ಫೆ.9: ಮುಖ್ಯಮಂತ್ರಿ ಕುಮಾರಸ್ವಾಮಿ ದ.ಕ.ಜಿಲ್ಲಾ ಪ್ರವಾಸ

ಮಂಗಳೂರು, ಫೆ. 8: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಫೆ.9ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಗ್ಗೆ ರಸ್ತೆ ಮೂಲಕ ಶೃಂಗೇರಿಯಿಂದ ಧರ್ಮಸ್ಥಳಕ್ಕೆ ಆಗಮಿಸಿ ಪೂ.11ಕ್ಕೆ ಧರ್ಮಸ್ಥಳದ ಅಮೃತ ವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ ಮಹೋತ್ಸವ-2019ರ ಅಂಗವಾಗಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಚತುಷ್ಪಥ ರಸ್ತೆಯ ಪ್ರಥಮ ಹಂತದ ಉದ್ಘಾಟನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ರಾಜ್ಯ ಸರಕಾರದೊಂದಿಗೆ ಕೆರೆ ಸಂಜೀವಿನಿ ಕಾರ್ಯಕ್ರಮದ ಒಡಂಬಡಿಕೆಯಲ್ಲಿ ಪಾಲ್ಗೊಳ್ಳುವರು.
ಅಪರಾಹ್ನ 1:30ಕ್ಕೆ ಧರ್ಮಸ್ಥಳದಿಂದ ಮಂಗಳೂರಿಗೆ ರಸ್ತೆ ಮೂಲಕ ಆಗಮಿಸಿ 3 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.
Next Story





