ಅಧಿಕಾರಿಗಳಿಬ್ಬರ ವರ್ಗಾವಣೆ

ಬೆಂಗಳೂರು, ಫೆ. 1: ಐಎಎಸ್ ಅಧಿಕಾರಿ ಕೆ.ಎನ್.ರಮೇಶ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಚುನಾವಣೆ) ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಯನ್ನಾಗಿ ವಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಐಎಫ್‌ಎಸ್ ಅಧಿಕಾರಿ ಡಾ.ಸುನೀಲ್ ಪನ್ವರ್ ಅವರನ್ನು ಡಿಪಿಎಆರ್‌ನ ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯನಿರ್ವಹಕಾಧಿಕಾರಿಯನ್ನಾಗಿ ನಿಯೋಜನೆ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
Next Story





