Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಜಪಾನ್...

‘ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಜಪಾನ್ ಆಸಕ್ತಿ’

ವಾರ್ತಾಭಾರತಿವಾರ್ತಾಭಾರತಿ5 Feb 2019 11:15 PM IST
share

ಬೆಂಗಳೂರು, ಫೆ.5: ಹೊಸದಿಲ್ಲಿಯಲ್ಲಿರುವ ಜಪಾನ್ ದೇಶದ ರಾಯಭಾರಿ ಕೆಂಜಿ ಹಿರಾಮತ್ಸು ನೇತೃತ್ವದ ನಿಯೋಗವು ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯನ್ನು ಭೇಟಿ ಮಾಡಿತು.

ಬೆಂಗಳೂರಿನ ಪೆರಿಫೆರಲ್ ರಿಂಗ್‌ರೋಡ್, ಎಲಿವೇಟೆಡ್ ಕಾರಿಡಾರ್ ಹಾಗೂ ಮೆಟ್ರೋ ಯೋಜನೆಗಳ ಅನುಷ್ಠಾನ ಹಾಗೂ ನಿರ್ವಹಣೆಯ ಬಗ್ಗೆ ಆಸಕ್ತಿ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದ ರಾಯಭಾರಿ, ಬೆಂಗಳೂರಿನಲ್ಲಿ ಜಪಾನಿನ ಅನೇಕ ಕಂಪನಿಗಳು ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿನ ಕೈಗಾರಿಕಾ ಸ್ನೇಹಿ ವಾತಾವರಣಕ್ಕೆ ರಾಜ್ಯ ಸರಕಾರಕೆ್ಕ ಅಭಿನಂದನೆಗಳನ್ನು ಸಲ್ಲಿಸಿದರು.

ಸರಕಾರ ತುಮಕೂರಿನ ವಸಂತ ನರಸಾಪುರದಲ್ಲಿ ಅಭಿವೃದ್ಧಿಪಡಿಸುತ್ತಿರುವ ಜಪಾನಿ ಕೈಗಾರಿಕಾ ಪ್ರದೇಶದಲ್ಲಿ ಜಪಾನಿನ ವಿವಿಧ ಕಂಪನಿಗಳು ಹೂಡಿಕೆ ಮಾಡಲು ಉತ್ಸುಕವಾಗಿದೆ ಎಂದು ಕೆಂಜಿ ಹಿರಾಮತ್ಸು ತಿಳಿಸಿದರು.

ರಾಜ್ಯ ಸರಕಾರದ ಅನೇಕ ಪ್ರಗತಿ ಯೋಜನೆಗಳಲ್ಲಿ ಜಪಾನ್ ದೇಶದ ಸಹಭಾಗಿತ್ವವಿದೆ ಎಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ತುಮಕೂರಿನಲ್ಲಿ ಜಪಾನಿ ಕೈಗಾರಿಕಾ ಪ್ರದೇಶಕ್ಕಾಗಿ 519.55 ಎಕರೆ ಪ್ರದೇಶವನ್ನು ಮೀಸಲಿಟ್ಟಿದ್ದು, ಇಲ್ಲಿತಲೆ ಎತ್ತಲಿರುವ ಈ ಕೈಗಾರಿಕಾ ನಗರ, ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರಿನ ಪ್ರಮುಖ ಭಾಗವಾಗಲಿದೆ ಎಂದರು.

ಇಲ್ಲಿ ಭಾರಿ ಇಂಜಿನಿಯರಿಂಗ್ ಮತ್ತು ಯಂತ್ರೋಪಕರಣಗಳು, ಆಟೋಮೇಟಿವ್ ಮತ್ತು ಆಟೋ ಬಿಡಿಭಾಗಗಳು ಹಾಗೂ ಏರೋ ಸ್ಪೇಸ್ ಬಿಡಿಭಾಗಗಳನ್ನು ಉತ್ಪಾದಿಸುವ ಘಟಕಗಳನ್ನು ಸ್ಥಾಪಿಸಲಾಗುವುದು. ಕೈಗಾರಿಕಾ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳಾದ ಕಾಂಕ್ರೀಟ್ ರಸ್ತೆ, ಒಳಚರಂಡಿ ವ್ಯವಸ್ಥೆ ಸೇರಿದಂತೆ ನೀರು ಸಂಸ್ಕರಣಾ ಘಟಕ, ವಿದ್ಯುತ್ ಉಪ ಕೇಂದ್ರ ಸ್ಥಾಪನೆ, ನೀರು ಸರಬರಾಜು ಮುಂತಾದ ಕಾಮಗಾರಿಗಳು ಪ್ರತಿಯಲ್ಲಿವೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಭಾರಿ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್, ಜಪಾನ್ ರಾಯಭಾರಿ ಕಚೇರಿಯ ಪ್ರಥಮ ಕಾರ್ಯದರ್ಶಿ ಉತೇಕ್, ಬೆಂಗಳೂರಿನಲ್ಲಿರುವ ಜಪಾನಿನ ಕೌನ್ಸಲ್ ಜನರಲ್ ತಕಯುಕಿ ಕಿತಗಾವ, ವೈಸ್ ಕೌನ್ಸಲ್ ಮಿತ್ಸುಹಿರೊ ಅಮಾವ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶ ತುಷಾರ್ ಗಿರಿನಾಥ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X