Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಪೆರಿಫೆರಲ್ ರಿಂಗ್ ರಸ್ತೆ...

ಬೆಂಗಳೂರು: ಪೆರಿಫೆರಲ್ ರಿಂಗ್ ರಸ್ತೆ ಜಾಗತಿಕ ಟೆಂಡರ್ ಮಾರ್ಚ್‌ಗೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ6 Feb 2019 10:26 PM IST
share

ಬೆಂಗಳೂರು, ಫೆ.6 : ನಗರದ ಪೆರಿಫೆರಲ್ ರಿಂಗ್ ರಸ್ತೆ(ಪಿಆರ್‌ಆರ್) ನಿರ್ಮಾಣಕ್ಕೆ ಸಂಬಂಧಿಸಿದ ಜಾಗತಿಕ ಟೆಂಡರ್ ಪ್ರಕ್ರಿಯೆ ಮರು ಸರ್ವೆಯು ವಿಳಂಬವಾಗಿದ್ದು ಮಾರ್ಚ್‌ಗೆ ಮುಂದೂಡಿಕೆಯಾಗಿದೆ.

ಹಲವಾರು ವರ್ಷಗಳಿಂದ ಈ ರಿಂಗ್ ರೋಡ್ ಯೋಜನೆ ನಿರ್ಮಾಣಕ್ಕೆ ಹಲವಾರು ಅಡೆ ತಡೆಗಳು ಎದುರಾಗಿದ್ದವು. ಆದರೆ, ಕಳೆದ ವರ್ಷದಲ್ಲಿ ಬಹುತೇಕ ಅಡ್ಡಿಗಳೆಲ್ಲವೂ ನಿವಾರಣೆಗೊಂಡಿದ್ದವು. ಅಲ್ಲದೆ, ಸರಕಾರದಿಂದಲೇ ಅನುದಾನ ನೀಡುವ ಭರವಸೆ ನೀಡಿದ್ದರಿಂದ 2019 ರ ಫೆಬ್ರವರಿಯ ಮೊದಲ ವಾರದಲ್ಲಿ ಟೆಂಡರ್ ಆಹ್ವಾನಕ್ಕೂ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಸೂಚನೆಯನ್ನೂ ನೀಡಿದ್ದರು. ಆದರೆ, ಮರು ಸರ್ವೆ ವರದಿ ಇನ್ನೂ ಅಂತಿಮವಾಗಿಲ್ಲದಿದ್ದರಿಂದ ಅದನ್ನು ಚಾಲನೆ ಮಾಡಲು ಮತ್ತಷ್ಟು ವಿಳಂಬವಾಗಿದೆ. ವರದಿಯು ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳ್ಳಲಿದ್ದು, ಮಾರ್ಚ್‌ನಲ್ಲಿ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅಂದಾಜಿಸಲಾಗಿದೆ.

ಒಟ್ಟು 65 ಕಿ.ಮೀ. ಉದ್ದದ ರಿಂಗ್ ರೋಡ್ ಮಾರ್ಗದಲ್ಲಿ ಕೆಲವೆಡೆ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಮಾರ್ಗ ಹಾದು ಹೋಗುವ ಯಲಹಂಕ ಬಳಿಯ ವೆಂಕಟಾಲ, ಹೆಬ್ಬುಗೋಡಿ ಹಾಗೂ ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಸ್ಥಳೀಯರ ವಿರೋಧದಿಂದ ಪೊಲೀಸ್ ಕಾವಲಿನಲ್ಲಿ ಸರ್ವೆ ನಡೆಸಲಾಗಿದೆ. ಇದು ಸೇರಿದಂತೆ ಮರಗಳ ಎಣಿಕೆ ಹಾಗೂ ಹಾಲಿ ಸ್ಥಿತಿಗತಿ ಕುರಿತು ಮಾಹಿತಿಯನ್ನು ಕಲೆ ಹಾಕಿದ್ದು, ಇದನ್ನಾಧರಿಸಿ ಡಿಪಿಆರ್ ಸಿದ್ಧಗೊಳ್ಳಲಿದೆ ಎಂದು ಮೂಲಗಳು ಹೇಳಿವೆ.

ಬಿಡಿಎ ಪರಿಷ್ಕೃತ ಡಿಪಿಆರ್ ಅನ್ನು ಪರಿಶೀಲಿಸಿದ ಬಳಿಕ ಸರಕಾರಕ್ಕೆ ಕಳುಹಿಸಿ, ಒಪ್ಪಿಗೆ ಪಡೆಯಬೇಕು. ಅನಂತರ ಬೃಹತ್ ಮಟ್ಟದ ಟೆಂಡರ್ ಆಗಿರುವುದರಿಂದ ಸಚಿವ ಸಂಪುಟ ಒಪ್ಪಿಗೆಯೂ ಪಡೆಯಬೇಕು. ಹೀಗಾಗಿ, ನಗರಾಭಿವೃದ್ಧಿ ಇಲಾಖೆಯಿಂದ ಪ್ರಸ್ತಾವನೆ ಸಂಪುಟ ಶಾಖೆಗೆ ರವಾನಿಸಬೇಕಾಗಿದೆ ಎಂದು ಹೇಳಲಾಗುತ್ತಿದೆ.

ಯೋಜನಾ ವೆಚ್ಚದಲ್ಲಿ ಏರಿಕೆ?: 2015ರ ದರ ಪಟ್ಟಿಯಂತೆ ಒಟ್ಟು ವೆಚ್ಚ 11,950 ಕೋಟಿ ರೂ. ಅಂದಾಜಿಸಲಾಗಿತ್ತು. ಕಳೆದ ವರ್ಷ ಸಂಪುಟ ಸಭೆಯ ತೀರ್ಮಾನದ ವೇಳೆ ವೆಚ್ಚವು 17,061 ಕೋಟಿ ರೂ.ಗೆ ಏರಿದೆ. ಈಗ ಪರಿಷ್ಕೃತ ಡಿಪಿಆರ್ ಸಿದ್ಧಗೊಳ್ಳುತ್ತಿದ್ದು, ವೆಚ್ಚದ ಮೊತ್ತ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳದಿದ್ದಲ್ಲಿ ವೆಚ್ಚವು 20 ಸಾವಿರ ಕೋಟಿ ರೂ. ಏರಿದರೂ ಅಚ್ಚರಿ ಪಡಬೇಕಿಲ್ಲ ಎಂಬುದಾಗಿ ತಜ್ಞರು ಅಂದಾಜಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X