ಕೋಲ್ಕತಾ ಪೊಲೀಸ್ ಆಯುಕ್ತರ ವಿರುದ್ಧ ಶಿಸ್ತುಕ್ರಮಕ್ಕೆ ಪಶ್ಚಿಮ ಬಂಗಾಳ ಸರಕಾರಕ್ಕೆ ಕೇಂದ್ರ ಸೂಚನೆ
ಹೊಸದಿಲ್ಲಿ,ಫೆ.5: ಪ.ಬಂಗಾಳ ಮತ್ತು ಕೇಂದ್ರ ಸರಕಾರಗಳ ನಡುವಿನ ಬಿಕ್ಕಟ್ಟಿನ ಕೇಂದ್ರಬಿಂದುವಾಗಿರುವ ಕೋಲ್ಕತಾದ ಪೊಲೀಸ್ ಆಯುಕ್ತ ರಾಜೀವ್ ಕುಮಾರ ಅವರಿಗೆ ಹೊಸದೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಬೀದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಅವರ ವಿರುದ್ಧ ಶಿಸ್ತುಕ್ರಮಗಳನ್ನು ಆರಂಭಿಸುವಂತೆ ಕೇಂದ್ರವು ಮಂಗಳವಾರ ಪಶ್ಚಿಮ ಬಂಗಾಳ ಸರಕಾರಕ್ಕೆ ಸೂಚಿಸಿದೆ.
ಕುಮಾರ್ ಅವರಿಂದ ಅಶಿಸ್ತಿನ ನಡವಳಿಕೆ ಮತ್ತು ಅಖಿಲ ಭಾರತ ಸೇವೆಗಳ(ನಡವಳಿಕೆ) ನಿಯಮಾವಳಿ,1968 ಮತ್ತು ಅಭಾಸೇ(ಶಿಸ್ತು ಮತ್ತು ಮೇಲ್ಮನವಿ) ನಿಯಮಾವಳಿ 1969ರ ಉಲ್ಲಂಘನೆಯನ್ನು ಉಲ್ಲೇಖಿಸಿ ಪ.ಬಂಗಾಳದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆಯಲಾಗಿದ್ದು,ಅವರ ವಿರುದ್ಧ ಕ್ರಮವನ್ನು ಜರುಗಿಸುವಂತೆ ಸೂಚಿಸಲಾಗಿದೆ ಎಂದು ಗೃಹಸಚಿವಾಲಯದ ಮೂಲಗಳು ತಿಳಿಸಿವೆ.
Next Story