ಅಪ್ರಾಪ್ತ ಬಾಲಕರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಚಂದ್ರ ಹೆಮ್ಮಾಡಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ
ಉಡುಪಿ, ಫೆ.7: ಅಪ್ರಾಪ್ತ ಶಾಲಾ ಬಾಲಕರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಪ್ರಕರಣದ ಆರೋಪಿ ಕುಂದಾಪುರದ ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ (40)ಯ ನ್ಯಾಯಾಂಗ ಬಂಧನ ಹಾಗೂ ಬಾಡಿ ವಾರೆಂಟ್ ಅವಧಿಯನ್ನು ವಿಸ್ತರಿಸಿ ಉಡುಪಿ ಜಿಲ್ಲಾ ಸತ್ರ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ಗುರುವಾರ ಆದೇಶ ನೀಡಿದೆ.
ಪೊಲೀಸರು ಈ ಪ್ರಕರಣದಲ್ಲಿ ಆರೋಪಿ ಚಂದ್ರ ಹೆಮ್ಮಾಡಿ ವಿರುದ್ಧ 21 ಕೇಸುಗಳಲ್ಲಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಇಂದು ಸಲ್ಲಿಸಿದರು. ಆರೋಪಿ ಹೆಮ್ಮಾಡಿಯನ್ನು ಹಿರಿಯಡ್ಕ ಸಬ್‌ಜೈಲಿನಿಂದ ಪೊಲೀಸ್ ಬಂದೋಬಸ್ತ್‌ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರಾದ ಸಿ.ಎಂ. ಜೋಶಿ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದರು.
ಬೈಂದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಹಾಗೂ ಉಳಿದ 20 ಪ್ರಕರಣದಲ್ಲಿ ಬಾಡಿ ವಾರೆಂಟ್ ಅವಧಿಯನ್ನು ವಿಸ್ತರಿಸಲಾಗಿದೆ. ಮುಂದಿನ ವಿಚಾರಣೆಯ್ನು ಮಾ.27ಕ್ಕೆ ನಿಗದಿ ಪಡಿಸಲಾಗಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಹಾಗೂ ಉಳಿದ 20 ಪ್ರಕರಣದಲ್ಲಿ ಬಾಡಿ ವಾರೆಂಟ್ ಅವಧಿಯನ್ನು ವಿಸ್ತರಿಸಲಾಗಿದೆ. ಮುಂದಿನ ವಿಚಾರಣೆಯನ್ನು ಮಾ.27ಕ್ಕೆ ನಿಗದಿ ಪಡಿಸಲಾಗಿದೆ. ಜಿಲ್ಲಾ ಸರಕಾರಿ ಅಭಿಯೋಜಕ ವಿಜಯ ವಾಸು ಪೂಜಾರಿ ಸರಕಾರದ ಪರವಾಗಿ ವಾದಿಸಿದ್ದರು. ಚಂದ್ರ ಕೆ. ಹೆಮ್ಮಾಡಿ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ನ. 10ರಂದು ಮೊದಲ ಪ್ರಕರಣ ದಾಖಲಾಗಿತ್ತು. ಆ ಬಳಿಕ ಬೈಂದೂರು ಠಾಣೆ ಯೊಂದರಲ್ಲೇ 16, ಕೊಲ್ಲೂರು ಠಾಣೆಯಲ್ಲಿ 1, ಗಂಗೊಳ್ಳಿ ಠಾಣೆಯಲ್ಲಿ 3 ಹಾಗೂ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ 1 ಸಹಿತ ಒಟ್ಟು 21 ಪ್ರಕರಣಗಳು ದಾಖಲಾಗಿವೆ.
ಜಿಲ್ಲಾ ಸರಕಾರಿ ಅಭಿಯೋಜಕ ವಿಜಯ ವಾಸು ಪೂಜಾರಿ ಸರಕಾರದ ಪರವಾಗಿ ವಾದಿಸಿದ್ದರು. ಚಂದ್ರ ಕೆ. ಹೆಮ್ಮಾಡಿ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ನ. 10ರಂದು ಮೊದಲ ಪ್ರಕರಣ ದಾಖಲಾಗಿತ್ತು. ಆ ಬಳಿಕ ಬೈಂದೂರು ಠಾಣೆ ಯೊಂದರಲ್ಲೇ 16, ಕೊಲ್ಲೂರು ಠಾಣೆಯಲ್ಲಿ 1, ಗಂಗೊಳ್ಳಿ ಠಾಣೆಯಲ್ಲಿ 3 ಹಾಗೂ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ 1 ಸಹಿತ ಒಟ್ಟು 21 ಪ್ರಕರಣಗಳು ದಾಖಲಾಗಿವೆ.







