Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ.ಜಾತಿ, ಪಂಗಡದ ಗುತ್ತಿಗೆದಾರರಿಗೆ...

ಪ.ಜಾತಿ, ಪಂಗಡದ ಗುತ್ತಿಗೆದಾರರಿಗೆ ಕಾಮಗಾರಿ ನೀಡದ ಬಗ್ಗೆ ತನಿಖೆ: ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ

ವಾರ್ತಾಭಾರತಿವಾರ್ತಾಭಾರತಿ30 Jan 2019 9:24 PM IST
share
ಪ.ಜಾತಿ, ಪಂಗಡದ ಗುತ್ತಿಗೆದಾರರಿಗೆ ಕಾಮಗಾರಿ ನೀಡದ ಬಗ್ಗೆ ತನಿಖೆ: ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ

ಮಣಿಪಾಲ, ಜ.30: ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆ, ಪಿಆರ್‌ಇಡಿ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರಿಗೆ ಶೇ.25ರಷ್ಟು ಮೀಸಲಾತಿ ಇಡಬೇಕೆಂಬ ನಿಯಮವಿದ್ದರೂ, ಇದನ್ನು ಉಲ್ಲಂಘಿಸಿ ಇತರರಿಗೆ ಕಾಮಗಾರಿಗಳನ್ನು ನೀಡುತ್ತಿರುವ ಕುರಿತು ಪರಿಶಿಷ್ಟ ಜಾತಿ ಮತ್ತು ಪ.ಪಂಗಡದ ಗುತ್ತಿಗೆದಾರರ ದೂರಿನ ಹಿನ್ನಲೆಯಲ್ಲಿ ಈ ಕುರಿತಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.

ಬುಧವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪ.ಜಾತಿ ಹಾಗೂ ಪ.ಪಂಗಡಗಳ ಕುಂದು ಕೊರತೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಪ.ಜಾತಿ ಮತ್ತು ಪಂಗಡದ ಗುತ್ತಿಗೆದಾರರಿಗೆ ಶೇ.25 ಮೀಸಲಾತಿಯ ಕಾಮಗಾರಿಗಳನ್ನು ನೀಡುತ್ತಿಲ್ಲ. ಅಲ್ಲದೇ ಕಾಮಗಾರಿಗಳನ್ನು ರ್ಯಾಂಡಮೈಶೆನ್ ಮೂಲಕ ಮಾಡದೇ ಹೊಂದಾಣಿಕೆ ಮೂಲಕ ಮಾಡಿಕೊಳ್ಳುವಂತೆ ಅಧಿಕಾರಿ ಗಳು ಸೂಚಿಸುತ್ತಿದ್ದಾರೆ ಎಂದು ಈ ಸಮುದಾಯಗಳ ಗುತ್ತಿಗೆದಾರರು ದೂರಿದ ಹಿನ್ನೆಲೆಯಲ್ಲಿ, ಈ ಬಗ್ಗೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಸಿ ಸಂಬಂದಪಟ್ಟವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಡಿಸಿ ಮನ್ನಾ ಜಾಗ ಮಂಜೂರು ಮಾಡುವ ಬಗ್ಗೆ ಸಂಬಂದಪಟ್ಟ ಗ್ರಾಪಂಗಳ ಪಿಡಿಓಗಳು ಪರಿಶೀಲಿಸಿ ಸರಿಯಾದ ನಿರ್ಣಯ ಮಾಡಿ. ತಪ್ಪು ನಿರ್ಣಯಗಳಾಗಿದ್ದಲ್ಲಿ ಕೂಡಲೇ ರದ್ದು ಪಡಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಡಿಸಿ ಮನ್ನಾ ಭೂಮಿ ಅತಿಕ್ರಮಣವಾಗಿರುವ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಎಲ್ಲಾ ತಾಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

ಪ.ಜಾತಿ, ಪಂಗಡದವರ ಹೆಸರಲ್ಲಿ ಹಣ ದುರುಪಯೋಗವಾಗುತ್ತಿದೆ. ಫಲಾನುಭವಿಗಳು ಇಲ್ಲದಿದ್ದರೂ ಸಹ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂಬ ದೂರಿನ ಹಿನ್ನಲೆಯಲ್ಲಿ ಪ.ಜಾತಿ, ಪಂಗಡದ ಅಭಿವೃಧ್ದಿಗಾಗಿ ಕಾಮಗಾರಿ ಆರಂಭಿಸುವಾಗ, ಆ ಸ್ಥಳದಲ್ಲಿ ಕಡ್ಡಾಯವಾಗಿ ಫಲಾನುಭವಿಗಳು ಇರುವ ಬಗ್ಗೆ ಖಚಿತ ಪಡಿಸಿಕೊಂಡು ಕಾಮಗಾರಿ ನಿರ್ವಹಿಸಿ ಇಲ್ಲವಾದಲ್ಲಿ ಸಂಬಂದಪಟ್ಟವರ ವಿರುದ್ದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾುವುದು ಎಂದು ಡಿಸಿ ಎಚ್ಚರಿಸಿದರು.

ಕುಕ್ಕೆಹಳ್ಳಿಯಲ್ಲಿ ಖಾಸಗಿ ಕಂಪೆನಿಯಿಂದ ಕುಡಿಯುವ ನೀರು ಕಲುಷಿತ ಗೊಳ್ಳುತ್ತಿದ್ದು, ಸಮಾಜ ಕಲ್ಯಾಣ ಇಲಾಖೆ ನೀರು ಸರಬರಾಜು ಮಾಡುವ ಬಾವಿಯ ನೀರು ಸಹ ಕಲುಷಿತಗೊಂಡಿದೆ ಎಂದು ಪ್ರತಿನಿಧಿಯೊಬ್ಬರು ತಿಳಿಸಿದರು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂಬಂಧ ಪಟ್ಟ ಸಂಸ್ಥೆಗೆ ನೋಟಿಸ್ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು. ಈ ಬಗ್ಗೆ ಜಿಲ್ಲಾಧಿಕಾರಿ ಮಾತನಾಡಿ, ಸಂಬಂಧಪಟ್ಟ ಸಂಸ್ಥೆ ಲೈಸೆನ್ಸ್ ನಿಯಮಗಳಿಗೆ ವಿರುದ್ದವಾಗಿ ಕೆಲಸ ಮಾಡುತಿದ್ದರೆ ಕ್ರಮಕೈಗೊಂಡು ವರದಿ ನೀಡಿ ಎಂದು ತಾಪಂ ಕಾರ್ಯ ನಿರ್ವಹಣಾಧಿಕಾರಿಗೆ ಸೂಚನೆ ನೀಡಿದರು.

ಶಿರೂರಿನ ಗೀತಾ ಎಂಬವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ನೀಡಿದ ದೂರಿನ ಬಗ್ಗೆ ನಡೆದ ಚರ್ಚೆಯಲ್ಲಿ ಗ್ರಾಮಸ್ಥರೊಬ್ಬರು ಮಾತನಾಡಿ, ಶಿರೂರು ಭಾಗದಲ್ಲಿ ಇರುವ ಎಸ್‌ಸಿ/ಎಸ್‌ಟಿ ಜಾಗದಲ್ಲಿ 13 ಎಕರೆ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು ಅತಿಕ್ರಮಿಸಿ ಮನೆ ನಿರ್ಮಿಸಿದ್ದಾರೆ.ಆ ಜಾಗಕ್ಕೆ ಈಗಾಗಲೇ ವಿದ್ಯುತ್ ಸಂಪರ್ಕ ಕಲ್ಪಿಸಿದ್ದು, ಗೀತಾ ಅವರ ಮನೆಗೆ ಇನ್ನೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ ಎಂದು ದೂರಿದರು. ಇದಕ್ಕೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಈ ಬಗ್ಗೆ 20 ದಿನದೊಳಗೆ ಮಾಹಿತಿ ನೀಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಂಕರನಾರಾಯಣದಲ್ಲಿ ಅಂಬೇಡ್ಕರ್ ವಸತಿ ಶಾಲೆ ನಿವೇಶನ ಮಂಜೂರಾ ಗಿದ್ದರೂ ಇನ್ನೂ ಯಾವುದೇ ಪ್ರಗತಿ ಆಗಿಲ್ಲ ಎಂದು ದೂರಿನ ಕುರಿತು ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಶಂಕರನಾರಾಯಣದಲ್ಲಿ ವಸತಿ ಶಾಲೆ ನಿರ್ಮಾಣಕ್ಕೆ ಸೂಚಿಸಿದ ಜಾಗ ಡೀಮ್ಡ್ ಪಾರೆಸ್ಟ್ ವ್ಯಾಪ್ತಿಯಲ್ಲಿ ಬಂದಿದ್ದು, ವಸತಿ ಶಾಲೆಯನ್ನು ಅಂಪಾರಿನಲ್ಲಿ ನಿರ್ಮಿಸಲು ಯೋಜನೆ ಹಾಕಲಾಗಿದೆ. ಆಕ್ಷೇಪಣೆ ಇಲ್ಲದ್ದಿದ್ದರೆ ಅಂಪಾರಿನಲ್ಲಿ ಅಂಬೇಡ್ಕರ್ ವಸತಿ ಶಾಲೆಯನ್ನು ನಿರ್ಮಿಸಲಾಗುವುದು ಎಂದರು.

ಅಂಬೇಡ್ಕರ್ ಸಮುದಾಯ ಭವನಗಳ ನಿರ್ಮಾಣಕ್ಕೆ ಇರುವ ಅಡೆತಡೆಗಳು ಹಾಗೂ ಸಮರ್ಪಕವಾಗಿ ನಿರ್ವಹಣೆ ಇಲ್ಲದ ಕುರಿತಂತೆ ಹಲವು ದೂರುಗಳು ಬಂದವು. ಈ ಬಗ್ಗೆ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಈ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗೆ ತಿಳಿಸಿದರು.
ಹಂಗಾರುಕಟ್ಟೆಯ ಮೀನು ಕಟ್ಟಿಂಗ್ ಘಟಕದಿಂದ ಶಾಲೆಗೆ ಹೋಗುವ ಪ.ಜಾತಿ,ಪಂಗಡದ ಮಕ್ಕಳಿಗೆ ತೊಂದರೆಯಾಗುತ್ತಿರುವ ಕುರಿತಂತೆ ಬಂದ ದೂರಿನ ಹಿನ್ನಲೆಯಲ್ಲಿ, ಈ ಘಟಕಕ್ಕೆ ಇದುವರೆಗೆ ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ಹಿನ್ನಲೆಯಲ್ಲಿ, ಘಟಕಕ್ಕೆ ಗ್ರಾಪಂನಿಂದ ನೀಡಿರುವ ಅನುಮತಿ ಪತ್ರ ವಾಪಸ್ ಪಡೆದು ವರದಿ ನೀಡುವಂತೆ ಪಿಡಿಓಗೆ ಡಿಸಿ ಸೂಚಿಸಿದರು.

ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಸುಂದರ ಮಾಸ್ತರ್, ಉದಯಕುಮಾರ್ ತಲ್ಲೂರು, ಸುಂದರ್ ಕಪ್ಪೆಟ್ಟು, ಶೇಖರ್ ಹಾವಂಜೆ, ರಮೇಶ್ ಕೋಟ್ಯಾನ್, ವಾಸುದೇವ ಮದೂರು, ವಿಶ್ವನಾಥ ಪೇತ್ರಿ, ವಿಜಯಲಕ್ಷ್ಮಿ, ವಕೀಲ ಮಹಾಬಲ, ಮುಂಜುನಾಥ ಬಾಳ್ಕುದ್ರು ಮತ್ತಿತರರು ಉಪಸ್ಥಿತರಿದ್ದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧೂ ಬಿ ರೂಪೇಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ಬ ನಿಂಬರಗಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾ ಲಯದ ಎಸ್ಪಿ ವೇದಮೂರ್ತಿ, ಕಾರ್ಕಳ ಎಎಸ್ಪಿ ಕೃಷ್ಣಕುಮಾರ್, ಜಿಲ್ಲಾ ಸಮಾಜ ಕ್ಯಾಣಾಧಿಕಾರಿ ಭುಜಬಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X