದ್ಯುತ್ ಘಟಕ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ30 Jan 2019 7:06 PM IST
share
ಕೆಐಒಸಿಎಲ್‌ನಲ್ಲಿ ಸೋಲಾರ್ ವಿದ್ಯುತ್ ಘಟಕ ಲೋಕಾರ್ಪಣೆ

ಮಂಗಳೂರು, ಜ.30: ಸರಕಾರಿ ಸ್ವಾಮ್ಯದ ಕರಾವಳಿಯ ಪ್ರತಿಷ್ಠಿತ ಕೈಗಾರಿಕಾ ಸಂಸ್ಥೆ ಕೆಐಒಸಿಎಲ್‌ನಲ್ಲಿ ಅಳವಡಿಸಲಾದ 1.3 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕದ ಲೋಕಾರ್ಪಣೆ ಹಾಗೂ ಬ್ಲಾಸ್ಟ್ ಫರ್ನೆಸ್ (ಊದು ಕುಲುಮೆ) ಘಟಕದ ಆಧುನೀಕರಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಕೆಐಒಸಿಎಲ್ ಬ್ಲಾಸ್ಟ್ ರ್ನೆಸ್ ಘಟಕದ ಆವರಣದಲ್ಲಿ ಇಂದು ನಡೆಯಿತು.

ಕೇಂದ್ರ ಉಕ್ಕು ಸಚಿವ ಚೌದರಿ ಬೀರೇಂದ್ರ ಸಿಂಗ್ ಸೋಲಾರ್ ಘಟಕ ಉದ್ಘಾಟಿಸಿ, ನೂತನ ಯೋಜನೆಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಅತಿ ಹೆಚ್ಚು ಉಕ್ಕು ಉತ್ಪಾದನೆಯಲ್ಲಿ ಭಾರತಕ್ಕೆ ವಿಶ್ವದಲ್ಲೇ ಎರಡನೇ ಸ್ಥಾನವಿದೆ. ಕೆಐಓಸಿಎಲ್‌ನಲ್ಲಿ ಅತ್ಯುತ್ತಮ ಗುಣಮಟ್ಟದ ಉಕ್ಕು ಉತ್ಪಾದಿಸುತ್ತಿದ್ದು, ವಿದೇಶಗಳಿಗೂ ರಫ್ತಾಗುತ್ತಿದೆ. ಮುಂದಿನ ದಿನಗಳಲ್ಲಿ ಬ್ಲಾಸ್ಟ್ ಫರ್ನೆಸ್ ಘಟಕ ಆಧುನೀಕರಣಗೊಳ್ಳಲಿದ್ದು, ಇನ್ನಷ್ಟು ಹೆಚ್ಚು ಮಂದಿಗೆ ಉದ್ಯೋಗವಕಾಶ ಕಲ್ಪಿಸಲಿದೆ ಎಂದು ಹೇಳಿದರು.

ಪ್ರಸ್ತುತ 1.3 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪಿಸಲಾಗಿದೆ. ಆದರೆ ಕೆಐಓಸಿಎಲ್‌ನಲ್ಲಿ ಸುಮಾರು 30 ಮೆಗಾ ವ್ಯಾಟ್ ವಿದ್ಯುತ್ ಬಳಕೆಯಾಗುತ್ತಿದೆ. ಇದಕ್ಕಾಗಿ ಮುಂದೆ ಇನ್ನಷ್ಟು ಸೋಲಾರ್ ಘಟಕಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ. ಇನ್ನು ಆರು ತಿಂಗಳ ಒಳಗೆ ಇನ್ನೊಂದು ಘಟಕ ಸ್ಥಾಪನೆಯಾಗಲಿದ್ದು, ಆ ಮೂಲಕ ಕೆಐಓಸಿಎಲ್‌ನಲ್ಲಿ 5 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಸೋಲಾರ್ ಮೂಲಕ ಆಗಲಿದೆ ಎಂದು ಹೇಳಿದರು.

ಇದೇ ಸಂದರ್ಭ ವಿವಿಧ ಯೋಜನೆಗಳಿಗಾಗಿ ಎನ್‌ಐಟಿಕೆ ಸುರತ್ಕಲ್ ಹಾಗೂ ಎಸ್‌ಎಐಎಲ್ ಕಂಪನಿ ಜತೆಯಲ್ಲಿ ಪರಸ್ಪರ ತಿಳಿವಳಿಕಾ ಒಪ್ಪಂದಕ್ಕೆ ಸಹಿ ಮಾಡಲಾಯಿತು.

ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಕೆಐಓಸಿಎಲ್ ಸಂಸ್ಥೆಗೆ ವಿವಿಧ ರೀತಿಯ ಕಾನೂನು ತೊಡಕುಗಳಿದ್ದವು. ಈಗ ಅವೆಲ್ಲವೂ ಪರಿಹಾರಗೊಂಡು ಪ್ರಗತಿಯ ಹಾದಿಯಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯ ಬಳಿಕ ಹಳೆ ಉದ್ಯಮಶೀಲ ಕಂಪನಿಗಳು ಅಭಿವೃದ್ಧಿ ಹೊಂದುತ್ತಿವೆ. ಇದರಲ್ಲಿ ಕೆಐಓಸಿಎಲ್ ಸಂಸ್ಥೆ ಹೆಚ್ಚು ಲಾಭ ಪಡೆದಿದೆ ಎಂದು ಹೇಳಿದರು.

ಕೇಂದ್ರ ಉಕ್ಕು ಸಚಿವಾಲಯದ ಕಾರ್ಯದರ್ಶಿ ಬಿನೋಯ್ ಕುಮಾರ್, ಜಂಟಿ ಕಾರ್ಯದರ್ಶಿ ಟಿ.ಶ್ರೀನಿವಾಸ್, ಮೆಕ್ಕಾನ್ ಕಂಪನಿಯ ಆಡಳಿತ ನಿರ್ದೇಶಕ ಅತುಲ್ ಭಟ್, ಸೇಲ್ ಕಂಪನಿಯ ಚೇರ್‌ಮೆನ್ ಅನಿಲ್ ಕುಮಾರ್ ಚೌದರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕೆಐಓಸಿಎಲ್ ಕಂಪನಿಯ ಆಡಳಿತ ನಿರ್ದೇಶಕ ಸುಬ್ಬಾ ರಾವ್ ಸ್ವಾಗತಿಸಿದರು. ಕೆಐಓಸಿಎಲ್ ಹಣಕಾಸು ವಿಭಾಗದ ನಿರ್ದೇಶಕ ಎಸ್.ಕೆ.ದೊರೈ ವಂದಿಸಿದರು.

ಮಾಚ್ 28ಕ್ಕೆ ಉಕ್ಕು ಸುರಕ್ಷತಾ ದಿನ
ದೇಶದ ಉಕ್ಕು ಕೈಗಾರಿಕೆಗಳಲ್ಲಿ ನಡೆಯುವ ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಮಾ.28ರಂದು ಉಕ್ಕು ಸುರಕ್ಷತಾ ದಿನವನ್ನು ಆಚರಿಸಲು ಕೇಂದ್ರ ಉಕ್ಕು ಸಚಿವಾಲಯ ನಿರ್ಧರಿಸಿದೆ ಎಂದು ಕೇಂದ್ರ ಉಕ್ಕು ಸಚಿವ ಚೌದರಿ ಬೀರೇಂದ್ರ ಸಿಂಗ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕಾರ್ಮಿಕರ ಸುರಕ್ಷತೆಗೆ ನಮ್ಮ ಸಚಿವಾಲಯ ಹೆಚ್ಚು ಒತ್ತು ನೀಡುತ್ತಿದೆ. ಈ ಬಾರಿ ವಿಶೇಷವಾಗಿ ಒಂದು ದಿನವನ್ನು ಇದಕ್ಕಾಗಿ ಮೀಸಲಿಡಲು ಚಿಂತನೆ ನಡೆಸಿದ್ದೇವೆ ಎಂದರು.

ಕುದುರೆಮುಖದ ಲಕ್ಯಾ ಡ್ಯಾಂನಲ್ಲಿ ಇರುವ ಹೂಳನ್ನು ಎತ್ತಲು ಚಿಂತನೆ ನಡೆಸಿದ್ದೇವೆ. ಅದರಲ್ಲಿ ಸಾಕಷ್ಟು ಕಬ್ಬಿಣದ ಅಂಶಗಳು ಇರುವುದು ಪರಿಶೀಲನೆ ಸಂದರ್ಭದಲ್ಲಿ ಗೊತ್ತಾಗಿದೆ. ಇದನ್ನು ಸದ್ಬಳಕೆ ಮಾಡುವುದು ನಮ್ಮ ಉದ್ದೇಶ. ಅಂದಾಜು 300 ಮಿಲಿಯನ್ ಟನ್ ಹೂಳು ಇರಬಹುದು. ದೇಶದಲ್ಲಿ 1500ಕ್ಕೂ ಹೆಚ್ಚು ಸೇತುವೆಗಳು ನಿರ್ಮಾಣವಾಗಲಿದೆ. ಈ ಸೇತುವೆಗಳನ್ನು ಉಕ್ಕಿನಲ್ಲೇ ನಿರ್ಮಾಣ ಮಾಡಿದರೆ ಅದರ ಬಾಳಿಕೆಯೂ ಹೆಚ್ಚಾಗುತ್ತದೆ. ದೇಶದ ಉಕ್ಕಿನ ಕಾರ್ಖಾನೆಗಳಿಗೂ ಪ್ರೋತ್ಸಾಹ ದೊರಕುತ್ತದೆ ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X