Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿದ್ದರಾಮಯ್ಯ ಈಗ ಮೊದಲಿನಂತಿಲ್ಲ:...

ಸಿದ್ದರಾಮಯ್ಯ ಈಗ ಮೊದಲಿನಂತಿಲ್ಲ: ಎಚ್.ಡಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ30 Jan 2019 9:23 PM IST
share
ಸಿದ್ದರಾಮಯ್ಯ ಈಗ ಮೊದಲಿನಂತಿಲ್ಲ: ಎಚ್.ಡಿ.ದೇವೇಗೌಡ

ಬೆಂಗಳೂರು, ಜ.30: ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದಂತೆ ಮೈತ್ರಿ ಸರಕಾರದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.

ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ಸಂಪರ್ಕಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಗುತ್ತಿಲ್ಲವೆಂದು ಆರೋಪಿಸುವುದು ಸರಿಯಲ್ಲ. ಮೈತ್ರಿ ಸರಕಾರದಲ್ಲಿ ಇಂತಹ ಹೇಳಿಕೆಗಳು ಸರಕಾರಕ್ಕೆ ಕಂಟಕವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಒಂದು ನಿಗಮ ಬಿಟ್ಟರೆ ಉಳಿದೆಲ್ಲ ಸ್ಥಾನವನ್ನು ಕಾಂಗ್ರೆಸ್‌ಗೆ ಕೊಟ್ಟಿದ್ದೇವೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇನ್ನೂ ಹೇಗೆ ಆಡಳಿತ ನಡೆಸಬೇಕು ಎಂದು ನಮಗೆ ಗೊತ್ತಾಗುತ್ತಿಲ್ಲ. ಪ್ರತಿ ಕಾಂಗ್ರೆಸ್ ಶಾಸಕರು ಒಂದೊಂದು ಮಾತಾಡುತ್ತಾರೆ. ಇಂತಹ ಮಾತುಗಳಿಗೆ ಕಾಂಗ್ರೆಸ್‌ನ ಮುಂಚೂಣಿ ನಾಯಕರು ಕಡಿವಾಣ ಹಾಕಬೇಕೆಂದು ತಿಳಿಸಿದರು.

ರಾಷ್ಟ್ರದಲ್ಲಿ ಹಲವು ಸಮ್ಮಿಶ್ರ ಸರಕಾರಗಳು ಬಂದಿವೆ. ನಾನು ಕಾಂಗ್ರೆಸ್ ಪಕ್ಷದ ಬೆಂಬಲದಿಂದ ಪ್ರಧಾನಿ ಆಗಿದ್ದೆ. ರಾಜ್ಯದಲ್ಲಿ ಧರ್ಮಸಿಂಗ್ ಜೊತೆ ಮೈತ್ರಿ ಮಾಡಿಕೊಂಡಿದ್ದಾಗ ಸರಕಾರದಲ್ಲಿ ಷರತ್ತುಗಳು ಇರಲಿಲ್ಲ. ಅವರ ಸರಕಾರ ಬೀಳೋಕೆ ನಾನಾಗಲಿ ಕುಮಾರಸ್ವಾಮಿ ಆಗಲಿ ಕಾರಣರಲ್ಲ. ಇವತ್ತು ಅದೇ ಕಾಂಗ್ರೆಸ್ ಬೆಂಬಲದಿಂದ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಸರಕಾರ ನಡೆಸಿದ್ದಾರೆ. ಅದು ಸಕ್ರಮವೋ ಅಕ್ರಮವೋ, ಅದರ ಬಗ್ಗೆ ನಾವು ಯಾವ ಟೀಕೆಯನ್ನೂ ಮಾಡಿಲ್ಲ. ಕುಮಾರಸ್ವಾಮಿ ಇಲ್ಲಿಯವರೆಗೂ ಎಲ್ಲೆ ಮೀರಿ ಮಾತನಾಡಿಲ್ಲ. ಒಮ್ಮೆ ಮಾತ್ರ ನಾನು ಗುಮಾಸ್ತನ ಹಾಗೆ ಕೆಲಸ ಮಾಡುತ್ತಿದ್ದೇನೆ ಎಂದು ಅವರು ಹೇಳಿದ್ದು ನಿಜ. ಆದರೆ, ಅದು ಜೆಡಿಎಸ್ ಪಕ್ಷದ ಶಾಸಕರ ಎದುರು ಖಾಸಗಿಯಾಗಿ ಹೇಳಿಕೊಂಡಿದ್ದು. ಮೈತ್ರಿ ಸರಕಾರವನ್ನು ಮುನ್ನಡೆಸುವುದು ಎಷ್ಟು ಕಷ್ಟವಿದೆ ಎಂಬ ಅರ್ಥದಲ್ಲಿ ಪದಪ್ರಯೋಗ ಮಾಡಿದ್ದು ಬಿಟ್ಟರೆ ಬೇರಾವ ಉದ್ದೇಶವೂ ಇರಲಿಲ್ಲ ಎಂದು ಅವರು ಸಮರ್ಥಿಸಿಕೊಂಡರು.

ಈಗ ಸಿದ್ದರಾಮಯ್ಯ ಮೊದಲಿನಂತಿಲ್ಲ

ಸಿದ್ದರಾಮಯ್ಯ ಈಗ ಮೊದಲಿನ ತರಹ ಇಲ್ಲ. ಅವರು ಯಾವ ಪಕ್ಷದಿಂದ ಹೋಗಿ 5 ವರ್ಷ ಮುಖ್ಯಮಂತ್ರಿಯಾದರು ಎಂಬುದನ್ನು ಅರ್ಥ ಮಾಡಿಕೊಳ್ಳಲಿ. ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದಾಗ ಯಾವ ಕೆಲಸವನ್ನೂ ಮಾಡಲಿಲ್ಲ. ಆಗ ನನಗಾಗಿರುವ ನೋವು ದೇವರಿಗೇ ಗೊತ್ತು. ಸೋನಿಯಾ ಗಾಂಧಿ ಮೇಲೆ ಒತ್ತಡ ಹಾಕಿದ್ದರೆ ನಾನು ಅಂದೇ ಮುಖ್ಯಮಂತ್ರಿಯಾಗುತ್ತಿದ್ದೆ ಎಂದು ಹೇಳಿದ್ದಾರೆ. ಇದಕ್ಕೆ ಸೋನಿಯಾ ಗಾಂಧಿಯೇ ಉತ್ತರಿಸಬೇಕು.

-ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X