ಫೆ.9: ಜಪ್ಪಿನಮೊಗರು ಜಯ-ವಿಜಯ ಜೋಡುಕರೆ ಕಂಬಳ
ಮಂಗಳೂರು, ಫೆ. 7: ಜಪ್ಪಿನಮೊಗರು ಜಯ-ವಿಜಯ ಜೋಡುಕರೆಯ ಕಂಬಳ ಫೆ. 9ರಂದು ಸಮಿತಿಯ ಅಧ್ಯಕ್ಷ ಅನಿಲ್ ಶೆಟ್ಟಿ ಅಧ್ಯಕ್ಷ ತೆಯಲ್ಲಿ ನಡೆಯಲಿದೆ ಎಂದು ಸಮಿತಿಯ ಸದಸ್ಯ ನಾಗೇಂದ್ರ ಕುಮಾರ್ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.
ಈ ಬಾರಿಯ ಕಂಬಳದಲ್ಲಿ 125 ಜೋಡಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ನಾಗೇಂದ್ರ ಕುಮಾರ್ ತಿಳಿಸಿದ್ದಾರೆ. ಬೆಳಗ್ಗೆ 8.30ಕ್ಕೆ ಕಂಬಳದ ಉದ್ಘಾಟನೆ ನಡೆದು ಆರು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಸಂಜೆ 7 ಗಂಟೆಗೆ ಸಮಿತಿಯ ಗೌರವಾಧ್ಯಕ್ಷ ಕೃಷ್ಣ ಜೆ. ಪಾಲೆಮಾರ್ ಅಧ್ಯಕ್ಷ ತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ನಾಗೇಂದ್ರ ತಿಳಿಸಿದ್ದಾರೆ.
ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್,ಸಂಸದ ನಳಿನ್ ಕುಮಾರ್ ಕಟೀಲ್ , ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕರಾದ ವೇದವ್ಯಾಸ ಕಾಮತ್, ಕೋಟ ಶ್ರೀ ನಿವಾಸ ಪೂಜಾರಿ, ಐವನ್ ಡಿ ಸೋಜ, ಮೊದಲಾದ ವರು ಭಾಗವಹಿಸಲಿದ್ದಾರೆ ಎಂದು ನಾಗೇಂದ್ರ ಕುಮಾರ್ ತಿಳಿಸಿದ್ದಾರೆ.
ಸುದ್ದಿ ಗೋಷ್ಠಿ ಯಲ್ಲಿ ಸಮಿತಿಯ ಅಧ್ಯಕ್ಷ ಅನಿಲ್ ಶೆಟ್ಟಿ, ಸದಸ್ಯರಾದ ಶ್ರೀ ಧರ ಶೆಟ್ಟಿ, ಭಾಸ್ಕರ ಚಂದ್ರ ಶೆಟ್ಟಿ,ಸುಭಾಷ್ ವಿ.ಅಡಪ್ಪ,ಶಶಿಕಾಂತ್ ಶೆಟ್ಟಿ, ಗಣೇಶ್ ಶೆಟ್ಟಿ ಮೊದಲಾದ ವರು ಉಪಸ್ಥಿತರಿದ್ದರು.







