Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಲಪಾತಕ್ಕೆ ಬಿದ್ದು ಖಾಸಗಿ ಕಂಪೆನಿ...

ಜಲಪಾತಕ್ಕೆ ಬಿದ್ದು ಖಾಸಗಿ ಕಂಪೆನಿ ಉದ್ಯೋಗಿ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ3 Feb 2019 7:32 PM IST
share
ಜಲಪಾತಕ್ಕೆ ಬಿದ್ದು ಖಾಸಗಿ ಕಂಪೆನಿ ಉದ್ಯೋಗಿ ಮೃತ್ಯು

ಮಡಿಕೇರಿ,ಫೆ.3: ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತಕ್ಕೆ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವಕನೋರ್ವ ಆಳದ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. 

ಮೂಲತಃ ಮೈಸೂರಿನ ನಿವಾಸಿ, ಹಾಲಿ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ ಸ್ಕಂದ(24) ಮೃತ ಯುವಕನಾಗಿದ್ದು, ಸ್ಥಳೀಯ ಗ್ರಾಮಸ್ಥರು ನೀರಿನಲ್ಲಿ ಶೋಧ ನಡೆಸಿ ಮೃತದೇಹವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ವಿವರ: ಮೈಸೂರಿನ ನಿವಾಸಿಯಾದ ಸ್ಕಂದ ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದು, ವೀಕೆಂಡ್ ರಜೆಯ ಹಿನ್ನೆಲೆಯಲ್ಲಿ ಇಂದು (ಫೆ.3) 11 ಗಂಟೆಯ ಸಮಯದಲ್ಲಿ ಸೋಮವಾರಪೇಟೆಯ ಮಲ್ಲಳ್ಳಿ ಜಲಪಾತಕ್ಕೆ ತನ್ನ ಸಂಸ್ಥೆಯ 11 ಮಂದಿ ಯುವಕ ಯುವತಿಯರೊಂದಿಗೆ ಪ್ರವಾಸಕ್ಕೆ ಬಂದಿದ್ದ. ಜಲಪಾತಕ್ಕೆ ಇಳಿಯುವುದನ್ನು ನಿಷೇಧಿಸಲಾಗಿದ್ದರೂ ಕೂಡ ಸ್ಥಳದಲ್ಲಿದ್ದ ಅಪಾಯದ ಎಚ್ಚರಿಕೆ ಫಲಕವನ್ನು ಗಮನಿಸಿಯೂ ಜಲಪಾತದ ಕೆಳಭಾಗದ ಆಳದ ನೀರಿನಲ್ಲಿ ಸ್ಕಂದ ಈಜಲು ಇಳಿದಿದ್ದಾನೆ. ಈ ಸಂದರ್ಭ ನೀರಿನ ಸೆಳೆತಕ್ಕೆ ಸಿಲುಕಿ ಸ್ನೇಹಿತರ ಕಣ್ಣೆದುರಲ್ಲೆ ನೀರು ಪಾಲಾಗಿದ್ದಾನೆ. 

ಜೊತೆಯಲ್ಲಿದ್ದ ಇತರ ಸ್ನೇಹಿತರು ಜಲಪಾತದ ಮೇಲ್ಭಾಗದಲ್ಲಿದ್ದ ಪ್ರವಾಸಿ ಮಿತ್ರ ಸಿಬ್ಬಂದಿಗಳಿಗೆ ವಿಷಯ ತಿಳಿಸಿದರು. ತಕ್ಷಣವೇ ಪ್ರವಾಸಿ ಮಿತ್ರ ಸಿಬ್ಬಂದಿಗಳು ಮತ್ತು ಸ್ಥಳೀಯ ಗ್ರಾಮಸ್ಥರು ನುರಿತ ಈಜುಗಾರರ ಮೂಲಕ ಮೃತದೇಹಕ್ಕಾಗಿ ನಿರಂತರ ಶೋಧ ನಡೆಸಿದರು. 

ಯುವಕ ಮುಳುಗಿದ ಸ್ಥಳದಲ್ಲಿ ಶೋಧ ನಡೆಸಿದ ಮುಳುಗು ತಜ್ಞರು ಹಲವು ಗಂಟೆಗಳ ಕಾಲ ನೀರಿನಲ್ಲಿ ಶೋಧ ನಡೆಸಿ ಮೃತದೇಹವನ್ನು ಹೊರತೆಗೆಯುವಲ್ಲಿ ಸಫಲರಾದರು. ವಿಷಯ ಅರಿತ ಸೋಮವಾರಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಸೋಮವಾರಪೇಟೆ ಸರಕಾರಿ ಆಸ್ಪತ್ರೆಗೆ ಮೃತದೇಹವನ್ನು ಸ್ಥಳಾಂತರಿಸಿ, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಯಿತು.

ಮಲ್ಲಳ್ಳಿ ಜಲಪಾತ ಎಷ್ಟು ನೈಸರ್ಗಿಕ ಸೊಬಗು ಹೊಂದಿದೆಯೋ ಅಷ್ಟೇ ಅಪಾಯವನ್ನು ಕೂಡ ತನ್ನ ಒಡಲೊಳಗೆ ಹುದುಗಿಸಿಟ್ಟುಕೊಂಡಿದೆ. ತನ್ನ ಮಡಿಲಿನವರೆಗೆ ನೋಡುಗರನ್ನು ಬರಮಾಡಿಕೊಳ್ಳುವ ಈ ಜಲಪಾತದ ಆಳ ನುರಿತ ಈಜು ತಜ್ಞರು ಮತ್ತು ಸ್ಥಳೀಯ ನಿವಾಸಿಗಳಿಗೆ ಮಾತ್ರವೆ ಅರಿವಿದೆ.  ಹೊರ ಊರುಗಳಿಂದ ಜಿಲ್ಲೆಗೆ ಬರುವ ಪ್ರವಾಸಿಗರಿಗೆ ನೀರಿನಲ್ಲಿ ಈಜಾಡಿ ಅನುಭವ ಇದ್ದರೂ ಕೂಡ, ಮಲ್ಲಳ್ಳಿ ಜಲಪಾತದಲ್ಲಿ ಈ ಅನುಭವ ಕೆಲಸಕ್ಕೆ ಬರುವುದಿಲ್ಲ. ಹೀಗಾಗಿಯೇ ಮಲ್ಲಳ್ಳಿ ಜಲಪಾತದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಜೀವ ಕಳೆದುಕೊಳ್ಳುತ್ತಿದ್ದಾರೆ. ಜಲಪಾತಕ್ಕೆ ಪ್ರವೇಶಿಸುವ ಮೇಲ್ಬಾಗದ ಮೆಟ್ಟಿಲಿನಲ್ಲೇ ಜಲಪಾತದ ಅಪಾಯ, ಇಲ್ಲಿಯವರೆಗೆ ಜೀವತೆತ್ತವರ ಸಂಖ್ಯೆಯ ಕುರಿತು ಎಚ್ಚರಿಕೆಯ ಫಲಕಗಳನ್ನು ಅಳವಡಿಸಲಾಗಿದೆ. ಜಲಪಾತಕ್ಕೆ ಇಳಿಯದಂತೆಯೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. 

ಆದರೆ, ಮೋಜುಮಸ್ತಿಯ ಗುಂಗಿನಲ್ಲಿ ಇಲ್ಲಿಗೆ ಬರುವ ಯುವ ಪ್ರವಾಸಿಗರು, ಎಚ್ಚರಿಕೆಯ ಫಲಕಗಳನ್ನು ನಿರ್ಲಕ್ಷಿಸಿ ನೀರಿಗೆ ಇಳಿದು ಅಪಾಯವನ್ನು ಮೈಮೇಲೆ ತಂದುಕೊಳ್ಳುತ್ತಿದ್ದಾರೆ ಎಂದು ಅಲ್ಲಿನ ಗ್ರಾಮಸ್ಥರು ವಿಷಾಧ ವ್ಯಕ್ತಪಡಿಸುತ್ತಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X