ಬೆಂಗಳೂರು : ವಾಯುಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಸಾಂದರ್ಭಿಕ ಚಿತ್ರ
ಬೆಂಗಳೂರು, ಫೆ.5: ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ನಗರದ ಕಗ್ಗಲೀಪುರದ ಬಳಿ ತುರ್ತು ಭೂ ಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.
ಮಂಗಳವಾರ ಮಧ್ಯಾಹ್ನ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಘಟನೆಯಲ್ಲಿ ರಮೇಶ್ ಮತ್ತು ಪೂನ್ ಇಬ್ಬರು ಪೈಲೆಟ್ಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಎಚ್ಚೆತ್ತುಕೊಂಡು ಕಗ್ಗಲೀಪುರದ ಖಾಲಿ ಜಮೀನೊಂದರಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಗಿದೆ ಎಂದು ವರದಿಯಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಸೇನಾ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಎಂದಿನಂತೆ ಹೆಲಿಕಾಪ್ಟರ್ ದೈನಂದಿನ ತರಬೇತಿ ಹಾರಾಟದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಅಲ್ಲದೆ, ಶುಕ್ರವಾರ (ಫೆ.1) ಮಿರಾಜ್-2000 ಯುದ್ಧ ವಿಮಾನ ಎಚ್ಎಎಲ್ ವಿಮಾನ ನಿಲ್ದಾಣದ ಬಳಿ ಪತನಗೊಂಡು ಇಬ್ಬರು ಪೈಲೆಟ್ಗಳು ಮೃತಪಟ್ಟಿದ್ದರು.
Next Story





