Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕ್ರಿಮಿನಾಶಕ ಬಳಕೆಯಿಂದ ವಿಷಪೂರಿತ ಆಹಾರ...

ಕ್ರಿಮಿನಾಶಕ ಬಳಕೆಯಿಂದ ವಿಷಪೂರಿತ ಆಹಾರ ಉತ್ಪಾದನೆ: ಡಾ.ಬಿಮಲ್ ಚಜೇರ್

ವಾರ್ತಾಭಾರತಿವಾರ್ತಾಭಾರತಿ3 Feb 2019 10:08 PM IST
share

ಬೆಂಗಳೂರು, ಫೆ. 3: ಕೃಷಿ ಚಟುವಟಿಕೆಯಲ್ಲಿ ಅತಿಯಾಗಿ ಕ್ರಿಮಿನಾಶಕ ಬಳಸಲಾಗುತ್ತಿದೆ. ಇದರಿಂದ ವಿಷಪೂರಿತ ಆಹಾರ ಉತ್ಪಾದನೆಯಾಗುತ್ತಿದ್ದು, ಹಲವು ಕಾಯಿಲೆಗಳು ಹುಟ್ಟಿಕೊಳ್ಳುತ್ತಿವೆ ಎಂದು ದಿಲ್ಲಿ ಏಮ್ಸ್ ಆಸ್ಪತ್ರೆಯ ನಿವೃತ್ತ ಪ್ರಾಧ್ಯಪಕ ಡಾ.ಬಿಮಲ್ ಚಜೇರ್ ಹೇಳಿದ್ದಾರೆ. 

ಲಯನ್ಸ್ ಕ್ಲಬ್ ವತಿಯಿಂದ ಮಹಾಲಕ್ಷ್ಮೀ ಲೇಔಟ್‌ನ ಆರ್.ಜಿ.ರಾಯಲ್ ಸಭಾ ಮಂಟಪದಲ್ಲಿ ನಡೆದ ‘ಬೈಪಾಸ್ ದಿ ಬೈಪಾಸ್ ಸರ್ಜರಿ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧಿಕ ಇಳಿವರಿ ಪಡೆಯುವ ಉದ್ದೇಶದಿಂದ ಹಾಗೂ ಅತಿ ವೇಗವಾಗಿ ಸ್ಥಿತಿವಂತರಾಗಬೇಕೆಂಬ ಅಭಿಲಾಷೆಯಿಂದ ಕೃಷಿಗೆ ರಾಸಾಯನಿಕಗಳನ್ನು ಬಳಕೆ ಮಾಡುತ್ತಿರುವುದು ದುರಂತ ಎಂದು ತಿಳಿಸಿದರು.

ಪ್ರಸ್ತುತ ದಿನಮಾನಗಳಲ್ಲಿ ಮಿತ ಆಹಾರ ಸೇವನೆ ಹಾಗೂ ಯೋಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಜೀವನಶೈಲಿಯನ್ನು ರೂಪಿಸಿಕೊಂಡರೆ ರೋಗಮುಕ್ತ ಜೀವನ ನಡೆಸಲು ಸಾಧ್ಯ. ಈಗಿರುವ ಜೀವನಶೈಲಿಯನ್ನು ಬದಲಾಯಿಸಿಕೊಂಡರೆ ಆರೋಗ್ಯಪೂರ್ಣ ಜೀವನ ನಡೆಸಬಹುದು ಎಂದರು.

ಇತ್ತೀಚಿನ ದಿನಗಳಲ್ಲಿ ಕಿರಿಯ ವಯಸ್ಕರಿಗೂ ಹೃದಯ ಸಂಬಂಧಿತ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ನಿಯತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯಕ. ರಕ್ತದೊತ್ತಡ, ಸಕ್ಕರೆ ಕಾಯಿಲೆ ಹಾಗೂ ಕೊಬ್ಬಿನಾಂಶದ ಬಗ್ಗೆ ಜಾಗರೂಕತೆ ವಸಿಕೊಳ್ಳಬಹುದು. ಬಹುತೇಕ ಜನರಿಗೆ ಅತಿಯಾದ ಕೊಬ್ಬಿನಾಂಶದಿಂದ ಹೃದಯರೋಗ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಅಭಿಪ್ರಾಯಪಟ್ಟರು.

ಪ್ರತಿಯೊಂದು ಆಹಾರದಲ್ಲಿಯೂ ಪ್ರಕೃತಿದತ್ತವಾಗಿ ಎಣ್ಣೆ ಅಂಶವಿರುತ್ತದೆ. ಅಲ್ಲದೇ, ಮಾಂಸಹಾರ ಮತ್ತು ಹಾಲು ಉತ್ಪನ್ನಗಳ ಸೇವನೆಗಳಿಗಿಂತ ತರಕಾರಿ ಪದಾರ್ಥಗಳನ್ನು ಹೆಚ್ಚಾಗಿ ಬಳಸಬೇಕು. ಸಾವಯವ ಸಿರಿಧಾನ್ಯ ಆಹಾರ ಸೇವೆನೆ ಹಾಗೂ ಯೋಗ, ವ್ಯಾಯಾಮ ಚಟುವಟಿಕೆಗಳಲ್ಲಿ ಸಕ್ರಿಯರಾಗಬೇಕು ಎಂದು ಸಲಹೆ ನೀಡಿದರು.

ಲಯನ್ಸ್‌ ಕ್ಲಬ್ ಅಂತಾರಾಷ್ಟ್ರೀಯ ಸಭೆಯ ಮುಖ್ಯಸ್ಥ ಜಿ.ವೆಂಕಟೇಶ್ ಮಾತನಾಡಿ, ಸಮಾಜದಿಂದ ಹಲವು ರೀತಿಯ ಕೊಡುಗೆಗಳನ್ನು ಪಡೆದುಕೊಂಡಿರುವ ನಾವು ಮಾನವೀಯತೆಯನ್ನು ಬೆಳೆಸಿಕೊಂಡು ಸಮಾಜ ಸುಧಾರಣೆಗಾಗಿ ಬದುಕಬೇಕು. ಭ್ರಷ್ಟಾಚಾರ ಮುಕ್ತ ಹಾಗೂ ಅಹಿಂಸಾ ತತ್ವಗಳನ್ನು ಅಳವಡಿಸಿಕೊಂಡು ಮೌಲ್ಯಯುಯುತ ಜೀವನ ನಡೆಸಬೇಕು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಮಲ್ಟಿಪಲ್ ಕೌನ್ಸಿಲ್‌ನ ಅಧ್ಯಕ್ಷ ಎಚ್.ಕೆ.ಗಿರಿಧರ, ಅನಿಲ್ ಕುಮಾರ್, ಸ್ವಾಗತ ಸಮಿತಿಯ ಖಜಾಂಚಿ ಆರ್. ಶಿವಶಂಕರ್, ಕೆ.ಸತ್ಯನಾರಾಯಣ್ ರಾಜು, ಬಿ.ಮೋಹನ್, ನಿತ್ಯಾನಂದ ಪೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X