Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗದಲ್ಲಿ ಕೆಗಾರಿಕೆಗಳಿಗೆ ಪೂರಕ...

ಶಿವಮೊಗ್ಗದಲ್ಲಿ ಕೆಗಾರಿಕೆಗಳಿಗೆ ಪೂರಕ ವಾತಾವರಣ : ಕಾಸಿಯಾ ಅಧ್ಯಕ್ಷ ಬಸವರಾಜ ಎಸ್. ಜವಳಿ

ವಾರ್ತಾಭಾರತಿವಾರ್ತಾಭಾರತಿ31 Jan 2019 11:03 PM IST
share
ಶಿವಮೊಗ್ಗದಲ್ಲಿ ಕೆಗಾರಿಕೆಗಳಿಗೆ ಪೂರಕ ವಾತಾವರಣ : ಕಾಸಿಯಾ ಅಧ್ಯಕ್ಷ ಬಸವರಾಜ ಎಸ್. ಜವಳಿ

ಶಿವಮೊಗ್ಗ, ಜ.31: ಜಿಲ್ಲೆಯಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ಪೂರಕ ವಾತಾವರಣವಿದ್ದು, ಸಣ್ಣ ಕೈಗಾರಿಕೋದ್ಯಮಿಗಳು ಇತ್ತ ಚಿತ್ತ ಹರಿಸಬೇಕು ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ)ದ ಅಧ್ಯಕ್ಷ ಜೆ.ಆರ್. ವಾಸುದೇವ್ ಸಲಹೆ ನೀಡಿದ್ದಾರೆ. ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘವು ಜಿಲ್ಲಾ ಕೈಗಾರಿಕಾ ಕೇಂದ್ರ, ರಾಜ್ಯ ಹಣಕಾಸು ಸಂಸ್ಥೆ, ಮಾಚೇನಹಳ್ಳಿ ಕೈಗಾರಿಕಾ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ‘ಕೃಷಿ ವ್ಯವಹಾರ ರಫ್ತು ಮತ್ತು ಆಹಾರ ಸಂಸ್ಕರಣಾ ನೀತಿ - 2015 ಹಾಗೂ ಕೆಎಸ್‌ಎಫ್‌ಸಿಯ ಹೊಸ ಯೋಜನೆಗಳು’ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದರು. ಬೆಂಗಳೂರು ಸಣ್ಣ ಕೈಗಾರಿಕೆಗಳಿಂದ ತುಂಬಿ ತುಳುಕುತ್ತಿದೆ. ಜೊತೆಗೆ ವೆಚ್ಚವೂ ಹೆಚ್ಚಾಗುತ್ತಿದೆ. ಕಾರ್ಮಿಕರ ಅಲಭ್ಯತೆ ಸೇರಿದಂತೆ ಟ್ರಾಫಿಕ್ ಸಮಸ್ಯೆಯೂ ಹೆಚ್ಚಿದೆ. ಈ ಕಾರಣದಿಂದ ಬೆಂಗಳೂರಿನಾಚೆ ಕೈಗಾರಿಕೋದ್ಯಮಿಗಳು ಬರಬೇಕು. ಶಿವಮೊಗ್ಗ, ಮೈಸೂರಿನಂತಹ ನಗರಗಳಲ್ಲಿ ಕೈಗಾರಿಕೆ ಸ್ಥಾಪಿಸಬೇಕು. ಈ ಪ್ರದೇಶಗಳಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಉತ್ತಮ ವಾತಾವರಣವಿದೆ ಎಂದರು. ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಬಿ. ನಿಲೋಗಲ್ ಅವರು ಮಾತನಾಡಿ, ರಾಜ್ಯ ಹಣಕಾಸು ಸಂಸ್ಥೆಯು ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಸಣ್ಣ ಕೈಗಾರಿಕೆ ಆರಂಭಕ್ಕೆ ಹಲವು ಯೋಜನೆ ಕಾರ್ಯಗತಗೊಳಿಸಿದೆ. ರಿಯಾಯಿತಿ ದರದಲ್ಲಿ ಸಾಲಸೌಲಭ್ಯ ಕಲ್ಪಿಸುತ್ತಿದೆ. ಇದನ್ನು ಸದ್ಭಳಕೆ ಮಾಡಿಕೊಂಡು ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬೇಕು ಎಂದು ಕರೆ ನಿಡಿದರು.

ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಅಧ್ಯಕ್ಷ ಜೆ.ಆರ್.ವಾಸುದೇವ್ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಉದ್ದಿಮೆಗಳ ಸ್ಥಾಪನೆಗೆ ಪೂರಕ ವಾತಾವರಣವಿದೆ. ಎಲ್ಲ ರೀತಿಯ ಮೂಲಸೌಕರ್ಯಗಳ ವ್ಯವಸ್ಥೆಯಿದೆ. ಕಾಸಿಯಾ ಸಂಸ್ಥೆಯು ಜಿಲ್ಲೆಗೆ ಉದ್ದಿಮೆಗಳನ್ನು ಕರೆತರಬೇಕು. ಹೊಸ ಉದ್ದಿಮೆಗಳಿಗೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದರು. ಸಮಾರಂಭದಲ್ಲಿ ಜಿಲ್ಲಾಧಿಕಾರಿ ಕೆ. ಎ. ದಯಾನಂದ್, ತಮಿಳುನಾಡು ಚೆನ್ನೈನ ಇಇಪಿಪಿಯ ಪ್ರಾದೇಶಿಕ ನಿರ್ದೇಶಕ ಸಿ.ಎಚ್.ನಾಡಿಗೇರ್, ಜಿಲ್ಲಾ ಕೈಗಾರಿಕಾ ಸಂಘದ ಜಂಟಿ ನಿರ್ದೇಶಕ ಆರ್.ಗಣೇಶ್, ಕೆಎಸ್‌ಎಫ್‌ಸಿ ಪ್ರಧಾನ ವ್ಯವಸ್ಥಾಪಕ ಡಾ.ಕೆ.ಸಿ. ಬಸವಯ್ಯ, ಡಿಐಸಿ ಜಂಟಿ ನಿರ್ದೇಶಕ ಆರ್. ಗಣೇಶ್, ಪ್ರಮುಖರಾದ ಎಂ.ಎ. ರಮೇಶ್ ಹೆಗಡೆ, ಎಸ್. ವಿಶ್ವೇಶ್ವರಯ್ಯ, ರವಿಕಿರಣ ಕುಲಕರ್ಣಿ ಸೇರಿದಂತೆ ಮೊದಲಾದವರಿದ್ದರು.

ಕೃಷಿ ಬಲವರ್ಧನೆಯಾಗಬೇಕು: ಡಿ.ಸಿ.

‘ಕೃಷಿ ವ್ಯವಹಾರ ರಫ್ತು ಮತ್ತು ಆಹಾರ ಸಂಸ್ಕರಣಾ ನೀತಿ -2015 ಹಾಗೂ ಕೆಎಸ್‌ಎಫ್‌ಸಿಯ ಹೊಸ ಯೋಜನೆಗಳು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ, ಈ ಹಿಂದೆ ದೇಶವು ಕೃಷಿ ಪ್ರಧಾನ ರಾಷ್ಟ್ರವಾಗಿತ್ತು. ಕೃಷಿಯ ಉತ್ಪಾದನೆಯು ದೇಶದ ಆರ್ಥಿಕತೆಯ ಬೆನ್ನೆಲುಬಾಗಿತ್ತು. ಪ್ರಸ್ತುತ ಕೃಷಿ ಕ್ಷೇತ್ರದ ಬೆಳವಣಿಗೆ ಆಶಾದಾಯಕವಾಗಿಲ್ಲ. ಕೃಷಿ ಆಧಾರಿತ ಉದ್ದಿಮೆಗಳು ಹೆಚ್ಚಾಗಬೇಕು. ಕೃಷಿಯು ಆರ್ಥಿಕವಾಗಿ ಲಾಭದಾಯಕವಾಗಬೇಕು. ಈ ಮೂಲಕ ದೇಶದ ಆರ್ಥಿಕತೆಯು ಬಲಪಡಿಸುವ ವ್ಯವಸ್ಥೆಯಾಗಬೇಕಿದೆ ಎಂದು ಅಭಿಪ್ರಾಯಪಟ್ಟರು. ಕೃಷಿಯು ಆರ್ಥಿಕವಾಗಿ ಬಲವರ್ಧನೆಯಾದರೆ, ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ. ನಷ್ಟದ ಪ್ರಮಾಣವು ತಗ್ಗಲಿದೆ. ಬೆಳೆಗೆಗಳಿಗೆ ವೈಜ್ಞಾನಿಕ ಬೆಲೆ ದೊರಕಲಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳ ಸಂಖ್ಯೆ ಹೆಚ್ಚಾಗಬೇಕಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X