ಫೆ.1: ಮಡಿವಾಳ ಮಾಚಿದೇವ ಜಯಂತಿ
ಉಡುಪಿ, ಜ.30: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀರಜಕ ಯಾನೆ ಮಡಿವಾಳ ಸಂಘ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆಯು ಫೆ.1ರಂದು ಬೆಳಗ್ಗೆ 10ಕ್ಕೆ ಕಡಿಯಾಳಿ ಯು.ಕಮಲಾ ಬಾ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





