ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನದಿಂದ ಶಾಸಕ ಉಮೇಶ್ ಜಾಧವ್ ವಜಾ

ಬೆಂಗಳೂರು,ಫೆ.7: ದಿಢೀರ್ ಬೆಳವಣಿಗೆಯೊಂದರಲ್ಲಿ ಅತೃಪ್ತ ಶಾಸಕರ ಬಣದಲ್ಲಿ ಗುರುತಿಸಿಕೊಂಡಿದ್ದ ಶಾಸಕ ಉಮೇಶ್ ಜಾಧವ್ ಅವರನ್ನು ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಈ ಮಧ್ಯೆ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಯಚೂರು ಜಿಲ್ಲೆಯ ಮಸ್ಲಿನ್ ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.
ಶಾಸಕ ಬಸವನಗೌಡ ದದ್ದಲ್ ಅವರನ್ನು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಜೊತೆಗೆ ಪರಿಷತ್ ಸದಸ್ಯರಾದ ಎ.ಎಂ.ಗೋಪಾಲಸ್ವಾಮಿ ಅವರನ್ನು ಜಲಸಂಪನ್ಮೂಲ ಸಚಿವರ ಸಂಸದೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
Next Story





