Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಜೀಪ ಮುನ್ನೂರು ಗ್ರಾಮದಲ್ಲಿ ಕಲುಷಿತ...

ಸಜೀಪ ಮುನ್ನೂರು ಗ್ರಾಮದಲ್ಲಿ ಕಲುಷಿತ ನೀರು ಪೂರೈಕೆ: ಗ್ರಾಪಂ ಸದಸ್ಯರು, ಗ್ರಾಮಸ್ಥರ ಆರೋಪ

ವಾರ್ತಾಭಾರತಿವಾರ್ತಾಭಾರತಿ31 Jan 2019 9:18 PM IST
share
ಸಜೀಪ ಮುನ್ನೂರು ಗ್ರಾಮದಲ್ಲಿ ಕಲುಷಿತ ನೀರು ಪೂರೈಕೆ: ಗ್ರಾಪಂ ಸದಸ್ಯರು, ಗ್ರಾಮಸ್ಥರ ಆರೋಪ

ಬಂಟ್ವಾಳ, ಜ. 31: ಸಜೀಪ ಮುನ್ನೂರು ಗ್ರಾಮದ 3ನೆ ಬ್ಲಾಕ್‍ನಲ್ಲಿರುವ ನೀರು ಶುದ್ಧೀಕರಣ ಘಟಕವು ಹಾಳಾಗಿದ್ದು, ನೇರವಾಗಿ ನದಿಯ ಮೂಲಕವೇ ನೀರು ಪೂರೈಕೆ ಮಾಡಲಾಗುತ್ತಿದೆ. ಈ ನೀರು ಕುಡಿಯಲು ಅಯೋಗ್ಯವಾಗಿದ್ದು, ಇದರಿಂದ ಜನರು ರೋಗದ ಭೀತಿ ಎದುರಿಸುತ್ತಿದ್ದಾರೆ ಎಂದು ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಆರೋಪಿಸಿದ್ದಾರೆ.

ಗುರುವಾರ ಬಿ.ಸಿ.ರೋಡಿನ ಪ್ರಸ್‍ಕ್ಲಬ್‍ನ ಸುದ್ದಿಗೋಷ್ಠಿಯಲ್ಲಿ ಸಜೀಪಮುನ್ನೂರು ಗ್ರಾಪಂ ಸದಸ್ಯ ಹಂಝ ಮಾತನಾಡಿ, ಜಿಲ್ಲಾ ಪಂಚಾಯತ್ ಅನುದಾನದಡಿ ಸುಮಾರು 28 ಲಕ್ಷ ರೂ. ವೆಚ್ಚದಲ್ಲಿ ಸಜೀಪ ಮುನ್ನೂರು ಗ್ರಾಮದಲ್ಲಿ ನೀರು ಶುದ್ಧೀಕರಣ ಘಟಕವನ್ನು ನಿರ್ಮಿಸಲಾಗಿದೆ. ಅದಲ್ಲದೆ, ಇದರ ಕಾಮಗಾರಿ ಕಳಪೆ ಹಾಗೂ ಅಪೂರ್ಣವಾಗಿದ್ದು, ಕಳೆದ 8 ತಿಂಗಳಿಂದ ಘಟಕವು ಕಾರ್ಯನಿರ್ವಸುತ್ತಿಲ್ಲ. ಇದರಿಂದ ಜನರಿಗೆ ಕುಡಿಯಲು ನೇರವಾಗಿ ನದಿಯಿಂದಲೇ ನೀರು ಪೂರೈಕೆ ಮಾಡುತ್ತಿದೆ. ಈ ನೀರು ಕಲುಷಿತವಾಗಿದ್ದು, ಕುಡಿಯಲು ಯೋಗ್ಯವಾಗಿಲ್ಲ ಎಂದು ಆರೋಗ್ಯ ಇಲಾಖೆಯು ಮಾಹಿತಿ ನೀಡಿದೆ. ಇದರಿಂದ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ಅಭಾವ ಉಂಟಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಶುದ್ಧೀಕರಣ ಘಟಕವನ್ನು ಸ್ಥಳೀಯ ಗ್ರಾಮ ಪಂಚಾಯತ್‍ಗೆ ಹಸ್ತಾಂತರ ಮಾಡಿಲ್ಲ. ಕುಡಿಯುವ ನೀರಿನ ಸಮಸ್ಯೆ ಹಾಗೂ ಘಟಕದ ಕಳಪೆ ಕಾಮಗಾರಿಯ ಬಗ್ಗೆ ಶಾಸಕ, ಜಿಲ್ಲಾಧಿಕಾರಿ, ಗ್ರಾಪಂ ಅಧ್ಯಕ್ಷ, ಪಿಡಿಒ ಸಹಿತ ಜಿಪಂ ಇಂಜಿನೀಯರ್ ದೂರು ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದೇ ಉಡಾಫೆಯ ಉತ್ತರ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಶುದ್ಧೀಕರಣ ನೀರಿನ ಘಟಕದಿಂದ 100 ಮನೆಗಳಿಗೆ ಮಾತ್ರ ನೀರು ಸರಬರಾಜು ಆಗುತ್ತಿದೆ. ಆದರೆ, ಸಜೀಪ ಮುನ್ನೂರು ಗ್ರಾಮದಲ್ಲಿ ಸುಮಾರು 756 ಮನೆಗಳಿಗೆ ತಲುಪುತ್ತಿಲ್ಲ ಎಂದು ಅವರು, ಎಲ್ಲ ಮನೆಗಳಿಗೆ ಕುಡಿಯುವ ನೀರಿನ ಶಾಶ್ವತ ಪರಿಹಾರ ನೀಡುವಂತೆ ಅವರು ಒತ್ತಾಯಿಸಿದ್ದಾರೆ. 20 ದಿನಗಳೊಳಗೆ ಶುದ್ಧೀಕರಣ ಘಟಕವನ್ನು ಸರಿಪಡಿಸಿ, ಶುದ್ಧ ಕುಡಿಯುವ ನೀರು ಸರಬರಾಜಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು. ಇಲ್ಲದಿದ್ದರೆ, ಗ್ರಾಮ ಪಂಚಾಯತ್‍ಗೆ ಬೀಗ ಜಡಿದು ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಜೀಪಮುನ್ನೂರು ಗ್ರಾಪಂ ಸದಸ್ಯರಾದ ಮಜೀದ್ ಆಲಾಡಿ, ಸಮೀರ್ ನಂದಾವರ, ಗ್ರಾಮ ಸಮಿತಿಯ ಹಕೀಂ, ಫಾರೂಕ್, ಎಸ್‍ಡಿಪಿಐ ಸದಸ್ಯರಾದ ಸಿದ್ದೀಕ್, ಮುಸ್ತಫ, ಸಾದಿಕ್, ಸವಾದ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X