ಟೆಂಪೊ ಟ್ರಾವಲರ್ ಹರಿದು ಕಾರ್ಮಿಕ ಮೃತ್ಯು

ಬೆಂಗಳೂರು, ಫೆ.4: ಶರವೇಗವಾಗಿ ಬಂದ ಟೆಂಪೊ ಟ್ರಾವಲರ್ ಹರಿದು ರಸ್ತೆ ದಾಟುತ್ತಿದ್ದ ಕಾರ್ಮಿಕರೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಪೀಣ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚೊಕ್ಕಸಂದ್ರದ ಮುಖೇಶ್ (35) ಮೃತ ಕಾರ್ಮಿಕ ಎಂದು ಪೊಲೀಸರು ಗುರುತಿಸಿದ್ದಾರೆ.
ಪೀಣ್ಯದ ಉಕ್ಕಿನ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಮುಖೇಶ್, ರವಿವಾರ ರಾತ್ರಿ 7:45ರ ಸುಮಾರಿಗೆ ಮನೆಗೆ ಹೋಗಲು ಜಾಲಹಳ್ಳಿ ಟಿವಿಎಸ್ ಕ್ರಾಸ್‌ನ 100 ಅಡಿ ರಸ್ತೆಯನ್ನು ದಾಟುತ್ತಿದ್ದಾಗ ವೇಗವಾಗಿ ಬಂದ ಟೆಂಪೋ ಟ್ರಾವಲರ್ ಹರಿದು ಗಂಭೀರವಾಗಿ ಗಾಯಗೊಂಡಿದ್ದರು ಎನ್ನಲಾಗಿದೆ.
ಬಳಿಕ ಸ್ಥಳೀಯರ ಸಹಾಯದಿಂದ ಮುಖೇಶ್ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಪೀಣ್ಯ ಸಂಚಾರ ಪೊಲೀಸರು ಟೆಂಪೋ ಟ್ರಾವಲರ್ ಚಾಲಕ ಜಗದೀಶ್‌ನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
Next Story





