Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.16: ಕರಾವಳಿ ಪರಿಸರ - ಅರಣ್ಯ...

ಫೆ.16: ಕರಾವಳಿ ಪರಿಸರ - ಅರಣ್ಯ ಪರಿಸ್ಥಿತಿ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ4 Feb 2019 10:21 PM IST
share

ಭಟ್ಕಳ, ಫೆ. 4: ಕರಾವಳಿ ಪರಿಸರ - ಅರಣ್ಯ ಪರಿಸ್ಥಿತಿ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣ ಫೆ.16 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ತನಕ ಭಟ್ಕಳದ ಸಾಗರ ರಸ್ತೆಯಲ್ಲಿರುವ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ, ಪಶ್ಚಿಮಘಟ್ಟ ಕಾರ್ಯಪಡೆಯ ಮಾಜಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ತಿಳಿಸಿದ್ದಾರೆ.

ಕರಾವಳಿ ಪರಿಸರ ಪರಿಸ್ಥಿತಿ ಕುರಿತು ಒಂದು ದಿನದ ವಿಚಾರ ಸಂಕಿರಣ ಆಯೋಜಿಸಲಾಗಿದ್ದು ವೃಕ್ಷಲಕ್ಷ ಆಂದೋಲನ, ಸೆಂಟರ್‍ಫಾರ್ ಪಾಲಿಸಿ ರಿಸರ್ಚ ಕಾರವಾರ ಇವರ ಸಹಯೋಗದಲ್ಲಿ ನಡೆಯಲಿರುವ ವಿಚಾರ ಸಂಕಿರಣಕ್ಕೆ ಅರಣ್ಯ, ಕರಾವಳಿ ಪರಿಸರ ತಜ್ಞರು ಆಗಮಿಸಿ ಸೂಕ್ತ ಸಲಹೆ, ಮಾರ್ಗದರ್ಶನ ನೀಡಲಿದ್ದಾರೆ ಎಂದು ತಿಳಿಸಿದರು.

ವಿಚಾರ ಸಂಕಿರಣದಲ್ಲಿ ಕರಾವಳಿಯ ಪ್ರಚಲಿತ ವಿದ್ಯಮಾನಗಳು, ಜೌಗು ಭೂಮಿ, ಅಳಿವೆ, ಕಾಂಡ್ಲಾಗಳ ಸಂರಕ್ಷಣೆ ಸಿ.ಆರ್.ಜಡ್. ಕಾಯಿದೆ, ರಾಷ್ಟ್ರೀಯ  ಹೆದ್ದಾರಿ ಅಗಲೀಕರಣದ  ಅಧ್ವಾನಗಳು ಕುರಿತು ತಜ್ಞರು ಮಾಹಿತಿ ವರದಿ ಮಂಡನೆಮಾಡಲಿದ್ದು ಸಂಜೆ ಸಂವಾದ ನಡೆಯಲಿದೆ. ಪ್ಲಾಸ್ಟಿಕ್ ಮಾಲಿನ್ಯ ತಡೆ ಕುರಿತ ಪ್ರಯೋಗಗಳು ಮಂಡಿತವಾಗಲಿದ್ದು ಕರಾವಳಿಯ ಹಸಿರು ಕವಚ ಯೋಜನೆ ಫಲಶೃತಿ ಕುರಿತೂ ಮಾಹಿತಿ ನೀಡಲಿದ್ದಾರೆ. ವಿಚಾರ ಸಂಕಿರಣದಲ್ಲಿ ಕಾರವಾರದ ವಿ.ವಿ. ಸ್ನಾತಕೋತ್ತರ ಕೇಂದ್ರ, ಭಾರತೀಯ ವಿಜ್ಞಾನ ಸಂಸ್ಥೆ ವಿಜ್ಞಾನಿಗಳು ಭಾಗವಹಿಸಲಿದ್ದು ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9448221117, 9481461612 ಇವರನ್ನು ಸಂಪರ್ಕಿಸಬಹುದು ಎಂದರು.

ವಿಚಾರ ಸಂಕಿರಣದಲ್ಲಿ ಅರಣ್ಯ ಇಲಾಖೆ, ಅರಣ್ಯ ಕಾಲೇಜು, ಕೃಷಿ ವಿಜ್ಞಾನ ಕೇಂದ್ರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಕಾರ ನೀಡಲಿದ್ದು ಜಿಲ್ಲಾ ಅರಣ್ಯ ಅಧಿಕಾರಿಗಳು, ಕೃಷಿ ವಿಜ್ಞಾನ ಕೇಂದ್ರ, ಅರಣ್ಯ ಕಾಲೇಜು, ಕದಂಬ ಸಾವಯವ ಸಂಸ್ಥೆಗಳ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿಸಿದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X