ಉಜ್ವಲ ಯೋಜನೆಯಡಿ 400 ಫಲಾನುಭವಿಗಳಿಗೆ ಗ್ಯಾಸ್ ವಿತರಣೆ

ಉಡುಪಿ, ಫೆ.5: ಕೇಂದ್ರ ಸರಕಾರದ ಉಜ್ವಲ ಯೋಜನೆಯಡಿಯಲ್ಲಿ 400 ಫಲಾನುಭವಿಗಳಿಗೆ ಗ್ಯಾಸ್ ವಿತರಣಾ ಕಾರ್ಯಕ್ರಮವು ಮಂಗಳವಾರ ಕೊರ್ಕ್ಕಣೆಯಲ್ಲಿ ಜರಗಿತು.
ಗ್ಯಾಸ್ ವಿತರಿಸಿ ಮಾತನಾಡಿದ ಉಡುಪಿ ಶಾಸಕ ರಘುಪತಿ ಭಟ್, ಕೇಂದ್ರ ಸರಕಾರ ಜನಸಾಮಾನ್ಯರ ಕಣ್ಣೊರೆಸುವ ಕೆಲಸ ಮಾಡುತ್ತಿದೆ. ಒಲೆಯ ಮುಂದೆ ಕೂತು ಕಣ್ಣೀರಿಡುತ್ತಿದ್ದ ತಾಯಂದಿರ ಮುಖದಲ್ಲಿ ಇಂದು ಮಂದಹಾಸ ಕಾಣುತ್ತಿದೆ ಎಂದು ತಿಳಿಸಿದರು.
ಈ ಸಂದಭರ್ಪದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರತಾಪ್ ಹೆಗ್ಡೆ, ಮೈರ್ಮಾಡಿ ಸುಧಾಕರ್ ಶೆಟ್ಟಿ, ಚೇರ್ಕಾಡಿ ಗ್ರಾಪಂ ಅಧ್ಯಕ್ಷ ಹರೀಶ್ ಶೆಟ್ಟಿ, ಕೊಕ್ಕರ್ಣೆ ಗ್ರಾಪಂ ಅಧ್ಯಕ್ಷೆ ಆಶಾ ಲತಾ, ಉದ್ಯಮಿ ಬಾಲಕೃಷ್ಣ ಹೆಗ್ಡೆ, ತಾಪಂ ಸದಸ್ಯರಾದ ವಿಜಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Next Story





