Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ರಾಜ್ಯ ಬಜೆಟ್‌ಗೆ ಸ್ಥಳೀಯ ನಾಯಕರ...

ಉಡುಪಿ: ರಾಜ್ಯ ಬಜೆಟ್‌ಗೆ ಸ್ಥಳೀಯ ನಾಯಕರ ಪ್ರತಿಕ್ರಿಯೆಗಳು

ವಾರ್ತಾಭಾರತಿವಾರ್ತಾಭಾರತಿ8 Feb 2019 7:42 PM IST
share

ನಾಡಿನ ಸರ್ವರ ಹಿತಕಾಯುವ ಬಜೆಟ್
ಉಡುಪಿ, ಫೆ. 8: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಮಂಡಿಸಿದ ನಮ್ಮ ಸರಕಾರದ ಬಜೆಟ್ ನಾಡಿನ ಎಲ್ಲಾ ಕ್ಷೇತ್ರಗಳ, ಎಲ್ಲಾ ಜನಾಂಗಗಳ ಸಮಗ್ರ ಹಿತ ಕಾಯ್ದುಕೊಳ್ಳಲು ಮತ್ತು ರಾಜ್ಯದ ಅಭಿವೃದ್ಧಿಯ ಗತಿಯನ್ನು ಮತ್ತಷ್ಟು ಹೆಚ್ಚಿಸಲು ಪೂರಕವಾಗಿದೆ.
-ಡಾ.ಜಯಮಾಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ.

ಬೋಗಸ್ ಬಜೆಟ್
ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿದ ಬಜೆಟ್ ಕರಾವಳಿ ಜಿಲ್ಲೆಗಳಿಗೆ ತುಂಬಾ ನಿರಾಶಾದಾಯಕ ಬಜೆಟ್. ಯಾವುದೇ ಹೊಸ ಯೋಜನೆ ಘೋಷಿಸಿಲ್ಲ. ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ 50 ಕೋಟಿ ರೂ. ಅನುದಾನಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮನವಿ ನೀಡಲಾಗಿತ್ತು. ಆದರೆ ಬಜೆಟ್‌ನಲ್ಲಿ ಈ ಬಗ್ಗೆ ಯಾವುದೇ ಅನುದಾನ ನೀಡದೇ ಇರುವುದು ಬಹಳ ಬೇಸರ ತಂದಿದೆ. ಬಜೆಟ್‌ಗೆ ಉತ್ತರದ ಸಂದರ್ಭದಲ್ಲಾದರೂ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಅನುದಾನ ನೀಡಬೇಕು ಎಂದು ಆಗ್ರಹಿಸುತ್ತೇವೆ. ಮಲ್ಪೆಯ ಮೀನುಗಾರಿಕಾ ಜಟ್ಟಿಗೆ 15 ಕೋಟಿ ಮತ್ತು ಕೆರೆಗಳ ಅಭಿವೃದ್ಧಿಗೆ 40 ಕೋಟಿ ರೂ. ಅನುದಾನ ಮೀಸಲಿಟ್ಟಿರುವುದು ಸ್ವಾಗತಾರ್ಹ.
-ಕೆ ರಘುಪತಿ ಭಟ್, ಉಡುಪಿ ಶಾಸಕರು.

ಜನಪರ ಹಾಗೂ ಅಭಿವೃದ್ದಿ ಪರ ಬಜೆಟ್
ಜನಪರ ಹಾಗೂ ಅಭಿವೃದ್ದಿ ಪರ ಬಜೆಟ್ ಕೃಷಿ, ಕೃಷಿ ವಲಯಕ್ಕೆ ಸಂಬಂಧಿಸಿದ ಯೋಜನೆಗಳಿಗೆ ಮತ್ತು ಆರೋಗ್ಯ ವಲಯಕ್ಕೆ ರಾಜ್ಯ ಬಜೆಟ್‌ನಲ್ಲಿ ಹೆಚ್ಚಿನ ಮಹತ್ವ ನೀಡಲಾಗಿದೆ. ಅದೇ ರೀತಿ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ತುಳು, ಕೊಡವ, ಕೊಂಕಣಿ ಭಾಷೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಪ್ರಸ್ತಾವನೆ ಒಳ್ಳೆಯ ಬೆಳವಣಿಗೆ. ಒಟ್ಟಿನಲ್ಲಿ ಇದೊಂದು ಜನಪರವಾದ ಮತ್ತು ಅಭಿವೃದ್ದಿ ಪರವಾದ ಉತ್ತಮ ಬಜೆಟ್.
-ಜನಾರ್ದನ ತೋನ್ಸೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ.

ಗ್ರಾಮೀಣ ಅಭಿವೃದ್ಧಿ ಚಿಂತನೆಯುಳ್ಳ ರೈತ ಬಜೆಟ್
ಕೃಷಿ, ಆರೋಗ್ಯ, ಕ್ರೀಡೆ, ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಬಜೆಟ್ ನಲ್ಲಿ ಹೆಚ್ಚು ಒತ್ತು ನೀಡಲಾಗಿದೆ. ಉದ್ಯೋಗ ಸೃಷ್ಟಿ ಹಾಗೂ ಕೈಗಾರಿಕಾ ಅಭಿವೃದ್ದಿ ಗೆ ಯೋಜನೆ ರೂಪಿಸಲಾಗಿದೆ. 4 ಹೊಸ ತಾಲೂಕುಗಳ ಘೋಷಣೆಯೊಂದಿಗೆ ಹಾಲಿ ಯೋಜನೆಗಳಿಗೆ ಅನುದಾನ ಹೆಚ್ಚಳಗೊಳಿಸಿ ಬಲ ತುಂಬಲು ಪ್ರಯತ್ನಿಸ ಲಾಗಿದೆ. ಕೃಷಿ ಉತ್ಪನ್ನ ಸಂಗ್ರಹ ಉಗ್ರಾಣ, ಸಿರಿಧಾನ್ಯ ಬೆಳೆಗಾರರಿಗೆ ಹಾಗೂ ಹಾಲು ಉತ್ಪಾದಕರಿಗೆ ಬೆಂಬಲ ಬೆಲೆ, ನಗರ ಪ್ರದೇಶದ ಜನತೆ ಎದುರಿಸು ತ್ತಿರುವ ಪಾರ್ಕಿಂಗ್ ಸಮಸ್ಯೆಗೆ ಪರಿಹಾರವಾಗಿ ಪಾರ್ಕಿಂಗ್ ನಿಯಮ ಹಾಗೂ ಅನುಷ್ಠಾನ ಯೋಜನಾ ನೀತಿ ಜಾರಿ ಶ್ಲಾಘನೀಯ. ಕರಾವಳಿ ಅಭಿವೃದ್ದಿ ಪ್ರಾಧಿಕಾರಕ್ಕೆ ಅನುದಾನ ಬಿಡುಗಡೆ ರಾಜ್ಯದ ಅಭಿವೃದ್ದಿಗೆ ಪೂರಕ ವಾತಾವಣ ಕಲ್ಪಿಸಿದೆ.
-ಭಾಸ್ಕರರಾವ್ ಕಿದಿಯೂರು, ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ.

ನೈಜ ಕಾಳಜಿಯ ಬಜೆಟ್
ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಮಂಡಿಸಿದ ರಾಜ್ಯ ಬಜೆಟ್ ರೈತರ, ಮಧ್ಯಮ ವರ್ಗದವರ, ಬಡವರ, ಹೀಗೆ ಎಲ್ಲಾ ವರ್ಗದವರ ಹಾಗೂ ವಿಶೇಷ ವಾಗಿ ಜನಸಾಮಾನ್ಯರ ಬಗ್ಗೆ ನೈಜ ಕಾಳಜಿಯುಳ್ಳ ಐತಿಹಾಸಿಕ ಬಜೆಟ್.

ಕರಾವಳಿ ಹಾಗೂ ಮಲೆನಾಡಿಗೆ ಮುಖ್ಯಮಂತ್ರಿಗಳು ಈ ಬಜೆಟ್‌ನಲ್ಲಿ ಅಭೂತ ಪೂರ್ವ ಕೊಡುಗೆಗಳನ್ನು ನೀಡಿದ್ದಾರೆ. ಮಲ್ಪೆಯಲ್ಲಿ ಜಟ್ಟಿ ಹಾಗೂ ತ್ಯಾಜ್ಯ ನಿರ್ವಹಣಾ ಘಟಕಕ್ಕೆ 15 ಕೋಟಿ, ಕಾರ್ಕಳದಲ್ಲಿ 1500 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಲು ಎಣ್ಣೆಹೊಳೆ ಯೋಜನೆ, ಭತ್ತ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 7500 ರೂಪಾಯಿ, ಆಶಾ ಕಾರ್ಯಕತೆರ್ಯರ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ, ಬಾಣಂತಿ ಯರಿಗೆ ಮಾಶಾಸನ, ಹಿರಿಯ ನಾಗರಿಕರ ಮಾಶಾಸನ ಹೆಚ್ಚಳ, ಉದ್ಯೋಗ ಸೃಷ್ಟಿಗೆ ಉತ್ತೇಜನ, ಅರೋಗ್ಯ ಸೇವೆಗೆ ಒತ್ತು, ಹಾಲಿಗೆ ಪ್ರೋತ್ಸಾಹ ಧನ ಹೆಚ್ಚಳ ಮುಂತಾದ ಹಲವು ಯೋಜನೆಗಳನ್ನು ಈ ಬಜೆಟ್‌ನಲ್ಲಿ ನೀಡಿದ್ದಾರೆ.
-ಯೋಗೀಶ್ ವಿ.ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಉಡುಪಿ.

ಅತ್ಯುತ್ತಮ ಬಜೆಟ್
ಕುಮಾರಸ್ವಾಮಿ ಅವರು ಮಂಡಿಸಿದ ಈ ವರ್ಷದ ಬಜೆಟ್ ಎಲ್ಲಾ ವರ್ಗದ ಜನರ ಸರ್ವತೋಮುಖ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡುವ ಅತ್ಯುತ್ತಮ ಬಜೆಟ್. ಕಾರ್ಮಿಕರು, ರೈತರು, ಮಹಿಳೆಯರು, ಮೀನುಗಾರರು ಹೀಗೆ ವರ್ಗಗಳ ಹಿತವನ್ನು ಮುಖ್ಯಮಂತ್ರಿಗಳು ಕಾಪಾಡಿದ್ದಾರೆ.
-ಜಯಕುಮಾರ್ ಪರ್ಕಳ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X