ಪ್ರತಿಯೊಬ್ಬರಿಗೂ ವೃತ್ತಿ ಗೌರವ ಅತಿಅಗತ್ಯ: ಡಿವೈಎಸ್ಪಿ ದಿನೇಶ್

ಉಡುಪಿ, ಫೆ. 6: ಯಾವುದೇ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಪ್ರತಿಯೊಬ್ಬ ನೌಕರ ನಿಗೂ ತನ್ನ ವೃತ್ತಿಯ ಬಗ್ಗೆ ಗೌರವವನ್ನು ಹೊಂದಿರಬೇಕು ಎಂದು ಕುಂದಾಪುರ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಬಿ.ಕೆ.ದಿನೇಶ್ ಕುಮಾರ್ ಹೇಳಿದ್ದಾರೆ.
ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಲಾದ ವಿದ್ಯಾರ್ಥಿ ದರ್ಬಾರ್ ಸಂವಾದ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿ ಯಾಗಿ ಮಾತನಾಡುತಿದ್ದರು.
ವೃತ್ತಿ ಗೌರವ ಹಾಗೂ ವೃತ್ತಿ ನಿಷ್ಠೆ ಇಲ್ಲದಿದ್ದರೆ ತನ್ನ ಬದುಕಿನ ಸಾರ್ಥಕ್ಯವನ್ನು ಕಂಡುಕೊಳ್ಳಲಾರರು. ನನಗೆ ನನ್ನ ವೃತ್ತಿಯ ಬಗ್ಗೆ ವಿಶೇಷವಾದ ಗೌರವ ಇದೆ. ಆ ವೃತ್ತಿ ಗೌರವ ಕರ್ತವ್ಯ ನಿಷ್ಠೆ ಪ್ರಾಮಾಣಿಕತೆಯನ್ನು ಕಲಿಸಿಕೊಟ್ಟಿದೆ ಎಂದು ಅವರು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿಗಳಾದ ಮೆಲಿಷಾ, ರೀನಾ ಡಿಸೋಜ, ಸನ್ನಿ ಆ್ಯಂಟನಿ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಬೋಧಕ ಬೋಧಕೇತರ ಸಿಬ್ಬಂದಿ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Next Story





