ರಾಜ್ಯ ಸರಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ: ರಾಷ್ಟ್ರಮಟ್ಟಕ್ಕೆ ಮಂಗಳೂರಿನ ಸುಧೀರ್ ಆಯ್ಕೆ

ಮಂಗಳೂರು, ಫೆ.4: ಮೈಸೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಸರಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು-2018 ಕೂಟದ 45ವರ್ಷಕ್ಕಿಂತ ಹಿರಿಯರ ವಿಭಾಗದಲ್ಲಿ 100 ಮೀ. ಹಾಗೂ 200 ಮೀ. ಓಟದ ಸ್ಪರ್ಧೆಯಲ್ಲಿ ಮಂಗಳೂರಿನ ಸುಧೀರ್ ಎ. ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕಗಳನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಮಂಗಳೂರಿನ ಅತ್ತಾವರ ನಿವಾಸಿಯಾಗಿದ್ದು, ಅಬಕಾರಿ ಇಲಾಖೆಯಲ್ಲಿ ಅಬಕಾರಿ ರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Next Story





