Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೆನಪುಗಳನ್ನು ಕಟ್ಟಿಕೊಡುವ ಶಕ್ತಿಶಾಲಿ...

ನೆನಪುಗಳನ್ನು ಕಟ್ಟಿಕೊಡುವ ಶಕ್ತಿಶಾಲಿ ಮಾಧ್ಯಮ ಸಿನಿಮಾ: ಜೋಗಿ

ವಾರ್ತಾಭಾರತಿವಾರ್ತಾಭಾರತಿ8 Feb 2019 9:57 PM IST
share
ನೆನಪುಗಳನ್ನು ಕಟ್ಟಿಕೊಡುವ ಶಕ್ತಿಶಾಲಿ ಮಾಧ್ಯಮ ಸಿನಿಮಾ: ಜೋಗಿ

ಉಡುಪಿ, ಫೆ.8: ವಿಷ್ಯುವಲ್ ಮೀಡಿಯಾಗಳಲ್ಲಿ ಸಿನಿಮಾದ ಜಗತ್ತೇ ಬೇರೆ ಇದೆ. ನೆನಪುಗಳನ್ನು ನಿರಂತರವಾಗಿ ಕಟ್ಟಿಕೊಂಡುವ ಶಕ್ತಿಶಾಲಿ ಮಾಧ್ಯಮವೇ ಸಿನಿಮಾ ಎಂದು ಚಿತ್ರಕಥೆ, ಸಂಭಾಷಣೆಕಾರ ಹಾಗೂ ಹಿರಿಯ ಪತ್ರಕರ್ತ ಗಿರೀಶ್ ರಾವ್ ಹತ್ವಾರ್ (ಜೋಗಿ) ಹೇಳಿದ್ದಾರೆ.

ಉಡುಪಿ ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಿದ್ದ ಒಂದು ದಿನದ ಚಲನಚಿತ್ರ ಕುರಿತ ವಿಚಾರ ಸಂಕಿರಣ‘ಕ್ಲಾಪ್‌ಬೋರ್ಡ್ ಆ್ಯಂಡ್ ಬಿಯಾಂಡ್’ ವನ್ನು ಉದ್ಘಾಟಿಸಿ ‘ಸಿನಿಮಾ ಎಂಬ ಔಟ್‌ಡೇಟೆಡ್ ಮಾಧ್ಯಮ’ ಎಂಬ ವಿಷಯದ ಕುರಿತು ಮಾತನಾಡುತಿದ್ದರು.

ಚಿಕ್ಕಂದಿನಿಂದಲೂ ನಾವೆಲ್ಲರೂ ಸಿನಿಮಾಗಳನ್ನು ನೋಡುತ್ತಾ ಬೆಳೆದವರು. ಸಿನಿಮಾ ನಮ್ಮ ಹಲವು ನೆನಪುಗಳು ಮರುಕಳಿಸುವಂತೆ ಮಾಡಿದೆ. ಸಿನಿಮಾದ ದೊಡ್ಡ ಕೊಡುಗೆ ಲಯವನ್ನು ಕೊಟ್ಟಿದ್ದು. ಜಯಂತ್ ಕಾಯ್ಕಿಣಿಯವರ ಕವನ (ಹಾಡು)ಗಳನ್ನು ಓದುವಂತೆ ಮಾಡಿರುವುದು ಈ ಸಿನಿಮಾಗಳೇ ಎಂದು ಸಿನಿಮಾ ಪತ್ರಕರ್ತರಾದ ಜೋಗಿ ನುಡಿದರು.

ಸಿನಿಮಾ ಸೃಷ್ಟಿಸುವ ಮಾಯಾಲೋಕ ಎಲ್ಲರನ್ನೂ ಅದರತ್ತ ಸೆಳೆಯುವಂತೆ ಮಾಡುತ್ತದೆ. ನಟರು ಸುಂದರವಾಗಿರಲೇ ಬೇಕಾಗಿಲ್ಲ ಎಂಬುದನ್ನು ಇತ್ತೀಚಿನ ಕೆಲವು ಚಿತ್ರಗಳು ತೋರಿಸಿಕೊಟ್ಟಿವೆ.ರಂಜನೆ ಸಿನಿಮಾದ ಮುಖ್ಯ ಉದ್ದೇಶ. ಹಲವು ವಿಭಾಗಗಳ ಚಿಂತನೆಗಳು ಸೇರಿ ಸಿನಿಮಾ ಆಗುತ್ತದೆ ಎಂದರು.

ಪ್ರಖರ ಬೆಳಕಿನಲ್ಲಿ ತಯಾರಾಗುವ ಸಿನಿಮಾವನ್ನು ಕತ್ತಲಲ್ಲಿ ಕುಳಿತು ನೋಡುತ್ತೇವೆ. ಹಲವು ಸಂಕೇತಗಳನ್ನು ಈ ಸಿನಿಮಾ ನೀಡಿದೆ. ನಮ್ಮ ಪ್ರಜ್ಞೆಯನ್ನು ಸಹ ಅದು ರೂಪಿಸುತ್ತಾ ಬಂದಿದೆ. ಆದರೂ ಸಹ ಸಿನಿಮಾ ಇಂದಿನ ಮಾಧ್ಯಮವಾಗಿ ಔಟ್‌ಡೇಟೆಡ್ ಎನಿಸಿಕೊಳ್ಳುತ್ತದೆ ಎಂದು ಅವರು ಹೇಳಿದರು.

ಕಳೆದ ಸುಮಾರು ಒಂದು ಶತಮಾನದಲ್ಲಿ ಸಿನಿಮಾ ಸಾಕಷ್ಟು ಬದಲಾಗಿದೆ. ಆಗ ಮಾಡುತಿದ್ದಂತೆ ಈಗ ಕಥೆ ಬರೆಯುತ್ತಿಲ್ಲ, ಈಗ ಸಿನಿಮಾ ಬರೆಯುತ್ತೇವೆ. ಸಿನಿಮಾವನ್ನು ಕೆಮರಾದ ಮೂಲಕ ಬರೆಯಲಾಗುತ್ತಿದೆ. ಇಂದು ಬರುವ ಸಿನಿಮಾಗಳನ್ನು ಸಿನಿಮಾ ಭಾಷೆಯಲ್ಲಿ ಬರೆಯಲಾಗುತ್ತದೆ. ಅಂದು ಅಕ್ಷರದಲ್ಲಿ ಬರೆಯುತಿದ್ದುದನ್ನು ಇಂದು ಕೆಮರಾದಲ್ಲಿ ಬರೆಯಲಾಗುತ್ತದೆ. ಹೀಗಾಗಿ ಸಿನಿಮಾ ಇಂದು ಔಟ್‌ಡೇಟೆಡ್ ಆಗಿದೆ ಎಂದರು.

ಸಿನಿಮಾ ಬೆಳೆದು ಬಂದಾಗ ಇದ್ದ ಹಲವು ವಿಭಾಗಗಳನ್ನು ಕಳೆದುಕೊಂಡು ಇಂದು ಸಿನಿಮಾ ಕೆಮರಾದಲ್ಲಿ ಸೃಷ್ಟಿಗೊಳ್ಳುತ್ತಿದೆ. ಹೀಗೆ ಸಿನಿಮಾದಲ್ಲಿ ದೊಡ್ಡ ಬದಲಾವಣೆಯಾಗಿದೆ. ಅದನ್ನು ಮಾಡುವ ವಿಧಾನ ಔಟ್‌ಡೇಟೆಡ್ ಆಗಿದೆ ಎಂದು ಜೋಗಿ ಹೇಳಿದರು.

ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಜಿ.ವಿಜಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಎಂಜಿಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಾಲತಿ ದೇವಿ, ಕಾಲೇಜಿನ ಐಕ್ಯೂಎಸಿ ಸಂಯೋಜಕ ಅರುಣ್‌ಕುಮಾರ್ ಉಪಸ್ಥಿತರಿದ್ದರು.

ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಮಂಜುನಾಥ ಕಾಮತ್ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರೆ, ವಿದ್ಯಾರ್ಥಿನಿ ಸೌಜನ್ಯ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ, ಜಸ್ಟಿನ್ ಡಿಸಿಲ್ವ ವಂದಿಸಿದರು.
ಬಳಿಕ ವಿವಿಧ ವಿಷಯಗಳ ಕುರಿತಂತೆ ಉಪನ್ಯಾಸ ಹಾಗೂ ಸಂವಾದ ನಡೆದವು. ಬಿ.ಎ.ಸಂವರ್ತ ಸಾಹಿಲ್, ನಟ-ನಿರ್ದೇಶಕ ರಾಜ್ ಬಿ.ಶೆಟ್ಟಿ ಉಪನ್ಯಾಸ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X