ವಿಜಯಾ ಬ್ಯಾಂಕ್ ವಿಲೀನಕ್ಕೆ ವಿರೋಧ: ಫೆ.2ರ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ
ಮಂಗಳೂರು, ಫೆ.1: ವಿಜಯಾ ಬ್ಯಾಂಕ್ ವಿಲೀನಕ್ಕೆ ವಿರೋಧಿಸಿ ಫೆ. 2ರಂದು ಮುಲ್ಕಿ ಕಾರ್ನಾಡಿನ ಗಾಂಧಿಮೈದಾನದಲ್ಲಿ ವಿಜಯಾ ಬ್ಯಾಂಕ್ ಉಳಿಸಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯು ಬೆಂಬಲ ಘೋಷಿಸಿದೆ.
ಕೇಂದ್ರ ಸರಕಾರವು ಲಾಭದಲ್ಲಿರುವ ವಿಜಯಾ ಬ್ಯಾಂಕನ್ನು ನಷ್ಟದಲ್ಲಿರುವ ಬ್ಯಾಂಕ್ ಆಫ್ ಬರೋಡಾದ ಜೊತೆ ವಿಲೀನಗೊಳಿಸಿರುವುದನ್ನು ವಿರೋಧಿಸಿ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಜಯಾ ಬ್ಯಾಂಕ್‌ನ ಎಲ್ಲಾ ಶಾಖೆಯ ಮುಂದೆ ಪ್ರತಿಭಟನೆ ನಡೆಸಿತ್ತು. ಹಾಗಾಗಿ ಈ ಪ್ರತಿಭಟನೆಯಲ್ಲೂ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಮನವಿ ಮಾಡಿದ್ದಾರೆ.
Next Story





