Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ಯೋಗ ಖಾತರಿ ಯೋಜನೆ ನಿಷ್ಕ್ರಿಯ:...

ಉದ್ಯೋಗ ಖಾತರಿ ಯೋಜನೆ ನಿಷ್ಕ್ರಿಯ: ಬಿಜೆಪಿ ಆಡಳಿತ ರಾಜ್ಯದಲ್ಲಿ ರೈತರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ3 Feb 2019 8:02 PM IST
share
ಉದ್ಯೋಗ ಖಾತರಿ ಯೋಜನೆ ನಿಷ್ಕ್ರಿಯ: ಬಿಜೆಪಿ ಆಡಳಿತ ರಾಜ್ಯದಲ್ಲಿ ರೈತರ ಆಕ್ರೋಶ

ಮುಂಬೈ, ಫೆ.3: ಶುಕ್ರವಾರ ವಿತ್ತ ಸಚಿವ ಪಿಯೂಷ್ ಗೋಯೆಲ್ ಮಂಡಿಸಿದ ಮಧ್ಯಂತರ ಬಜೆಟ್‌ನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಎಂನರೇಗ)ಗೆ ಕಳೆದ ವರ್ಷಕ್ಕಿಂತ 5 ಸಾವಿರ ಕೋಟಿ ರೂ. ಹೆಚ್ಚುವರಿ ಅನುದಾನ ಘೋಷಿಸಿದ್ದರು. ಆದರೆ ಮಹಾರಾಷ್ಟ್ರದಲ್ಲಿ ಈ ಯೋಜನೆ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ ಎಂದು ಅಂಕಿಅಂಶಗಳು ತಿಳಿಸುತ್ತವೆ.

ಮಹಾರಾಷ್ಟ್ರದ ಬರಪೀಡಿತ ಪ್ರದೇಶವಾಗಿರುವ ಮರಾಠವಾಡದ ಪ್ರಭಾನಿ ಜಿಲ್ಲೆಯಲ್ಲಿ ಕಳೆದ ವಾರ ಉದ್ಯೋಗಕ್ಕೆ ಆಗ್ರಹಿಸಿ ಸ್ಥಳೀಯರು ಮೂರು ದಿನ ಪ್ರತಿಭಟನೆ ನಡೆಸಿದ್ದರು. ಪ್ರಭಾನಿ ಜಿಲ್ಲೆಯಲ್ಲಿ ಯಾರಿಗೂ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಸಿಗುತ್ತಿಲ್ಲ ಅಥವಾ ಸಾಲ ಕೂಡಾ ಸಿಗುತ್ತಿಲ್ಲ. ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಮರಾಠವಾಡ ಸೇರಿದಂತೆ ಎಲ್ಲೆಡೆ ನೀರಿನ ಕೊರತೆಯಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಬರಪರಿಹಾರ ನಿಧಿಯಿಂದ 7 ಸಾವಿರ ಕೋಟಿ ರೂ. ನೀಡುವಂತೆ ಮಹಾರಾಷ್ಟ್ರ ಸರಕಾರ ಕೇಂದ್ರ ಸರಕಾರಕ್ಕೆ ಮನವಿ ಮಾಡಿಕೊಂಡಿತ್ತು. ಮಂಗಳವಾರ ಕೇಂದ್ರ ಸರಕಾರ 4,700 ಕೋಟಿ ರೂ. ನೆರವು ನೀಡಿದೆ.

ಎಂನರೇಗಾ ಯೋಜನೆಯಡಿ ರಾಜ್ಯದಲ್ಲಿ 2.15 ಕೋಟಿ ಜನತೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದು, ಇವರಲ್ಲಿ ಕೇವಲ ಶೇ.25ರಷ್ಟು ಮಂದಿ ಸಕ್ರಿಯವಾಗಿ ಉದ್ಯೋಗ ನಿರ್ವಹಿಸುತ್ತಿದ್ದಾರೆ. ಒಂದು ಕುಟುಂಬಕ್ಕೆ ಸರಾಸರಿ ಉದ್ಯೋಗದ ದಿನ 100 ಎಂದು ನಿಗದಿಯಾಗಿದ್ದರೂ ಈ ಪ್ರಮಾಣ 49ರಿಂದ 41 ದಿನಕ್ಕೆ ಇಳಿದಿದೆ. ಅಲ್ಲದೆ 100 ದಿನದ ಖಾತರಿ ಉದ್ಯೋಗ ನಿರ್ವಹಿಸಿದ ಕುಟುಂಬದ ಸಂಖ್ಯೆ ಕೇವಲ 1.5 ಲಕ್ಷ ಎಂದು ಅಂಕಿಅಂಶ ತಿಳಿಸಿದೆ. ಈ ಅಂಕಿಅಂಶದ ಗಂಭೀರತೆಯ ಬಗ್ಗೆ ಪರಿಶೀಲಿಸುವುದಾಗಿ ಸರಕಾರ ತಿಳಿಸಿದೆ. ಸರಕಾರದ ಅಸಡ್ಡೆಯಿಂದ ಈ ಸಮಸ್ಯೆ ಉದ್ಭವಿಸಿದ್ದರೆ ಈ ಬಗ್ಗೆ ತಕ್ಷಣ ಗಮನ ಹರಿಸಲಾಗುವುದು ಎಂದು ಮಹಾರಾಷ್ಟ್ರದ ವಿತ್ತ ಸಚಿವ ಸುಧೀರ್ ಮುಂಗಂಟಿವಾರ್ ತಿಳಿಸಿದ್ದಾರೆ. ಆದರೆ ನಿರುದ್ಯೋಗಿಗಳ ಪ್ರಮಾಣ ರಾಜ್ಯದಲ್ಲಿ ಹೆಚ್ಚಿರುವುದಾಗಿ ಮಹಾರಾಷ್ಟ್ರದ ಕಾರ್ಮಿಕ ಇಲಾಖೆಯ ಅಂಕಿಅಂಶಗಳಿಂದ ತಿಳಿದುಬಂದಿದೆ.

2016ರಲ್ಲಿ ರಾಜ್ಯದಲ್ಲಿ 33.5 ಲಕ್ಷ ನಿರುದ್ಯೋಗಿಗಳಿದ್ದರೆ 2018ರಲ್ಲಿ(ಸೆಪ್ಟೆಂಬರ್ ವರೆಗೆ) ಈ ಪ್ರಮಾಣ 42.2 ಲಕ್ಷಕ್ಕೆ ಹೆಚ್ಚಿದೆ ಎಂದು ಅಂಕಿಅಂಶ ತಿಳಿಸಿದೆ. ಈ ಬಗ್ಗೆ ವಿಪಕ್ಷಗಳು ಸರಕಾರವನ್ನು ಕಟುವಾಗಿ ಟೀಕಿಸಿವೆ. ಮಹಾರಾಷ್ಟ್ರದಲ್ಲಿ ಈಗ ತೀವ್ರ ಬರಗಾಲವಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರತೀ ದಿನ ಕನಿಷ್ಟ 20 ಲಕ್ಷ ಜಾಬ್‌ಕಾರ್ಡ್ ಇರಬೇಕಿತ್ತು. ಆದರೆ ಅವರು(ರಾಜ್ಯ ಸರಕಾರ) ಜನರಿಗೆ ಉದ್ಯೋಗ ನೀಡುತ್ತಿಲ್ಲವಾದ್ದರಿಂದ ಜನತೆ ಬೇರೆ ರಾಜ್ಯಕ್ಕೆ ಗುಳೇ ಹೋಗುವ ಪರಿಸ್ಥಿತಿ ಬಂದಿದೆ ಎಂದು ಎನ್‌ಸಿಪಿ ಮುಖಂಡ ನವಾಬ್ ಮಲಿಕ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X