ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ: ಆರೋಪಿ ಸೆರೆ

ಬೆಂಗಳೂರು, ಫೆ.3: ಬಾಡಿಗೆ ಮನೆಯೊಂದರಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
ಮಂಡ್ಯ ಮೂಲದ ಪ್ರವೀಣ್ ಎಂಬಾತ ಬಂಧಿತ ಆರೋಪಿ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ನಗರದ ನಾಗರಭಾವಿ ಬಳಿ ಬಾಡಿಗೆಗೆ ಪಡೆದ ಮನೆಯೊಂದರಲ್ಲಿ ಆರೋಪಿಯು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎಂಬ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ದಾಳಿಯಲ್ಲಿ ಮಾಗಡಿ ಹಾಗೂ ಕುಣಿಗಲ್ ಮೂಲದ ಮೂವರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.
Next Story





