Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಡಿಯುವ ನೀರಿನ ಸಮಸ್ಯೆ ಬಾರದಂತೆ...

ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಗಮನಹರಿಸುವಂತೆ ಸೂಚನೆ

ಬಂಟ್ವಾಳ ತಾಲೂಕು ಪಂಚಾಯತ್ ಮಾಸಿಕ ಕೆಡಿಪಿ ಸಭೆ

ವಾರ್ತಾಭಾರತಿವಾರ್ತಾಭಾರತಿ5 Feb 2019 4:53 PM IST
share
ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಗಮನಹರಿಸುವಂತೆ ಸೂಚನೆ

ಬಂಟ್ವಾಳ, ಫೆ. 5: ಫೆಬ್ರವರಿ ತಿಂಗಳಾಂತ್ಯಕ್ಕೆ ತಾಲೂಕಿನ ಕೆಲ ಭಾಗಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿದ್ದು, ಸಮಸ್ಯೆ ಪರಿಹಾರಕ್ಕೆ ಈಗಿಂದಲೇ ಕಾರ್ಯನಿರ್ವಹಿಸುವಂತೆ ತಾಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಂಟ್ವಾಳ ತಾಲೂಕು ಪಂಚಾಯತ್ ಮಾಸಿಕ ಕೆಡಿಪಿ ಸಭೆಯು ಬಿ.ಸಿ.ರೋಡ್‍ನ ತಾಪಂ ಎಸ್‍ಜಿಎಸ್‍ವೈ ಸಭಾಂಗದಲ್ಲಿ ಮಂಗಳವಾರ ನಡೆಯಿತು.
ಕುಡಿಯುವ ನೀರಿನ ಅಭಾವವಿರುವ ಗ್ರಾಮದಲ್ಲಿ ಜಿಪಂ ಅನುದಾನ ಬಳಸಿ ಹೊಸ ಕೊಳವಿ ಬಾವಿಯನ್ನು ನಿರ್ಮಿಸಿ. ಅಲ್ಲದೆ, ಪಾಲುಬಿದ್ದ ಕೊಳವೆ ಬಾವಿಯನ್ನು ನವೀಕರಿಸುವ ಅಥವಾ ಇನ್ನೊಂದು ಕಡೆ ಜೋಡಿಸುವ ಕಾಮಗಾರಿಯನ್ನು ನಡೆಸುವಂತೆ ತಾಪಂ ಇಒ ರಾಜಣ್ಣ ಅವರು ಮೆಸ್ಕಾಂ ಅಧಿಕಾಗಳಿಗೆ ಸೂಚನೆ ನೀಡಿದರು.

ಬಂಟ್ವಾಳ ಅರಣ್ಯ ವಲಯಾಧಿಕಾರಿ ಸುರೇಶ್ ಸಭೆಗೆ ಮಾಹಿತಿ ನೀಡಿ, ಅರಣ್ಯ ಇಲಾಖೆಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಎಸ್ಸಿ, ಎಸ್ಟಿ ಹಾಗೂ ಅರಣ್ಯ ಪ್ರದೇಶದ ನಿವಾಸಿಗಳಿಗೆ ಎಲ್‍ಪಿಜಿ ಗ್ಯಾಸ್ ಸೌಲಭ್ಯವಿದ್ದು, ಈ ಬಗ್ಗೆ 50 ಗ್ರಾಮಗಳಿಗೆ ಅರ್ಜಿ ಸಹಿತ ಮಾಹಿತಿ ನೀಡಲಾಗಿದೆ. ಆದರೆ, 4 ಗ್ರಾಮಗಳ 17 ಅರ್ಜಿಗಳು ಮಾತ್ರ ಬಂದಿವೆ ಎಂದು ತಿಳಿಸಿದರು.

ಅರಣ್ಯ ಪ್ರದೇಶದಲ್ಲಿರುವ ಗ್ರಾಮಗಳಿಗೆ ಎಸ್ಸಿ, ಎಸ್ಟಿ ಗ್ಯಾಸ್ ಯೋಜನೆಯ ಫಲಾನುಭವಿಗಳ ಆಯ್ಕೆಯ ಬಗ್ಗೆ ಅಧ್ಯಕ್ಷರಿಗೆ ಜವಾಬ್ದಾರಿ ನೀಡಿ, ಮತ್ತೊಮ್ಮೆ ಪರಿಶೀಲನೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ ಮಾಡಲಾಯಿತು.

ತಾಲೂಕು ಆರೋಗ್ಯ ಅಧಿಕಾರಿ ದೀಪಾ ಪ್ರಭು ಸಭೆಗೆ ಮಾಹಿತಿ ನೀಡಿ, ಬಂಟ್ವಾಳದಲ್ಲಿ ಮಂಗನ ಸಾವು, ಕಾಯಿಲೆ ಪ್ರಕರಣಗಳು ಇದುವರೆಗೂ ಪತ್ತೆಯಾಗಿಲ್ಲ. ಈ ಬಗ್ಗೆ ಪ್ರತೀ ಗ್ರಾಮ ಮಟ್ಟದಲ್ಲಿ ಅರಣ್ಯ, ಆರೋಗ್ಯ ಇಲಾಖೆಯ ಸಹಭಾಗಿತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದ್ದು, ನಿಂತರವಾಗಿ ಜಾಗೃತಿ ಕಾರ್ಯಾಗಾರ ನಡೆಯುತ್ತಿದೆ ಎಂದರು.

ಮುಂಜಾಗೃತಾ ಕ್ರಮವಾಗಿ ಅರಣ್ಯ ಸಿಬ್ಬಂದಿ, ಕಾಡಂಚಿನ ಪ್ರದೇಶದ ಜನರನ್ನು ಗುರುತಿಸಿ ಮೈಗೆ ಹಚ್ಚುವ ರೋಗ ನಿರೋಧಕ ಡಿಎಂಪಿ ಆಯಿಲ್ ಅನ್ನು ವಿತರಣೆ ಮಾಡಲಾಗಿದೆ. ಕಾರಿಂಜ ಸಹಿತ ತಾಲೂಕಿನ ಇತರ ಭಾಗದಲ್ಲಿ ಕಾರ್ಯಾಚರಣೆ ನಡೆಸಿ,  ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ರಕ್ತ ಮಾದರಿ ಸಂಗ್ರಹಿಸಿ ಶಿವಮೊಗ್ಗ ಲ್ಯಾಬ್‍ಗೆ ಕಳುಹಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಸಂಬಂಧಿಸಿ, ಚರ್ಚೆ ನಡೆಯಿತು. ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ತಹಶೀಲ್ದಾರ್ ರಶ್ಮಿ ಕಿಶೋರ್ ಉಪಸ್ಥಿತರಿದ್ದು, ಸಲಹೆ ನೀಡಿದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ.ಬಂಗೇರ ಹಾಜರಿದ್ದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X