Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ಫೆ.7ರಿಂದ ಎಸ್‌ಒಸಿ...

ಮಣಿಪಾಲ: ಫೆ.7ರಿಂದ ಎಸ್‌ಒಸಿ ‘ಆರ್ಟಿಕಲ್-19’; ಇರಾಕಿ ಒಮರ್ ಮಹಮ್ಮದ್ ಆನ್‌ಲೈನ್ ನೇರ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ5 Feb 2019 9:00 PM IST
share

ಉಡುಪಿ, ಫೆ.5: ಮಣಿಪಾಲದ ಸ್ಕೂಲ್ ಆಫ್ ಕಮ್ಯುನಿಕೇಷನ್‌ನ ವಾರ್ಷಿಕ ಮಾಧ್ಯಮ ಉತ್ಸವ ‘ಆರ್ಟಿಕಲ್-19’ ಈ ಬಾರಿ ಫೆ.7ರಿಂದ 9ರವರೆಗೆ ವೈವಿದ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಎಸ್‌ಓಸಿಯ ನಿರ್ದೇಶಕಿ ಡಾ.ಪದ್ಮಾರಾಣಿ ತಿಳಿಸಿದ್ದಾರೆ.

ಇಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಿಕೋದ್ಯಮಕ್ಕೆ ಸಂಬಂಧಿಸಿದಂತೆ ಹಲವು ಖ್ಯಾತನಾಮ ಪತ್ರಕರ್ತರು ಉಪನ್ಯಾಸ ನೀಡಲಿದ್ದು, ಪ್ರಬಂಧ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ ಗಳೊಂದಿಗೆ ಸ್ಪರ್ಧೆಗಳು ನಡೆಯಲಿವೆ ಎಂದು ಅವರು ತಿಳಿಸಿದರು.

ಈ ಬಾರಿ ಆರ್ಟಿಕಲ್-19ರ ಪ್ರಧಾನ ಅಂಶ ಇರಾಕಿನ ಇತಿಹಾಸ್ಞರೂ, ಅಲ್ಲಿನ ಖ್ಯಾತ ಪತ್ರಕರ್ತರೂ ಆಗಿರುವ ಒಮರ್ ಮಹಮ್ಮದ್‌ರು ಎಸ್‌ಒಸಿಯ ವಿದ್ಯಾರ್ಥಿಗಳೊಂದಿಗೆ ಆನ್‌ಲೈನ್ ಮೂಲಕ ನಡೆಸುವ ನೇರ ಸಂವಾದವಾಗಿದೆ. ‘ಮೋಸಲ್ ಐ’ ಎಂದೇ ಖ್ಯಾತರಾಗಿರುವ ಒಮರ್, ತನ್ನ ಬ್ಲಾಗ್‌ಗಳ ಮೂಲಕ ಮೋಸೆಲ್‌ನಲ್ಲಿ ನಡೆಯುತಿದ್ದ ಇಸ್ಲಾಮಿಕ್ ಉಗ್ರಗಾಮಿ ಗುಂಪುಗಳ ಬರ್ಬರತೆ ಯನ್ನು ಮೊದಲ ಬಾರಿಗೆ ಬೆಳಕಿಗೆ ತಂದಿದ್ದರು. ಇವರು ಫೆ.8ರಂದು ಅಪರಾಹ್ನ 2:00 ಗಂಟೆಗೆ ಫ್ರಾನ್ಸ್‌ನಿಂದ ವಿದ್ಯಾರ್ಥಿಗಳೊಂದಿಗೆ ನೇರವಾಗಿ ಮಾತನಾಡು ವರು ಎಂದರು.

ಆರ್ಟಿಕಲ್-19ರ ಉದ್ಘಾಟನೆ ಫೆ.7ರ ಬೆಳಗ್ಗೆ 9:30ಕ್ಕೆ ನಡೆಯಲಿದೆ.ಸ್ವರಾಜ್ ಪತ್ರಿಕೆಯ ಸಲಹಾ ಸಂಪಾದಕ ಹಾಗೂ ಅಂಕಣಕಾರ ಆನಂದ ರಂಗನಾಥನ್ ಅವರು ‘ವಿಜ್ಞಾನ, ಆಯ್ಕೆಯ ಸಾದ್ಯತೆ ಮತ್ತು ಸಾರ್ವಜನಿಕ ಪ್ರವಚನ’ ವಿಷಯದ ಕುರಿತು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಅದೇ ದಿನ ಅಪರಾಹ್ನದ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡುವವರು ಮಣಿಪುರದ ಲೇಖಕ ಹಾಗೂ ಚಲನಚಿತ್ರ ನಿರ್ದೇಶಕ ಬಾಬ್ಬಿ ವಾಹೆನ್ಬಮ್. ಮಣಿಪುರ ಚಲನಚಿತ್ರ ಇಡೀ ದೇಶದ ಗಮನ ಸೆಳೆಯುವಂತೆ ಮಾಡಿದವರು ಬಾಬ್ಬಿ. ಅವರು ಫೆ.7ರಂದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಡಾ.ಪದ್ಮಾರಾಣಿ ನುಡಿದರು.

ಖ್ಯಾತ ತೆಲುಗು ಚಲನಚಿತ್ರ ನಿರ್ದೇಶಕ ಹಾಗೂ ಎಸ್‌ಒಸಿಯ ಹಳೆವಿದ್ಯಾರ್ಥಿ ನಾಗ್ ಅಶ್ವಿನ್ ಅವರು ಫೆ.8ರಂದು ತನ್ನ ಪ್ರಸಿದ್ಧ ಚಲನಚಿತ್ರವಾದ ‘ಮಹಾನತಿ’ಯ ಬಗ್ಗೆ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಫೆ.9ರಂದು ಇ-ಕ್ರೀಡಾ ಆಟಗಾರ ಹಾಗೂ ಈ-ಆಟದಲ್ಲಿ ತಾಂತ್ರಿಕ ಪರಿಣಿತಿಯನ್ನು ಪಡೆದು, ಅಭಿವೃದ್ಧಿ ಪಡಿಸಿದ ಅರ್ಚಿಸ್ ಮಾನ್ ಪ್ರಧಾನ್. ಇವರು ‘ಭಾರತದಲ್ಲಿ ಇ-ಕ್ರೀಡೆಯ ಚಿತ್ರಣ’ವನ್ನು ತಮ್ಮ ಉಪನ್ಯಾಸದಲ್ಲಿ ನೀಡಲಿದ್ದಾರೆ.

ಇದರೊಂದಿಗೆ ವಿವಿಧ ಆನ್‌ಲೈನ್ ಹಾಗೂ ಆಪ್‌ಲೈನ್ ಸ್ಪರ್ಧೆಗಳು, ಲಲಿತ ಕಲೆ, ಕ್ರಿಯಾಶೀಲ ಬರವಣಿಗೆ ಹಾಗೂ ಕ್ರೀಡೆಗಳ ಕುರಿತು ಸ್ಪರ್ಧೆಗಳು ನಡೆಯಲಿದೆ. ಇದರೊಂದಿಗೆ ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಕೊನೆಯ ದಿನ ಏಕ್ಸ್‌ಪ್ರೆಸ್ ಎವಾರ್ಡ್ ಸೇರಿದಂತೆ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆಯೂ ನಡೆಯಲಿದೆ ಎಂದು ಡಾ.ಪದ್ಮಾರಾಣಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸುಮೇಧ ರೆಡ್ಡಿ, ತಕ್ಷಕ್ ಪೈ ಹಾಗೂ ಪ್ರಸಿದ್ಧ್ ನಾಯರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X