Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅರೆ ಭಾಷೆ ಹೃದಯವನ್ನು ಒಂದಾಗಿಸುವ ಕೆಲಸ...

ಅರೆ ಭಾಷೆ ಹೃದಯವನ್ನು ಒಂದಾಗಿಸುವ ಕೆಲಸ ಮಾಡಿದೆ: ಶಾಸಕ ಸಂಜೀವ ಮಠಂದೂರು

ಅರೆಭಾಷೆ ಅಕಾಡಮಿ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ, ಸಾಂಸ್ಕೃತಿಕ ಹಬ್ಬ

ವಾರ್ತಾಭಾರತಿವಾರ್ತಾಭಾರತಿ3 Feb 2019 8:36 PM IST
share
ಅರೆ ಭಾಷೆ ಹೃದಯವನ್ನು ಒಂದಾಗಿಸುವ ಕೆಲಸ ಮಾಡಿದೆ: ಶಾಸಕ ಸಂಜೀವ ಮಠಂದೂರು

ಪುತ್ತೂರು, ಫೆ. 3: ಅರೆಭಾಷೆ ತನ್ನದೇ ಆದ ಛಾಪನ್ನು ಮೂಡಿಸುತ್ತಾ ಬೆಳೆದು ಬಂದಿದ್ದು,  ನಮ್ಮ ಭೌಗೋಳಿಕ ಆಚಾರ ವಿಚಾರಗಳನ್ನು ತೋರಿಸುವುದರ ಜೊತೆಗೆ ಹೃದಯ ಹೃದಯವನ್ನು ಒಟ್ಟು ಮಾಡುವ ಕೆಲಸ ಮಾಡಿದೆ. ವೀರ ಸೇನಾನಿಯಿಂದ ಹಿಡಿದು ರೈತಾಪಿ ವರ್ಗದವರೆಲ್ಲಾ ಅರೆಭಾಷೆಯ ಜೀವನಾಡಿಯಾಗಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಅವರು ರವಿವಾರ ಕರ್ನಾಟಕ ಅರೆಭಾಷೆ ಸಾಂಸ್ಕೃತಿಕ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ವತಿಯಿಂದ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘಗಳ ಸಹಯೋಗದಲ್ಲಿ ಪುತ್ತೂರಿನ ತೆಂಕಿಲದಲ್ಲಿರುವ ಒಕ್ಕಲಿಗೆ ಸಮುದಾಯ ಭವನದಲ್ಲಿ ನಡೆದ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ -2018 ಮತ್ತು ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮದಲ್ಲಿ ಸನ್ಮಾನ ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಅಧ್ಯಕ್ಷರೂ ಅಕಾಡೆಮಿ ಮಾಜಿ ಸದಸ್ಯರೂ ಆಗಿರುವ ಮೋಹನ್ ಗೌಡ ಇಡ್ಯಡ್ಕ ಅವರು ಮಾತನಾಡಿ ಅರೆಭಾಷೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಅಕಾಡೆಮಿ ಮೂಲಕ ಆಗುತ್ತಿದೆ. ಗೌಡ ಸಮಾಜದ ಸಂಸ್ಕ್ರತಿ, ಸಂಸ್ಕಾರ ಉಳಿಸುವ ಕೆಲಸವನ್ನೂ ಅಕಾಡೆಮಿಯ ಮೂಲಕ ನಡೆಯುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಪಿ.ಸಿ. ಜಯರಾಮ್ ಮಾತನಾಡಿ ಅಕಾಡೆಮಿಯ ಪ್ರಯತ್ನದ ಫಲವಾಗಿ ಕಳೆದ ವರ್ಷದಿಂದ ಮಂಗಳೂರು ವಿವಿ ಪದವಿ ಪಠ್ಯದಲ್ಲಿ ಟಿ.ಜಿ ಮುಡೂರು, ಕುತ್ಯಾಳ ನಾಗಪ್ಪ ಗೌಡ ಅವರ ಅರೆಭಾಷಾ ಪದ್ಯ ಸೇರ್ಪಡೆಯಾಗಿದೆ. ಯಕ್ಷಗಾನ, ನಾಟಕ, ಅಧ್ಯಯನ ಪೀಠ, ಈಗಾಗಲೆ ಮಡಿಕೇರಿ ಆಕಾಶವಾಣಿಯಲ್ಲಿ ಬರುವ ಅರೆಭಾಷೆ ಕಾರ್ಯಕ್ರಮ ಮುಂದೆ ಮಂಗಳೂರು ಆಕಾಶವಾಣಿಯಲ್ಲೂ ಮೂಡಿಬರಬೇಕು ಎಂಬ ಉದ್ದೇಶದಿಂದ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಮ್ಮ ಅವಧಿಯಲ್ಲಿ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದ್ದೇವೆ ಎಂದ ಅವರು ಅರೆಭಾಷೆಯಲ್ಲಿ ಫಿಲೋಶಿಫ್‍ಗಳು ಆಗಬೇಕೆಂಬ ನಿಟ್ಟಿನಲ್ಲಿ ಪ್ರಬಂದ ಮಂಡನೆಗೆ ಈಗಾಗಲೆ 10 ಜನರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಮಾತನಾಡಿ ರಾಜ್ಯದ ಬೇರೆ ಬೇರೆ ಜನರು ಆಡುವ ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ 13ರಷ್ಟು ಅಕಾಡೆಮಿ ಸ್ಥಾಪನೆ ಆಗಿದೆ. ಪ್ರತಿಯೊಂದು ಬಾಷೆಯಲ್ಲೂ ಅದರದ್ದೆ ಆದ ಸಂಸ್ಕಾರ, ಸಂಸ್ಕೃತಿ ಇದೆ. ಅದನ್ನು ದಾಖಲೆ ಮತ್ತು ಸಂಶೋಧನೆ ಮಾಡುವ ಮತ್ತು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಅಕಾಡೆಮಿಯ ಮೂಲಕ ವಿವಿಧ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸುಳ್ಯದ ಪ್ರೊ. ಕೋಡಿ ಕುಶಾಲಪ್ಪ ಗೌಡ(ಸಾಹಿತ್ಯ), ಶಿಕ್ಷಣ ತಜ್ಞ ಪುತ್ತೂರಿನ ಡಾ. ಎನ್. ಸುಕುಮಾರ ಗೌಡ (ಅಧ್ಯಯನ ಹಾಗೂ ಸಂಶೋಧನೆ), ಮಡಿಕೇರಿಯ ಕಾಳೆಯಂಡ ತಂಗಮ್ಮ ಅಪ್ಪಚ್ಚ (ಅರೆಭಾಷೆ ಸಂಸ್ಕೃತಿ) ಅವರಿಗೆ 2018ನೇ ಸಾಲಿನ ಅಕಾಡಮಿ ಗೌರವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. 

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಅವರು ಸನ್ಮಾನಿತರ ಕುರಿತು ಅಭಿನಂದನಾ ಭಾಷಣ ಮಾಡಿದರು. 

ಮಾಜಿ ಸಚಿವ ಬಿ. ರಮಾನಾಥ ರೈ, ಸನ್ಮಾನ ಸ್ವೀಕರಿಸಿದ ಪ್ರೊ. ಕೋಡಿ ಕುಶಾಲಪ್ಪ ಗೌಡ, ಡಾ. ಎನ್.ಸುಕುಮಾರ ಗೌಡ, ಕಾಳೆಯಂಡ ತಂಗಮ್ಮ ಅಪ್ಪಚ್ಚು ಮಾತನಾಡಿ ಶುಭ ಹಾರೈಸಿದರು.

ಅಕಾಡೆಮಿಯ ಸದಸ್ಯರಾದ ಎ.ಕೆ.ಹಿಮಕರ, ಚಿದಾನಂದ ಬೈಲಾಡಿ, ಕಡ್ಲೇರ ತುಳಸಿ ಮೋಹನ್, ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳಾದ ಸುರೇಶ್ ಗೌಡ, ಮೀನಾಕ್ಷಿ, ಗೀತಾ, ಜನಾರ್ದನ, ಶಿವರಾಮ್, ಜಿ.ಪಂ ಸದಸ್ಯೆ ಆಶಾ ತಿಮ್ಮಪ್ಪ ಗೌಡ, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಹೆಚ್.ಡಿ.ಶಿವರಾಮ್, ಮಹಿಳಾ ಗೌಡ ಸಂಘದ ಅಧ್ಯಕ್ಷ ನೇತ್ರಾವತಿ ಪಿ ಗೌಡ, ಯುವ ಗೌಡ ಸಂಘದ ಅಧ್ಯಕ್ಷ ರಾಧಾಕೃಷ್ಣ ನಂದಿಲ, ಅಕಾಡೆಮಿ ಸದಸ್ಯರಾದ ಮಾಧವ ಗೌಡ ಬೆಳ್ಳಾರೆ, ತಿರುಮಲೇಶ್ವರಿ, ಪರಶುರಾಮ ಚಿಲ್ತಡ್ಕ, ದೇವರಾಜ್, ಬಾರಿಯಂಡ ಜೋಯಪ್ಪ, ಶ್ವೇತಾ ಮಡಪ್ಪಾಡಿ, ಸುರೇಶ್ ಎಂ.ಹೆಚ್, ಕುಂಬುಗೌಡನ ಪ್ರಸನ್ನ, ಕಾನೆಹಿತ್ಲು ಮೊಣ್ಣಪ್ಪ, ದಿನೇಶ್ ಪಾಲೆಮಜಲು  ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಕಾಡೆಮಿ ಸದಸ್ಯ ಯತೀಶ್ ಕುಮಾರ್ ಗೌಡ ಸ್ವಾಗತಿಸಿ, ವಂದಿಸಿದರು. ಅಕಾಡೆಮಿ ಸದಸ್ಯ ಕೆ.ಟಿ.ವಿಶ್ವನಾಥ, ಗೀತಾ ಜಯರಾಮ್, ಸಂಧ್ಯಾ ಬೈಲಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X