Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಲ್‌ಇಡಿ ಲೈಟ್ ಬಳಕೆಗೆ ಮಾತ್ರ ನಿಷೇಧ:...

ಎಲ್‌ಇಡಿ ಲೈಟ್ ಬಳಕೆಗೆ ಮಾತ್ರ ನಿಷೇಧ: ಪರ್ಸಿನ್ ಮೀನುಗಾರರ ಸಂಘ

ವಾರ್ತಾಭಾರತಿವಾರ್ತಾಭಾರತಿ7 Feb 2019 8:01 PM IST
share

ಉಡುಪಿ, ಫೆ.7: ಕರ್ನಾಟಕವೂ ಸೇರಿದಂತೆ ಕರಾವಳಿಯ ಆಳ ಸಮುದ್ರ ಮೀನುಗಾರಿಕೆಯಲ್ಲಿ ಬೆಳಕು ಮೀನುಗಾರಿಕೆಯನ್ನು (ಲೈಟ್ ಫಿಶಿಂಗ್) ನಿಷೇಧಿಸಿ ರಾಜ್ಯ ಉಚ್ಛ ನ್ಯಾಯಾಲಯ ಬುಧವಾರ ಹೊರಡಿಸಿದ ನಿಷೇಧ ಕೇವಲ ಎಲ್‌ಇಡಿ ಬೆಳಕನ್ನು ಬಳಸಿ ನಡೆಸುವ ಮೀನುಗಾರಿಕೆಗೆ ಸೀಮಿತವಾಗಿದೆ ಎಂದು ಅಖಿಲ ಕರ್ನಾಟಕ ಪರ್ಸೀನ್ ಮೀನುಗಾರರ ಸಂಘ ಪ್ರತಿಪಾದಿಸಿದೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಂಘದ ಅಧ್ಯಕ್ಷ ಗುರುದಾಸ ಬಂಗೇರ, ಬೆಳಕಿನ ಮೀನುಗಾರಿಕೆಗೆ ಅನುಮತಿ ನೀಡಿ ಕೇಂದ್ರ ಸರಕಾರ 2016ರ ಆಗಸ್ಟ್ 29ರಂದು ಹೊರಡಿಸಿ ಅಧಿಕೃತ ಆದೇಶದಲ್ಲಿ ಕೇವಲ ಎಲ್‌ಇಡಿ ಲೈಟ್ ಬಳಸಿ ನಡೆಯುವ ಮೀನುಗಾರಿಕೆಗೆ ಮಾತ್ರ ನ್ಯಾಯಾಲಯ ನಿಷೇಧ ಹೇರಿದೆ. ಈ ಆದೇಶದಲ್ಲಿ ತಿಳಿಸಿದ ಉಳಿದೆಲ್ಲಾ ಅಂಶಗಳು ಈಗಲೂ ಉಳಿದುಕೊಂಡಿದೆ ಎಂದರು.

ಕೇಂದ್ರ ಸರಕಾರ 2016ರ ಆ.29ರಂದು ಹೊರಡಿಸಿದ ಆದೇಶದಲ್ಲಿ ವಿಧಿಸಿರುವ ಎಲ್ಲಾ ಶರ್ತಗಳನ್ನು ನಾವು ಪಾಲಿಸುತಿದ್ದೇವೆ. ಕರಾವಳಿ ತೀರದಿಂದ 12 ನಾಟಿಕಲ್ ಮೈಲಿಗಿಂತ ಆಚೆ ನಾವು ಕೇವಲ ಮೇಲ್ಮೈ ಬೆಳಕನ್ನು ಉಪಯೋಗಿಸಿ ಮೀನುಗಾರಿಕೆ ನಡೆಸುತಿದ್ದೇವೆ. ಮರಿ ಮೀನುಗಳು ಬಲೆಗೆ ಬೀಳದಂತೆ ದೊಡ್ಡ ಕಣ್ಣಿನ ಬಲೆಗಳನ್ನೇ ಬಳಸುತಿದ್ದೇವೆ ಎಂದು ಅವರು ಹೇಳಿದರು.

ನ್ಯಾಯಾಲಯ ಫೆ.6ರಂದು ನೀಡಿದ ಆದೇಶದಲ್ಲಿ 2017ರ ಜ.10ರಂದು ಕೇಂದ್ರ ಸರಕಾರ ಹೊರಡಿಸಿದ ಆದೇಶದಲ್ಲಿ ಬೆಳಕಿನ ಮೀನುಗಾರಿಕೆಗೆ ಪರವಾನಿಗೆ ನೀಡಲು ಹಾಕಿದ ಎಲ್ಲಾ ಶರ್ತಗಳನ್ನು ಪಾಲಿಸುವವರಿಗೆ ಮೀನುಗಾರಿಕೆ ನಡೆಸಲು ಅರ್ಜಿದಾರರಿಗೆ ಅವಕಾಶ ಮಾಡಿಕೊಡಬೇಕೆಂದು ತಿಳಿಸಿದೆ ಎಂದು ಗುರುದಾಸ ಬಂಗೇರ ವಿವರಿಸಿದರು.

ಲೈಟ್ ಫಿಶಿಂಗ್ ನಡೆಸುವಾಗ ನಾವು ಯಾವುದೇ ರೀತಿಯ ಎಲ್‌ಇಡಿ ಲೈಟ್‌ಗಳನ್ನು ಬಳಸುತ್ತಿಲ್ಲ. ನಾವು ನಿಷೇಧ ಹೇರದ ಮೆಟಲ್ ಹೆಲಾಯ್ಡಿ ಬೆಳಕು ಗಳನ್ನು ಮಾತ್ರ ಬಳಸುತಿದ್ದೇವೆ. ನಾವು ನೆಲದ ಮೇಲೆ ಎಲ್‌ಇಡಿ ಲೈಟ್, ನೀರಿನೊಳಗೆ ಎಲ್‌ಇಡಿ ಲೈಟ್‌ಗಳನ್ನು ಎಂದೂ ಬಳಸಿಲ್ಲ. ಹೀಗಾಗಿ ಈಗ ನಮಗೆ ನಮ್ಮ ಮೀನುಗಾರಿಕೆಯನ್ನು ಮುಂದುವರಿಸಲು ಅವಕಾಶ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದರು.

2016ರಲ್ಲಿ ಕೇಂದ್ರ ಸರಕಾರವೇ ನೀಡಿದ ಆದೇಶಾನುಸಾರ ನಾವು ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡಗಳ ನೂರಾರು ಮಂದಿ ಮೀನುಗಾರರು ಕೋಟ್ಯಾಂತರ ರೂ. ಬಂಡವಾಳ ಹೂಡಿ ಯಾಂತ್ರಿಕೃತ ದೋಣಿ ಖರೀದಿಸಿ ಬೆಳಕಿನ ಮೀನುಗಾರಿಕೆ ನಡೆಸುತಿದ್ದೇವೆ. ಕೇಂದ್ರ ಸರಕಾರದ ಈ ನಿರ್ಧಾರದಿಂದ ಮೀನುಗಾರಿಕೆಯನ್ನೇ ಅವಲಂಬಿಸಿರುವ ಸಾವಿರಾರು ಕುಟುಂಬಗಳು ಇದರಿಂದ ಬೀದಿಗೆ ಬೀಳಲಿವೆ ಎಂದು ಅವರು ಹೇಳಿದರು.

ಆದುದರಿಂದ ಕೇಂದ್ರ ಸರಕಾರದ 2016ರ ಆ.29, 2017ರ ಜ.10, 2018ರ ಡಿ.21, 2019ರ ಜ.21 ಹಾಗೂ 2019ರ ಫೆ.6ರ ಆದೇಶಗಳಂತೆ ನಮಗೆ ಬೆಳಕು ಮೀನುಗಾರಿಕೆ ನಡೆಸಲು ಅನುಮತಿ ನೀಡುವಂತೆ ನಾವು ನ್ಯಾಯಾಲಯ ಹಾಗೂ ಕೇಂದ್ರ ಸರಕಾರಗಳಿಗೆ ಮನವಿ ಮಾಡುತ್ತಿರುವುದಾಗಿ ಗುರುದಾಸ ಬಂಗೇರ ನುಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ನವೀನ್ ಬಂಗೇರ, ರಮೇಶ್ ಕುಂದರ್, ಯಶೋಧರ ಅಮೀನ್, ಕೃಷ್ಣ ಎಸ್. ಸುವರ್ಣ, ನವೀನ್ ಕೋಟ್ಯಾನ್, ಚಂದ್ರಕಾಂತ್, ಸಂತೋಷ್ ಸಾಲ್ಯಾನ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X