ಧರಣಿ ಕುಳಿತಲ್ಲೇ ಪೊಲೀಸರಿಗೆ ಪ್ರಶಸ್ತಿ ಪ್ರದಾನಿಸಿದ ಮಮತಾ

ಹೊಸದಿಲ್ಲಿ, ಫೆ.4: ಪಶ್ಚಿಮ ಬಂಗಾಳದಲ್ಲಿ ಪೊಲೀಸರು ಮತ್ತು ಸಿಬಿಐ ಅಧಿಕಾರಿಗಳ ಕಚ್ಚಾಟದ ಹಿನ್ನೆಲೆಯಲ್ಲಿ ಸತ್ಯಾಗ್ರಹ ನಡೆಸುತ್ತಿರುವ ಸಿಎಂ ಮಮತಾ ಬ್ಯಾನರ್ಜಿ ಈ ನಡುವೆ ಪೊಲೀಸ್ ಅಧಿಕಾರಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವೇದಿಕೆಯಲ್ಲೇ ಮಮತಾ ಬ್ಯಾನರ್ಜಿಯವರು ಪೊಲೀಸ್ ಅಧಿಕಾರಿಗಳಿಗೆ ಪ್ರಶಸ್ತಿಗಳನ್ನು ಪ್ರದಾನಿಸಿದರು. ರೋಸ್ ವ್ಯಾಲಿ ಮತ್ತು ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೊಲ್ಕತ್ತಾ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್ ನಾಶಪಡಿಸಿರಬಹುದು ಎಂದು ಕೇಂದ್ರ ಸರಕಾರ ಆರೋಪಿಸುತ್ತಿದೆ.
Next Story





