ಅನಾರೋಗ್ಯದ ಹಿನ್ನೆಲೆಯಲ್ಲಿ ಸದನಕ್ಕೆ ಹಾಜರಾಗಿಲ್ಲ: ಶಾಸಕ ಡಾ.ನಾರಾಯಣಗೌಡ ಸ್ಪಷ್ಟನೆ

ಬೆಂಗಳೂರು, ಫೆ.6: ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಸದನಕ್ಕೆ ಹಾಜರಾಗುತ್ತಿಲ್ಲ ಎಂದು ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರಿಗೆ ಪತ್ರ ನೀಡಿ ಅನುಮತಿ ಪಡೆದಿದ್ದೇನೆ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೂ ವಿಚಾರ ತಿಳಿಸಿದ್ದೇನೆ ಎಂದು ಕೆ.ಆರ್.ಪೇಟೆ ಜೆಡಿಎಸ್ ಶಾಸಕ ಡಾ.ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ.
ಬುಧವಾರ ನಗರದಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸದನಕ್ಕೆ ಗೈರು ಹಾಜರಾಗುತ್ತಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನನ್ನ ದೇವರು ಎಂದರು.
Next Story





