ವೇಶ್ಯಾವಾಟಿಕೆ ನಡೆಸುತ್ತಿದ್ದ ಮಸಾಜ್ ಪಾರ್ಲರ್ ಮೇಲೆ ದಾಳಿ: ಇಬ್ಬರ ಬಂಧನ

ಮೈಸೂರು,ಫೆ.6: ಮೈಸೂರು ನಗರ ಸಿಸಿಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಫೆ.5ರಂದು ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂಬೂ ಬಜಾರ್ ರಸ್ತೆಯಲ್ಲಿರುವ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿ, ಮಸಾಜ್ ಮಾಡುವ ನೆಪದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವ್ಯಕ್ತಿಗಳಿಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ವೇಶ್ಯಾವಟಿಕೆ ನಡೆಸುತ್ತಿದ್ದ ಶಿವರಾಜ್ (28) ಮತ್ತು ಮಹದೇವ (32) ಎಂದು ಹೇಳಲಾಗಿದೆ. ಇವರನ್ನು ದಸ್ತಗಿರಿ ಮಾಡಿ, ವೇಶ್ಯಾವಾಟಿಕೆಯಿಂದ ಸಂಪಾದಿಸಿದ್ದ 12,570 ರೂ. ನಗದು ಹಣ, ವೇಶ್ಯಾವಾಟಿಕೆಗೆ ಬಳಕೆ ಮಾಡಿದ್ದ 05 ಮೊಬೈಲ್ ಫೋನ್‍ಗಳು ಮತ್ತು ಇತರೇ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ದಾಳಿಯಲ್ಲಿ ನೇಪಾಳ ಮೂಲದ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.
ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





