Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಿನ್ನಾಭಿಪ್ರಾಯಕ್ಕೆ ಮುಕ್ತ ಅವಕಾಶ...

ಭಿನ್ನಾಭಿಪ್ರಾಯಕ್ಕೆ ಮುಕ್ತ ಅವಕಾಶ ಕಲ್ಪಿಸಿದ್ದ ಗಾಂಧೀಜಿ: ಪ್ರೊ.ಬಿ.ಕೆ.ಚಂದ್ರಶೇಖರ್

ವಾರ್ತಾಭಾರತಿವಾರ್ತಾಭಾರತಿ30 Jan 2019 10:21 PM IST
share

ಬೆಂಗಳೂರ, ಜ.30: ಸಾರ್ವಜನಿಕ ಜೀವನದಲ್ಲಿ ಭಿನ್ನಮತ ಎಂಬುದು ಸಾಮಾನ್ಯ ಲಕ್ಷಣವೆಂದು ನಂಬಿದ್ದ ಮಹಾತ್ಮ ಗಾಂಧೀಜಿ, ಯಾವುದೆ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸುವುದಕ್ಕೆ ಮುಕ್ತ ಅವಕಾಶವನ್ನು ನೀಡಿದ್ದರು ಎಂದು ಪ್ರೊ.ಬಿ.ಕೆ.ಚಂದ್ರಶೇಖರ್ ಅಭಿಪ್ರಾಯಿಸಿದರು.

ಬುಧವಾರ ಬೆಂಗಳೂರು ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದಲ್ಲಿ ಸರ್ವೋದಯ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕವಾಗಿ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವುದು ಎಲ್ಲರ ಹಕ್ಕು ಎಂಬುದನ್ನು ಗಾಂಧೀಜಿಯವರಿಂದ ಕಲಿಯಬೇಕು ಎಂದು ಹೇಳಿದರು.

ಪ್ರಭುತ್ವದೊಂದಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ ಮಾತ್ರಕ್ಕೆ ರಾಷ್ಟ್ರರೋಧಿ ಎಂದು ಹಣೆಪಟ್ಟಿ ಹಚ್ಚುವ ಇವತ್ತಿನ ಪ್ರವೃತ್ತಿಯನ್ನು ಖಂಡಿಸಿದ ಅವರು, ಮನುಷ್ಯ, ಪ್ರಕೃತಿ ಮತ್ತು ಅಭಿವೃದ್ಧಿಯ ನಡುವಿರುವ ಸಂಬಂಧದ ಕುರಿತು ಗಾಂಧೀಜಿ ಮಂಡಿಸಿದ ಪರಿಕಲ್ಪನೆಯನ್ನು ಇಂದು ಸಮಗ್ರವಾಗಿ ಅಳವಡಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು. ಪರಿಪೂರ್ಣ ರಾಜಕಾರಣಿಯಾಗಿದ್ದ ಮಹಾತ್ಮ ಗಾಂಧೀಜಿ ಆಧ್ಯಾತ್ಮಿಕತೆ ಹಾಗೂ ಆತ್ಮಶಕ್ತಿ ಬೆರೆತ ಸಮಗ್ರ ಬದಲಾವಣೆಯನ್ನು ತರಬಲ್ಲ ರಾಜಕಾರಣವನ್ನು ರೂಪಿಸಲೆತ್ನಿಸಿದರು. ಸ್ವಾತಂತ್ರ ಹೋರಾಟದ ಆರಂಭದ ಘಟ್ಟದಲ್ಲಿ ಇಡೀ ಭಾರತೀಯ ಜನತೆಯನ್ನು ಒಗ್ಗೂಡಿಸುವ ಶಕ್ತಿ ಗಾಂಧೀಜಿಯವರಲ್ಲಿ ಮಾತ್ರ ಇತ್ತು ಎಂದು ಅವರು ತಿಳಿಸಿದರು.

ಸಾಂಪ್ರದಾಯಿಕ ಸಮಾಜದಲ್ಲಿ ತಮ್ಮ ಕುಟುಂಬಗಳಿಗೆ ಸೀಮಿತವಾಗಿದ್ದ ಮಹಿಳೆಯರನ್ನು ಸ್ವಾತಂತ್ರ ಚಳುವಳಿಯಲ್ಲಿ ಭಾಗವಹಿಸುವಂತೆ ಪ್ರೇರಣೆ ನೀಡಿದವರು ಗಾಂಧೀಜಿ. ಇಂತಹ ಪ್ರಯತ್ನಗಳ ಕಾರಣದಿಂದಾಗಿ ಇಂದು ಮಹಿಳಾ ಸಮುದಾಯ ಎಲ್ಲ ರಂಗದಲ್ಲೂ ಮುಂಚೂಣಿ ಸ್ಥಾನದಲ್ಲಿ ಕಾಣುವಂತಾಗಿದೆ ಎಂದು ಜೈನ್ ವಿಶ್ವವಿದ್ಯಾಲಯದ ಡೀನ್ ಡಾ. ಮೈಥಿಲಿ ಪಿ.ರಾವ್ ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಮಾಜವಿಜ್ಞಾನಿ ಪ್ರೊ.ಟಿ.ಆರ್. ಚಂದ್ರಶೇಖರ್ ಮಾತನಾಡಿ, ಗಾಂಧೀಜಿ ಮತ್ತು ಬಸವಣ್ಣನವರ ನಡುವೆ ಇರುವ ಸಾಮ್ಯತೆ ಇದ್ದು, ಕಳೆದ ಹಲವು ದಶಕಗಳಲ್ಲಿ ಗಾಂಧಿ ಮಾದರಿಯ ಅಭಿವೃದ್ಧಿಯ ಪರಿಕಲ್ಪನೆಗಳಿಂದ ದೂರ ಬಂದ ಭಾರತ ದುರಂತದತ್ತ ಸಾಗಿದೆ. ಅಭಿವೃದ್ಧಿ ಮತ್ತು ಅಹಿಂಸೆ ಎರಡೂ ಒಟ್ಟಿಗೆ ಸಾಗದಿದ್ದರೆ ಭಾರತದ ಭವಿಷ್ಯ ಗಂಡಾಂತರಕ್ಕೆ ಸಿಲುಕಲಿದೆ ಎಂದು ಅವರು ಆಂತಕ ವ್ಯಕ್ತಪಡಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಕೆ.ಆರ್.ವೇಣುಗೋಪಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವ ಬಿ.ಕೆ.ರವಿ ಮತ್ತು ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ನಟರಾಜ್ ಹುಳಿಯಾರ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X